21 “ನೀವು ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ನೈವೇದ್ಯಗಳನ್ನು ಅರ್ಪಿಸಿದ ಸಂಗತಿ ಯೆಹೋವನ ಜ್ಞಾಪಕದಲ್ಲಿದೆ. ಅದನ್ನು ಮಾಡಿದ್ದೇ ನೀವು ಮತ್ತು ನಿಮ್ಮ ಪೂರ್ವಿಕರು, ನಿಮ್ಮ ರಾಜರು, ನಿಮ್ಮ ಅಧಿಕಾರಿಗಳು ಮತ್ತು ನಿಮ್ಮ ಪ್ರದೇಶದ ಜನರು. ನೀವು ಮಾಡಿದ್ದನ್ನೆಲ್ಲಾ ಆತನು ಜ್ಞಾಪಿಸಿಕೊಂಡನು; ತನ್ನ ನೆನಪಿಗೆ ತಂದುಕೊಂಡನು.
21 “ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?
21 ನೀವು, ನಿಮ್ಮ ಪೂರ್ವಜರು, ನಿಮ್ಮ ಅರಸರು, ಅಧಿಕಾರಿಗಳು, ಜನಸಾಮಾನ್ಯರು ಮತ್ತು ನೀವೆಲ್ಲರು ಜುದೇಯದ ಊರುಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಎತ್ತಿದ ಧೂಪಾರತಿ ಸರ್ವೇಶ್ವರನ ನೆನಪಿನಲ್ಲಿ ಇದೆ ಅಲ್ಲವೆ? ಅದನ್ನು ಅವರು ಮರೆತುಬಿಟ್ಟಿದ್ದಾರೆಯೇ?
21 ನೀವು, ನಿಮ್ಮ ಪಿತೃಗಳು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇವಿುನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?
21 “ನೀವೂ, ನಿಮ್ಮ ಪಿತೃಗಳೂ, ನಿಮ್ಮ ಅರಸರೂ, ನಿಮ್ಮ ಪ್ರಧಾನರೂ, ದೇಶದ ಜನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟ ಧೂಪವನ್ನೇ, ಯೆಹೋವ ದೇವರು ಜ್ಞಾಪಕ ಮಾಡಿಕೊಂಡಿದ್ದು ಅಲ್ಲವೋ?
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.
ನಿಮ್ಮ ಪೂರ್ವಿಕರು ಮಾಡಿದ್ದ ದುಷ್ಟತನವನ್ನು ನೀವು ಮರೆತುಬಿಟ್ಟಿರಾ? ಯೆಹೂದದ ರಾಜರು ಮತ್ತು ರಾಣಿಯರು ಮಾಡಿದ್ದ ದುಷ್ಟತನವನ್ನು ನೀವು ಮರೆತುಬಿಟ್ಟಿರುವಿರಾ? ನೀವು ಮತ್ತು ನಿಮ್ಮ ಪತ್ನಿಯರು ಯೆಹೂದದಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದ ದುಷ್ಟತನವನ್ನು ಮರೆತುಬಿಟ್ಟಿರಾ?
ಯೆಹೂದದ ಜನರ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: “ಯೆಹೂದದ ಜನರು ನನ್ನಿಂದ ದೂರವಾಗಲು ಮನಃಪೂರ್ವಕವಾಗಿ ಇಚ್ಛಿಸುತ್ತಾರೆ. ಅವರು ಮೊದಲಿಂದಲೂ ಹೀಗೆ ಮಾಡುತ್ತಲೇ ಇದ್ದಾರೆ. ಆದ್ದರಿಂದ ಈಗ ಯೆಹೋವನು ಅವರನ್ನು ಸ್ವಿಕರಿಸುವದಿಲ್ಲ. ಆತನು ಅವರ ದುಷ್ಕೃತ್ಯಗಳನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗಾಗಿ ಅವರನ್ನು ದಂಡಿಸುತ್ತಾನೆ.”
“ಯೆಹೂದದ ಜನರೇ, ನೀವು ಅನೇಕ ವಿಗ್ರಹಗಳನ್ನು ಇಟ್ಟುಕೊಂಡಿದ್ದೀರಿ. ಯೆಹೂದದಲ್ಲಿ ಎಷ್ಟು ಪಟ್ಟಣಗಳಿವೆಯೋ, ಅಷ್ಟು ವಿಗ್ರಹಗಳಿವೆ. ತುಚ್ಛ ದೇವರಾದ ಬಾಳನನ್ನು ಪೂಜಿಸಲು ನೀವು ಅನೇಕ ಬಲಿಪೀಠಗಳನ್ನು ಕಟ್ಟಿಕೊಂಡಿದ್ದೀರಿ. ಜೆರುಸಲೇಮಿನಲ್ಲಿ ಎಷ್ಟು ಬೀದಿಗಳಿವೆಯೋ ಅಷ್ಟು ಬಲಿಪೀಠಗಳಿವೆ.
ನಾನು ಅವರ ದುಷ್ಟತ್ವವನ್ನು ನೆನಪಿನಲ್ಲಿಟ್ಟಿರುತ್ತೇನೆಂಬುದನ್ನು ಅವರು ನಂಬುವದಿಲ್ಲ. ಅವರು ಮಾಡಿದ ದುಷ್ಟತನವು ಸುತ್ತಲೂ ಕಾಣಿಸುವದು. ನಾನು ಅವರ ಪಾಪಗಳನ್ನು ಸ್ಪಷ್ಟವಾಗಿ ನೋಡುತ್ತೇನೆ.
ಆ ಮಹಾನಗರವು ಒಡೆದು ಮೂರು ಭಾಗವಾಯಿತು. ಜನಾಂಗಗಳ ನಗರಗಳು ನಾಶವಾದವು. ಮಹಾನಗರವಾದ ಬಾಬಿಲೋನನ್ನು ದೇವರು ದಂಡಿಸದೆ ಬಿಡಲಿಲ್ಲ. ಆತನು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕುಡಿಯಲು ಕೊಟ್ಟನು.
“ನೀನು ಎಲ್ಲಾ ದುಷ್ಕೃತ್ಯಗಳನ್ನು ಮಾಡಿದ ನಂತರ ಸುಳ್ಳು ದೇವರುಗಳಿಗಾಗಿ ಎತ್ತರವಾದ ಸ್ಥಳಗಳಲ್ಲಿ ಹೆಚ್ಚು ಪೂಜಾಸ್ಥಳಗಳನ್ನು ಮಾಡಿದೆ. ಪ್ರತಿಯೊಂದು ರಸ್ತೆಯ ಚೌಕಗಳಲ್ಲಿ ಅನ್ಯದೇವರುಗಳಿಗಾಗಿ ಪೂಜಾಸ್ಥಳಗಳನ್ನು ಮಾಡಿದೆ.
ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.
ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.
ಇಸ್ರೇಲಿನ ಮತ್ತು ಯೆಹೂದದ ಜನರು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಜೆರುಸಲೇಮ್ ನಗರವನ್ನು ನಾಶಮಾಡುತ್ತೇನೆ. ಜನರು, ರಾಜರು, ಮುಂದಾಳುಗಳು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು ಇವರೆಲ್ಲರೂ ನನಗೆ ಕೋಪ ಬರುವಂತೆ ಮಾಡಿದ್ದಾರೆ.