ಯೆರೆಮೀಯ 44:13 - ಪರಿಶುದ್ದ ಬೈಬಲ್13 ಈಜಿಪ್ಟಿನಲ್ಲಿ ವಾಸಿಸಲು ಹೋದ ಜನರನ್ನು ನಾನು ದಂಡಿಸುವೆನು. ಅವರನ್ನು ದಂಡಿಸಲು ನಾನು ಖಡ್ಗಗಳನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಗಳನ್ನು ಬಳಸುವೆನು. ನಾನು ಜೆರುಸಲೇಮ್ ನಗರವನ್ನು ದಂಡಿಸಿದಂತೆಯೇ ಅವರನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಯೆರೂಸಲೇಮಿನವರನ್ನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಜೆರುಸಲೇಮಿನವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸಿದಂತೆ ಈಜಿಪ್ಟಿನಲ್ಲಿ ವಾಸಿಸುವವರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಯೆರೂಸಲೇವಿುನವರನ್ನು ಖಡ್ಗಕ್ಷಾಮವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಈಜಿಪ್ಟ್ ದೇಶದಲ್ಲಿ ವಾಸಮಾಡುವವರನ್ನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿ |
“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’