Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:15 - ಪರಿಶುದ್ದ ಬೈಬಲ್‌

15 ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಅನೇಕ ಯೆಹೂದಿ ಸ್ತ್ರೀಯರು ಬೇರೆ ದೇವರುಗಳಿಗೆ ನೈವೇದ್ಯಗಳನ್ನು ಅರ್ಪಿಸುತ್ತಿದ್ದರು. ಅವರ ಗಂಡಂದಿರಿಗೆ ಅದು ಗೊತ್ತಿತ್ತು. ಆದರೆ ಅವರು ಅದನ್ನು ತಡೆಯಲಿಲ್ಲ. ಯೆಹೂದದ ಜನರ ಒಂದು ದೊಡ್ಡ ಗುಂಪು ಸೇರಿತ್ತು. ಅವರು ಈಜಿಪ್ಟಿನ ದಕ್ಷಿಣಭಾಗದಲ್ಲಿ ವಾಸಿಸುವ ಯೆಹೂದಿಗಳಾಗಿದ್ದರು. ಅನ್ಯದೇವರುಗಳಿಗೆ ನೈವೇದ್ಯವನ್ನು ಅರ್ಪಿಸುತ್ತಿದ್ದ ಸ್ತ್ರೀಯರ ಗಂಡಂದಿರು ಯೆರೆಮೀಯನಿಗೆ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ” ಹೀಗೆ ಹೇಳಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಾರತಿ ಎತ್ತುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲೆ ದೊಡ್ಡ ಗುಂಪಾಗಿ ನಿಂತಿದ್ದ ಹೆಂಗಸರು, ಹಾಗೂ ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದ ಎಲ್ಲ ಜನರು ಯೆರೆಮೀಯನಿಗೆ ಹೀಗೆಂದು ಉತ್ತರಕೊಟ್ಟರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಐಗುಪ್ತದಲ್ಲಿಯೂ ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ತಮ್ಮ ಹೆಂಡತಿಯರು ಅನ್ಯ ದೇವತೆಗಳಿಗೆ ಧೂಪ ಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:15
14 ತಿಳಿವುಗಳ ಹೋಲಿಕೆ  

ದುಷ್ಟರಿಗೆ ದಂಡನೆ ಖಂಡಿತ. ಶಿಷ್ಟರಿಗೆ ಬಿಡುಗಡೆ ನಿಶ್ಚಯ.


“ಇಕ್ಕಟ್ಟಾದ ಬಾಗಿಲಿನ ಮೂಲಕ ಪರಲೋಕರಾಜ್ಯವನ್ನು ಪ್ರವೇಶಿಸಿರಿ. ನರಕಕ್ಕೆ ಹೋಗುವ ದಾರಿ ದೊಡ್ಡದು, ಬಾಗಿಲು ಬಹಳ ವಿಶಾಲ. ಅನೇಕ ಜನರು ಆ ಬಾಗಿಲಲ್ಲಿ ಪ್ರವೇಶಿಸುತ್ತಾರೆ.


ಇಂಥ ಮದುವೆಗಳಿಂದಾಗಿ ಸೊಲೊಮೋನನು ಪಾಪಕ್ಕೆ ಒಳಗಾದನು ಎಂಬುದು ನಿಮಗೆ ತಿಳಿಯದೋ? ಅವನಂಥ ವೈಭವಶಾಲಿ ಅರಸನು ಯಾವ ರಾಜ್ಯದಲ್ಲಿಯೂ ಇರಲಿಲ್ಲ. ದೇವರು ಸೊಲೊಮೋನನನ್ನು ಪ್ರೀತಿಸಿದನು. ಇಡೀ ಇಸ್ರೇಲಿಗೆ ಅವನನ್ನು ಅರಸನನ್ನಾಗಿ ಮಾಡಿದನು. ಅಂಥವನೂ ಅನ್ಯಸ್ತ್ರೀಯರಿಂದಾಗಿ ಪಾಪ ಮಾಡಿದನು.


ಆ ರಾತ್ರಿ ಮಲಗುವುದಕ್ಕಿಂತ ಮುಂಚೆ ಸೊದೋಮಿನ ಗಂಡಸರೆಲ್ಲರೂ ಬಂದು ಲೋಟನ ಮನೆಯ ಸುತ್ತಲೂ ನಿಂತುಕೊಂಡು ಲೋಟನಿಗೆ,


ನಾನು ನಿಮ್ಮನ್ನು ಯಾಕೆ ಶಿಕ್ಷಿಸುತ್ತಲೇ ಇರಬೇಕು? ನಾನು ನಿಮ್ಮನ್ನು ಶಿಕ್ಷಿಸಿದೆನು, ಆದರೆ ನೀವು ಬದಲಾಗಲಿಲ್ಲ. ನೀವು ನನಗೆ ವಿರುದ್ಧವಾಗಿ ಏಳುತ್ತಲೇ ಇದ್ದೀರಿ. ಈಗ ಪ್ರತಿಯೊಂದು ತಲೆಯೂ ಪ್ರತಿಯೊಂದು ಹೃದಯವೂ ರೋಗಕ್ಕೆ ಬಲಿಯಾಗಿದೆ.


ಸಂಭವಿಸಲಿರುವ ಸಂಗತಿಗಳನ್ನು ಬಹುಕಾಲದ ಮೊದಲೇ ನಿಮಗೆ ತಿಳಿಸಿದ್ದೆನು. ಅವು ಸಂಭವಿಸುವದಕ್ಕಿಂತ ಎಷ್ಟೋ ಕಾಲದ ಮೊದಲೇ ತಿಳಿಸಿದೆನು. ನೀವು, ‘ಇವುಗಳನ್ನು ಮಾಡಿದ್ದು ನಮ್ಮ ವಿಗ್ರಹಗಳೇ, ನಮ್ಮ ಮರ ಮತ್ತು ಲೋಹದ ದೇವರುಗಳೇ ಅವುಗಳನ್ನು ಮಾಡಿದ್ದು ಎಂದು ನೀವು ಹೇಳದಂತೆ ಮಾಡಿದೆನು.’”


ಆಮೇಲೆ ಹೆಂಗಸರು ಮಾತನಾಡಿದರು. ಅವರು ಯೆರೆಮೀಯನಿಗೆ ಹೀಗೆ ಹೇಳಿದರು, “ನಾವು ಏನು ಮಾಡುತ್ತಿದ್ದೆವೆಂಬುದು ನಮ್ಮ ಗಂಡಂದಿರಿಗೆ ಗೊತ್ತಿತ್ತು. ಸ್ವರ್ಗದ ರಾಣಿಗೆ ನೈವೇದ್ಯವನ್ನು ಮಾಡುವದಕ್ಕೆ ನಾವು ಅವರ ಅಪ್ಪಣೆಯನ್ನು ಪಡೆದಿದ್ದೆವು. ಅವಳಿಗೆ ಪಾನನೈವೇದ್ಯವನ್ನು ಮಾಡುವದಕ್ಕೂ ಅವರ ಅಪ್ಪಣೆಯನ್ನು ಪಡೆದಿದ್ದೆವು. ನಾವು ಅವಳ ಆಕಾರದ ಹೋಳಿಗೆಯನ್ನು ಮಾಡುತ್ತಿದ್ದೆವೆಂಬುದೂ ನಮ್ಮ ಗಂಡಂದಿರಿಗೆ ಗೊತ್ತಿತ್ತು.”


ಆಮೇಲೆ ಯೆರೆಮೀಯನು ಆ ಎಲ್ಲಾ ಸ್ತ್ರೀಪುರುಷರೊಂದಿಗೆ ಮಾತನಾಡಿದನು. ಯೆರೆಮೀಯನು ಹೀಗೆ ಹೇಳಿದನು: “ಈಗ ಈಜಿಪ್ಟಿನಲ್ಲಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ:


ಸೆರೆಹಿಡಿಯಲ್ಪಟ್ಟ ಈಜಿಪ್ಟರನ್ನು ಪತ್ರೋಸ್ ದೇಶಕ್ಕೆ ಬರಮಾಡುವೆನು. ಅವರ ಜನ್ಮಸ್ಥಳಕ್ಕೆ ಅವರನ್ನು ತಿರುಗಿ ಬರಮಾಡುವೆನು. ಆದರೆ ಅವರ ರಾಜ್ಯಕ್ಕೆ ಮಹತ್ವವಿರುವುದಿಲ್ಲ.


ಪತ್ರೋಸನ್ನು ನಾನು ಬರಿದಾಗಿ ಮಾಡುವೆನು. ಸೋನಿನಲ್ಲಿ ಬೆಂಕಿಯನ್ನು ಬರಮಾಡುವೆನು. ತೆಬೆಸವನ್ನು ನಾನು ಶಿಕ್ಷಿಸುವೆನು.


ಅವು ನಿಮ್ಮ ಸುತ್ತಮುತ್ತಲಿರುವ ಬೇರೆ ದೇಶಗಳಲ್ಲಿ ವಾಸವಾಗಿರುವ ಜನರ ದೇವರುಗಳು, ಅವುಗಳಲ್ಲಿ ಕೆಲವು ಹತ್ತಿರದವುಗಳಾಗಿವೆ; ಕೆಲವು ದೂರದವುಗಳಾಗಿವೆ.)


ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಈ ಸಂದೇಶವನ್ನು ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಈ ಸಂದೇಶವು ಮಿಗ್ದೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಆ ಸಂದೇಶವೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು