ಯೆರೆಮೀಯ 44:7 - ಪರಿಶುದ್ದ ಬೈಬಲ್7 “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ವಿಗ್ರಹಗಳ ಪೂಜೆಮಾಡಿ ನಿಮ್ಮನ್ನು ನೀವೇ ಏಕೆ ತೊಂದರೆಗೀಡು ಮಾಡಿಕೊಳ್ಳುವಿರಿ? ಈ ದುರಾಚಾರದ ನಿಮಿತ್ತ ನೀವು ಯೆಹೂದ ಕುಟುಂಬದಿಂದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ಮತ್ತು ಕೂಸುಗಳನ್ನು ಅಗಲಿಸುತ್ತಿದ್ದೀರಿ. ಯೆಹೂದ ಕುಲದಿಂದ ಯಾರೂ ಉಳಿಯದಂತೆ ಮಾಡುತ್ತಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೀಗಿರಲು ಸೇನಾಧೀಶ್ವರಸ್ವಾಮಿಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ, ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವುದೇಕೆ? ಈ ದುರಾಚಾರದ ನಿಮಿತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಹೀಗಿರಲು, ಸೇನಾಧೀಶ್ವರ ಸ್ವಾಮಿಯೂ ಇಸ್ರಯೇಲಿನ ದೇವರೂ ಆದ ಸರ್ವೇಶ್ವರ ಈಗ ಹೇಳುವುದನ್ನು ಕೇಳಿ: ‘ಈ ದೊಡ್ಡ ಕೇಡನ್ನು ನಿಮಗೆ ನೀವೆ ಬರಮಾಡಿಕೊಳ್ಳುವುದು ಸರಿಯೆ? ಈ ದುರಾಚಾರದ ನಿಮಿತ್ತ ಜುದೇಯದ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು. ನಿಮ್ಮಲ್ಲಿ ಯಾರೂ ಉಳಿಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೀಗಿರಲು ಸೇನಾಧೀಶ್ವರಸ್ವಾವಿುಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ - ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವದೇಕೆ? ಈ ದುರಾಚಾರದ ನಿವಿುತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಆದ್ದರಿಂದ ಈಗ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: ಏಕೆ ನಿಮಗೆ ಉಳಿದಿರುವವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ, ಹೆಂಗಸರನ್ನೂ, ಮಗುವನ್ನೂ, ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು, ನಿಮ್ಮ ಪ್ರಾಣಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳುತ್ತೀರಿ? ಅಧ್ಯಾಯವನ್ನು ನೋಡಿ |
“ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.
ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.
“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”