ಯೆರೆಮೀಯ 44:4 - ಪರಿಶುದ್ದ ಬೈಬಲ್4 ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಾ - ಅಹಹ, ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ ಎಂದು ಪ್ರಕಟಿಸುತ್ತಾ ಬಂದರೂ ಅವರು ಕಿವಿಗೊಟ್ಟು ಕೇಳಲಿಲ್ಲ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು. ಅಧ್ಯಾಯವನ್ನು ನೋಡಿ |
ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”
ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”
ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.