ಆಮೇಲೆ ಹೆಂಗಸರು ಮಾತನಾಡಿದರು. ಅವರು ಯೆರೆಮೀಯನಿಗೆ ಹೀಗೆ ಹೇಳಿದರು, “ನಾವು ಏನು ಮಾಡುತ್ತಿದ್ದೆವೆಂಬುದು ನಮ್ಮ ಗಂಡಂದಿರಿಗೆ ಗೊತ್ತಿತ್ತು. ಸ್ವರ್ಗದ ರಾಣಿಗೆ ನೈವೇದ್ಯವನ್ನು ಮಾಡುವದಕ್ಕೆ ನಾವು ಅವರ ಅಪ್ಪಣೆಯನ್ನು ಪಡೆದಿದ್ದೆವು. ಅವಳಿಗೆ ಪಾನನೈವೇದ್ಯವನ್ನು ಮಾಡುವದಕ್ಕೂ ಅವರ ಅಪ್ಪಣೆಯನ್ನು ಪಡೆದಿದ್ದೆವು. ನಾವು ಅವಳ ಆಕಾರದ ಹೋಳಿಗೆಯನ್ನು ಮಾಡುತ್ತಿದ್ದೆವೆಂಬುದೂ ನಮ್ಮ ಗಂಡಂದಿರಿಗೆ ಗೊತ್ತಿತ್ತು.”