Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:25 - ಪರಿಶುದ್ದ ಬೈಬಲ್‌

25 ಇಸ್ರೇಲರ ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: ‘ಸ್ತ್ರೀಯರೇ “ಹರಕೆ ಹೊತ್ತಂತೆ ನಡೆದುಕೊಳ್ಳುವೆವು. ನಾವು ಮಾಡಿದ ಹರಕೆಗಳನ್ನು ಈಡೇರಿಸುವೆವು. ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಮತ್ತು ಪಾನನೈವೇದ್ಯವನ್ನು ಮಾಡುತ್ತೇವೆಂದು ಹರಕೆ ಹೊತ್ತಿದ್ದೆವು” ಎಂದು ನೀವು ಹೇಳಿದ ಹಾಗೆ ಮಾಡಿರಿ. ನೀವು ಹರಕೆ ಹೊತ್ತ ಹಾಗೆ ಮಾಡಿರಿ. ನಿಮ್ಮ ಹರಕೆಗಳನ್ನು ಪೂರ್ಣಗೊಳಿಸಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬದಾಗಿ ನೀವೂ ನಿಮ್ಮ ಹೆಂಡಿರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ತೀರಿಸೇ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವೂ, ನಿಮ್ಮ ಹೆಂಡತಿಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ, ಅವಳಿಗೆ ಪಾನಾರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡೆಸುವೆವೆಂದೂ, ನಿಮ್ಮ ಬಾಯಿಗಳಿಂದ ಹೇಳಿ ನಿಮ್ಮ ಕೈಗಳಿಂದ ಸಹ ಈಡೇರಿಸಿದ್ದೀರಿ.’ “ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡೆಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:25
9 ತಿಳಿವುಗಳ ಹೋಲಿಕೆ  

ರಾಜ ಹೆರೋದನು ಬಹಳವಾಗಿ ದುಃಖಪಟ್ಟನು. ಆದರೆ ಏನು ಕೇಳಿದರೂ ಕೊಡುತ್ತೇನೆಂದು ಅವನು ಅವಳಿಗೆ ವಾಗ್ದಾನ ಮಾಡಿದ್ದನು. ಹೆರೋದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದವರು ಸಹ ಆ ವಾಗ್ದಾನವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ಕೊಡುವುದಕ್ಕೆ ಹೆರೋದನು ಅಪ್ಪಣೆಕೊಟ್ಟನು.


ಇವರು ಸಮುದ್ರದಲ್ಲಿನ ಭೀಕರವಾದ ಅಲೆಗಳಂತಿದ್ದಾರೆ. ಈ ಅಲೆಗಳು ನೊರೆಯನ್ನು ಕಾರುವಂತೆ ಇವರು ನಾಚಿಕೆಯಿಲ್ಲದ ಕೆಲಸಗಳನ್ನು ಮಾಡುತ್ತಾರೆ. ಈ ಜನರು ಆಕಾಶದಲ್ಲಿ ಅಲೆಯುವ ನಕ್ಷತ್ರಗಳಂತಿದ್ದಾರೆ. ಇವರಿಗಾಗಿ ಶಾಶ್ವತವಾದ ಕಾರ್ಗತ್ತಲಿನ ಸ್ಥಳವನ್ನು ಕಾದಿರಿಸಲಾಗಿದೆ.


ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ನೀವು, “ನಾವು ಮರಣದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ನಾವು ಪಾತಾಳದೊಂದಿಗೆ ಒಪ್ಪಂದ ಮಾಡಿದ್ದೇವೆ. ಆದ್ದರಿಂದ ನಾವು ಶಿಕ್ಷಿಸಲ್ಪಡುವದಿಲ್ಲ. ಶಿಕ್ಷೆಯು ಹಾದುಹೋಗುವಾಗ ಅದು ನಮಗೇನೂ ಹಾನಿ ಮಾಡುವದಿಲ್ಲ. ನಾವು ನಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತೇವೆ” ಎಂದು ಹೇಳುತ್ತೀರಿ.


ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ.


ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು