ಯೆರೆಮೀಯ 44:29 - ಪರಿಶುದ್ದ ಬೈಬಲ್29 ನಾನು ನಿಮ್ಮನ್ನು ಇಲ್ಲಿ ಈಜಿಪ್ಟಿನಲ್ಲಿ ದಂಡಿಸುತ್ತೇನೆಂದು ಪ್ರಮಾಣ ಮಾಡುತ್ತೇನೆ. ಆಗ ನಾನು ನಿಮ್ಮನ್ನು ದಂಡಿಸುವೆನೆಂದು ಮಾಡಿದ ಪ್ರತಿಜ್ಞೆ ಈಡೇರುವದೆಂದು ನಿಮಗೆ ತಿಳಿಯುವುದು.’ ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ‘ನಾನು ನಿಮ್ಮನ್ನು ಈ ಸ್ಥಳದಲ್ಲೇ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು. ನನ್ನ ಮಾತು ಈಡೇರಿ ನಿಮಗೆ ಕೇಡು ಉಂಟಾಗುವುದು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನೆಂಬದಕ್ಕೆ ಒಂದು ಗುರುತು ಕಾಣುವದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನುಂಟುಮಾಡುವವು ಎಂಬದಾಗಿ ಅದರಿಂದಲೇ ನಿಮಗೆ ತಿಳಿದುಬರುವದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ ‘ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವುವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನೆಂಬುದಕ್ಕೆ ಇದೇ ನಿಮಗೆ ಗುರುತು,’ ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ನಾನು ಹೇಳಿದಂತೆ ಮಾಡುವೆನೆಂಬುದಕ್ಕೆ ಪ್ರಮಾಣ ಇದು. ಯೆಹೋವನು ಹೀಗೆ ಹೇಳಿದನು: ‘ಫರೋಹ ಹೊಫ್ರನೆಂಬುವನು ಈಜಿಪ್ಟಿನ ರಾಜನಾಗಿದ್ದಾನೆ. ಅವನ ಶತ್ರುಗಳು ಅವನನ್ನು ಕೊಲ್ಲಬಯಸುತ್ತಾರೆ. ನಾನು ಫರೋಹ ಹೊಫ್ರನನ್ನು ಅವನ ಶತ್ರುಗಳಿಗೆ ಒಪ್ಪಿಸುತ್ತೇನೆ. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ನೆಬೂಕದ್ನೆಚ್ಚರನು ಚಿದ್ಕೀಯನ ವೈರಿಯಾಗಿದ್ದನು. ನಾನು ಚಿದ್ಕೀಯನನ್ನು ಅವನ ಶತ್ರುವಿನ ಕೈಗೆ ಒಪ್ಪಿಸಿದೆ. ಅದೇ ರೀತಿ ನಾನು ಫರೋಹ ಹೊಫ್ರನನ್ನು ಅವನ ವೈರಿಯ ಕೈಗೆ ಒಪ್ಪಿಸುತ್ತೇನೆ.’”