Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:16 - ಪರಿಶುದ್ದ ಬೈಬಲ್‌

16 “ನೀನು ನಮಗೆ ತಿಳಿಸಿದ ಯೆಹೋವನ ಸಂದೇಶವನ್ನು ಕೇಳಿಸಿಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಸರ್ವೇಶ್ವರನ ಹೆಸರಿನಲ್ಲಿ ನೀನು ನಮಗೆ ನುಡಿದ ಮಾತನ್ನು ನಾವು ಕೇಳಲೊಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಯೆಹೋವ ದೇವರ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:16
24 ತಿಳಿವುಗಳ ಹೋಲಿಕೆ  

ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”


ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ‘ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.


ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.


ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.


ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”


ಅವರು ತಮ್ಮ ಪೂರ್ವಿಕರು ಮಾಡಿದ ಪಾಪಗಳನ್ನೇ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನ ಸಂದೇಶವನ್ನು ಕೇಳಲು ಒಪ್ಪಲಿಲ್ಲ. ಅವರು ಬೇರೆ ದೇವರುಗಳನ್ನು ಅನುಸರಿಸಿ ಪೂಜಿಸಿದರು. ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಯೆಹೂದ ಮತ್ತು ಇಸ್ರೇಲ್ ವಂಶದವರು ಮೀರಿದ್ದಾರೆ.”


ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ದುಷ್ಟಹೃದಯ ಹೇಳಿದಂತೆ ಮಾಡಿದರು. ಆಜ್ಞಾಪಾಲನೆ ಮಾಡದಿದ್ದರೆ ಅವರಿಗೆ ಕೆಡುಕಾಗುವದೆಂದು ಒಡಂಬಡಿಕೆಯಲ್ಲಿ ಹೇಳಲಾಗಿದೆ. ಅದಕ್ಕಾಗಿ ನಾನು ಅವರಿಗೆ ಕೇಡುಂಟಾಗುವಂತೆ ಮಾಡಿದೆ, ಒಡಂಬಡಿಕೆಯನ್ನು ಪಾಲಿಸಬೇಕೆಂದು ನಾನು ಅವರಿಗೆ ಆಜ್ಞಾಪಿಸಿದೆ ಆದರೆ ಅವರು ಪಾಲಿಸಲಿಲ್ಲ.”


ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’” ಯೆಹೋವನ ನುಡಿಗಳಿವು.


ನಾನು ಎಚ್ಚರವಹಿಸಿ ಅವರು ಹೇಳುವದನ್ನು ಕೇಳಿದ್ದೇನೆ. ಆದರೆ ಅವರು ಸರಿಯಾದುದನ್ನು ಹೇಳುವದಿಲ್ಲ. ತಾವು ಮಾಡಿದ ಪಾಪಕ್ಕಾಗಿ ಅವರು ಪಶ್ಚಾತ್ತಾಪಪಡುವದಿಲ್ಲ. ಅವರು ಮಾಡಿದ ದುಷ್ಕೃತ್ಯದ ಬಗ್ಗೆ ಅವರು ಯೋಚಿಸುವದಿಲ್ಲ. ಜನರು ವಿಚಾರ ಮಾಡದೆ ಕೆಲಸಮಾಡುತ್ತಾರೆ. ಅವರು ಯುದ್ಧದಲ್ಲಿ ಓಡುವ ಕುದುರೆಯಂತಿದ್ದಾರೆ.


ಜನರ ಮುಖಭಾವವೇ ಅವರ ದುಷ್ಕೃತ್ಯಗಳನ್ನು ಎತ್ತಿತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳಪಡುವರು. ಅವರು ಸೊದೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ.


“ದೇವರಿಗೂ ಆತನು ಅಭಿಷೇಕಿಸಿದ ರಾಜನಿಗೂ ವಿರೋಧವಾಗಿ ದಂಗೆ ಎದ್ದು ಸ್ವತಂತ್ರರಾಗೋಣ” ಎಂದು ಅವರು ಮಾತಾಡಿಕೊಳ್ಳುತ್ತಿದ್ದಾರೆ.


ಆದರೆ ಫರೋಹನು, “ಯೆಹೋವನು ಯಾರು? ನಾನು ಆತನಿಗೆ ಯಾಕೆ ವಿಧೇಯನಾಗಬೇಕು. ಇಸ್ರೇಲರನ್ನು ನಾನು ಯಾಕೆ ಹೋಗಗೊಡಿಸಬೇಕು. ನೀವು ಯೆಹೋವನೆಂದು ಕರೆಯುವ ಆತನನ್ನು ನಾನು ಅರಿಯೆನು, ಆದ್ದರಿಂದ ಇಸ್ರೇಲರನ್ನು ಹೋಗಗೊಡಿಸುವುದಿಲ್ಲ” ಅಂದನು.


ಆದರೆ ಸಮುವೇಲನ ಮಾತುಗಳಿಗೆ ಜನರು ಕಿವಿಗೊಡಲಿಲ್ಲ. ಅವರು, “ಇಲ್ಲ, ನಮ್ಮನ್ನಾಳಲು ಒಬ್ಬ ರಾಜನು ಇರಲೇ ಬೇಕು.


“ಆದರೆ ನೀವು ನನಗೆ ಗಮನಕೊಡಲಿಲ್ಲ. ನಾನು ಸಹಾಯಮಾಡಲು ಪ್ರಯತ್ನಿಸಿದೆ. ನಾನು ಕೈಚಾಚಿದೆ; ಆದರೆ ನೀವು ನನ್ನ ಸಹಾಯವನ್ನು ತೆಗೆದುಕೊಳ್ಳದೆ ತಿರಸ್ಕರಿಸಿದಿರಿ.


ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.


ಆದರೆ ‘ನಾವು ಯೆಹೂದದಲ್ಲಿ ವಾಸಿಸುವದಿಲ್ಲ’ವೆಂದು ನೀವು ಹೇಳಬಹುದು. ನೀವು ಹಾಗೆ ಹೇಳಿದರೆ ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮೀರಿದಂತಾಗುತ್ತದೆ.


ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕೆಲವರು ದುರಹಂಕಾರಿಗಳಾಗಿದ್ದರು ಮತ್ತು ಹಟಮಾರಿಗಳಾಗಿದ್ದರು. ಈ ಜನರು ಯೆರೆಮೀಯನ ಮೇಲೆ ಕೋಪಗೊಂಡು, “ಯೆರೆಮೀಯನೇ, ನೀನು ಸುಳ್ಳು ಹೇಳುತ್ತಿರುವೆ. ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈಜಿಪ್ಟಿಗೆ ವಾಸಮಾಡಲು ಹೋಗಬಾರದು’ ಎಂದು ಹೇಳುವದಕ್ಕಾಗಿ ನಿನ್ನನ್ನು ಕಳುಹಿಸಿಲ್ಲ.


ಆಮೇಲೆ ಯೆರೆಮೀಯನು ಆ ಎಲ್ಲಾ ಸ್ತ್ರೀಪುರುಷರೊಂದಿಗೆ ಮಾತನಾಡಿದನು. ಯೆರೆಮೀಯನು ಹೀಗೆ ಹೇಳಿದನು: “ಈಗ ಈಜಿಪ್ಟಿನಲ್ಲಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ:


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


ಇಸ್ರೇಲರ ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: ‘ಸ್ತ್ರೀಯರೇ “ಹರಕೆ ಹೊತ್ತಂತೆ ನಡೆದುಕೊಳ್ಳುವೆವು. ನಾವು ಮಾಡಿದ ಹರಕೆಗಳನ್ನು ಈಡೇರಿಸುವೆವು. ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಮತ್ತು ಪಾನನೈವೇದ್ಯವನ್ನು ಮಾಡುತ್ತೇವೆಂದು ಹರಕೆ ಹೊತ್ತಿದ್ದೆವು” ಎಂದು ನೀವು ಹೇಳಿದ ಹಾಗೆ ಮಾಡಿರಿ. ನೀವು ಹರಕೆ ಹೊತ್ತ ಹಾಗೆ ಮಾಡಿರಿ. ನಿಮ್ಮ ಹರಕೆಗಳನ್ನು ಪೂರ್ಣಗೊಳಿಸಿರಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು