Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:28 - ಪರಿಶುದ್ದ ಬೈಬಲ್‌

28 ಕೆಲವು ಯೆಹೂದಿಯರು ಖಡ್ಗದಿಂದ ತಪ್ಪಿಸಿಕೊಳ್ಳುವರು. ಅವರು ಈಜಿಪ್ಟಿನಿಂದ ಯೆಹೂದಕ್ಕೆ ಹಿಂದಿರುಗಿ ಬರುವರು. ಆದರೆ ಹಾಗೆ ತಪ್ಪಿಸಿಕೊಳ್ಳುವ ಯೆಹೂದಿಯರು ಬಹು ಕಡಿಮೆ. ಆಗ ಈಜಿಪ್ಟಿಗೆ ವಲಸೆ ಬಂದ ಆ ಅಳಿದುಳಿದ ಯೆಹೂದಿಯರಿಗೆ ಯಾರ ಮಾತು ನಿಜವೆಂಬುದು ತಿಳಿದು ಬರುತ್ತದೆ. ನನ್ನ ಮಾತು ನಿಜವಾಯಿತೋ ಅಥವಾ ಅವರ ಮಾತು ನಿಜವಾಯಿತೋ ಎಂಬುದು ಅವರಿಗೆ ಗೊತ್ತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಖಡ್ಗಕ್ಕೆ ತಪ್ಪಿಸಿಕೊಂಡವರು ಕೊಂಚ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದ ಜನಶೇಷದವರೆಲ್ಲರೂ ನನ್ನ ಮಾತು ಸಾಗತಕ್ಕದ್ದೋ ತಮ್ಮ ಮಾತು ಸಾಗತಕ್ಕದ್ದೋ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಖಡ್ಗಕ್ಕೆ ತಪ್ಪಿಸಿಕೊಂಡ ಸ್ವಲ್ಪ ಜನರು ಈಜಿಪ್ಟ್ ದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂದಿರುಗಿ ಹೋಗುವರು. ಆಗ ಈಜಿಪ್ಟ್ ದೇಶದಲ್ಲಿ ತಂಗುವುದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವುದೋ, ಅವರ ಮಾತು ನಿಲ್ಲುವುದೋ ಎಂಬುದನ್ನು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:28
20 ತಿಳಿವುಗಳ ಹೋಲಿಕೆ  

ಈಜಿಪ್ಟಿಗೆ ವಲಸೆ ಹೋದ ಕೆಲವೇ ಯೆಹೂದದ ಜನರು ಅಳಿದುಳಿದವರಾಗಿದ್ದಾರೆ. ಒಬ್ಬನೂ ಕೂಡ ನನ್ನ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾರನು. ಅವರಲ್ಲಿ ಒಬ್ಬನೂ ಜೀವಂತವಾಗಿ ಯೆಹೂದಕ್ಕೆ ಹಿಂತಿರುಗಿ ಬರಲಾರನು. ಆ ಜನರು ಯೆಹೂದಕ್ಕೆ ಹಿಂತಿರುಗಿ ಬಂದು ಅಲ್ಲಿ ವಾಸಮಾಡಬಯಸುವರು, ಆದರೆ ತಪ್ಪಿಸಿಕೊಂಡ ಸ್ವಲ್ಪ ಜನರನ್ನು ಬಿಟ್ಟು ಮಿಕ್ಕವರಾರೂ ಯೆಹೂದಕ್ಕೆ ಹಿಂತಿರುಗುವದಿಲ್ಲ.”


ಆಗ ಅಡವಿಯಲ್ಲಿ, ಒಂದು ಮಗು ಎಣಿಸಲು ಸಾಧ್ಯವಾಗುವಷ್ಟು ಮರಗಳಿರುವವು.


ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


ನಾನು ನಿಮ್ಮನ್ನು ಇಲ್ಲಿ ಈಜಿಪ್ಟಿನಲ್ಲಿ ದಂಡಿಸುತ್ತೇನೆಂದು ಪ್ರಮಾಣ ಮಾಡುತ್ತೇನೆ. ಆಗ ನಾನು ನಿಮ್ಮನ್ನು ದಂಡಿಸುವೆನೆಂದು ಮಾಡಿದ ಪ್ರತಿಜ್ಞೆ ಈಡೇರುವದೆಂದು ನಿಮಗೆ ತಿಳಿಯುವುದು.’ ಇದು ಯೆಹೋವನ ನುಡಿ.


ಆದರೆ ಯೆಹೋವನ ಯೋಜನೆಗಳು ಶಾಶ್ವತವಾಗಿವೆ. ಆತನ ಆಲೋಚನೆಗಳು ಸದಾಕಾಲಕ್ಕೂ ಒಳ್ಳೆಯದಾಗಿವೆ.


ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!


ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ನೀವು ಯಶಸ್ವಿಯಾಗುವುದಿಲ್ಲ.


ನಿನ್ನ ಜನರು ಸಮುದ್ರದ ಮರಳಿನಂತೆ ಬಹಳವಿರುವರು. ಆದರೆ ಅವರಲ್ಲಿ ಕೆಲವರೇ ಉಳಿದು ಕರ್ತನ ಬಳಿಗೆ ಬರುವರು. ಆ ಜನರು ದೇವರ ಬಳಿಗೆ ಹಿಂತಿರುಗುವರು. ಅದಕ್ಕಿಂತ ಮೊದಲು ನಿನ್ನ ದೇಶವು ನಾಶವಾಗುವದು. ದೇಶವು ನಾಶವಾಗುವದೆಂದು ದೇವರು ಪ್ರಕಟಿಸಿದ್ದಾನೆ. ಆ ಬಳಿಕ ದೇವರ ಒಳ್ಳೆತನವು ಆ ದೇಶಕ್ಕೆ ಬರುವದು. ಅದು ದಡತುಂಬಿ ಹರಿಯುವ ನದಿಯೋಪಾದಿಯಲ್ಲಿರುವದು.


ಈಜಿಪ್ಟಿಗೆ ಹೋಗಿ ಅಲ್ಲಿ ನೆಲೆಸಬೇಕೆಂದು ನಿಶ್ಚಯಿಸಿದವರೆಲ್ಲರೂ ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರ ವ್ಯಾಧಿಯಿಂದಾಗಲಿ ಸತ್ತುಹೋಗುವರು. ಈಜಿಪ್ಟಿಗೆ ಹೋದವರಲ್ಲಿ ಒಬ್ಬನೂ ಬದುಕಿರಲಾರ. ನಾನು ಅವರಿಗೆ ಉಂಟುಮಾಡುವ ಪೀಡೆಯಿಂದ ಒಬ್ಬನೂ ತಪ್ಪಿಸಿಕೊಳ್ಳಲಾರ.’


ಈಜಿಪ್ಟಿನಲ್ಲಿ ವಾಸಿಸಲು ಹೋದ ಜನರನ್ನು ನಾನು ದಂಡಿಸುವೆನು. ಅವರನ್ನು ದಂಡಿಸಲು ನಾನು ಖಡ್ಗಗಳನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಗಳನ್ನು ಬಳಸುವೆನು. ನಾನು ಜೆರುಸಲೇಮ್ ನಗರವನ್ನು ದಂಡಿಸಿದಂತೆಯೇ ಅವರನ್ನು ದಂಡಿಸುವೆನು.


ನೀವು ಖಡ್ಗಗಳಿಂದ ತಪ್ಪಿಸಿಕೊಂಡಿರಿ. ನೀವು ಅವಸರ ಮಾಡಿ ಬಾಬಿಲೋನನ್ನು ಬಿಡಬೇಕು. ತಡೆಯಬೇಡಿ, ನೀವು ಬಹಳ ದೂರಪ್ರದೇಶದಲ್ಲಿ ಇದ್ದೀರಿ. ಆದರೆ ನೀವು ಇರುವಲ್ಲಿಯೇ ಯೆಹೋವನನ್ನು ಸ್ಮರಿಸಿರಿ; ಜೆರುಸಲೇಮನ್ನೂ ಸ್ಮರಿಸಿಕೊಳ್ಳಿರಿ.


ದೇವರು ಹೇಳಿದ್ದೇನೆಂದರೆ: “ಆದರೆ ನಾನು ನಿಮ್ಮ ಜನರಲ್ಲಿ ಕೆಲವರನ್ನು ಉಳಿದುಕೊಳ್ಳುವಂತೆ ಮಾಡುವೆನು. ನೀವು ಬೇರೆ ದೇಶಗಳಲ್ಲಿ ಚದರಿಹೋಗಿರುವಾಗ ಜನಾಂಗಗಳ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಕೊಲ್ಲಲ್ಪಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು