ಯೆರೆಮೀಯ 44:3 - ಪರಿಶುದ್ದ ಬೈಬಲ್3 ಅಲ್ಲಿ ವಾಸಿಸುವ ಜನರು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಸ್ಥಳಗಳನ್ನು ನಾಶಮಾಡಲಾಯಿತು. ಆ ಜನರು ಬೇರೆ ದೇವರುಗಳಿಗೆ ಬಲಿಯನ್ನು ಅರ್ಪಿಸಿದ್ದಾರೆ. ಆದ್ದರಿಂದ ನನಗೆ ಕೋಪ ಬಂದಿದೆ. ಹಿಂದೆ ನಿಮ್ಮ ಜನರು ಮತ್ತು ನಿಮ್ಮ ಪೂರ್ವಿಕರು ಆ ದೇವರುಗಳನ್ನು ಪೂಜಿಸಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಲ್ಲಿನವರು ತಮಗೂ ನಿಮಗೂ ಮತ್ತು ನಿಮ್ಮ ಪೂರ್ವಜರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ಪೂಜಿಸುವುದಕ್ಕೆ ತವಕಪಟ್ಟರು. ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದರು. ಆದ್ದರಿಂದಲೇ ಆ ಸ್ಥಳಗಳು ಹಾಳಾದವು, ನಿರ್ಜನಪ್ರದೇಶಗಳಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಹಾ, ಅಲ್ಲಿನವರು ತಮಗೂ ನಿಮಗೂ ನಿಮ್ಮ ಪಿತೃಗಳಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡಿಸಿದ್ದರಿಂದ ಆ ಸ್ಥಳಗಳು ಹಾಳಾದವು. ಅಲ್ಲಿ ಯಾರೂ ವಾಸಿಸರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ನೀವೂ ನಿಮ್ಮ ಪೂರ್ವಜರೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ, ಧೂಪ ಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ. ಅವುಗಳಲ್ಲಿ ವಾಸಮಾಡುವವನು ಯಾರೂ ಇಲ್ಲ. ಅಧ್ಯಾಯವನ್ನು ನೋಡಿ |
“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.
ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.