Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 45:1 - ಪರಿಶುದ್ದ ಬೈಬಲ್‌

1 ಯೆಹೋಯಾಕೀಮನು ಯೋಷೀಯನ ಮಗ. ಯೆಹೋಯಾಕೀಮನು ಯೆಹೂದದ ರಾಜನಾದ ನಾಲ್ಕನೇ ವರ್ಷದಲ್ಲಿ ಪ್ರವಾದಿಯಾದ ಯೆರೆಮೀಯನು ನೇರೀಯನ ಮಗನಾದ ಬಾರೂಕನಿಗೆ ಹೀಗೆ ಹೇಳಿದನು. ಬಾರೂಕನು ಅದನ್ನು ಒಂದು ಸುರುಳಿಯ ಮೇಲೆ ಬರೆದನು. ಯೆರೆಮೀಯನು ಬಾರೂಕನಿಗೆ ಹೇಳಿದ್ದು ಹೀಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದನು. ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಜ್ಞೆಯ ಪ್ರಕಾರ ಈ ವಾಕ್ಯವನ್ನು ಬಾರೂಕನಿಗೆ ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ, ಸುರುಳಿಯಲ್ಲಿ ಬರೆದ ಮೇಲೆ ಪ್ರವಾದಿಯಾದ ಯೆರೆಮೀಯನು ಅವನಿಗೆ ಹೇಳಿದ ವಾಕ್ಯವೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 45:1
18 ತಿಳಿವುಗಳ ಹೋಲಿಕೆ  

ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೋವನ ಸಂದೇಶ ಹೀಗಿತ್ತು:


ಆಗ ಯೆರೆಮೀಯನು ಬಾರೂಕನೆಂಬ ಒಬ್ಬ ವ್ಯಕ್ತಿಯನ್ನು ಕರೆದನು. ಬಾರೂಕನು ನೇರೀಯನ ಮಗ. ಯೆರೆಮೀಯನು ಯೆಹೋವನ ಸಂದೇಶವನ್ನು ಹೇಳುತ್ತಿದ್ದಾಗ ಬಾರೂಕನು ಆ ಸಂದೇಶವನ್ನು ಸುರುಳಿಯ ಮೇಲೆ ಬರೆದನು.


ನಾನು ಅವುಗಳನ್ನು ಬಾರೂಕನ ಕೈಗೆ ಕೊಟ್ಟೆನು. ಬಾರೂಕನು ನೇರೀಯನ ಮಗನಾಗಿದ್ದನು. ನೇರೀಯನು ಮಹ್ಸೇಮನ ಮಗನಾಗಿದ್ದನು. ಮೊಹರು ಮಾಡಿದ ಕ್ರಯಪತ್ರದಲ್ಲಿ ನಾನು ಹೊಲವನ್ನು ಕ್ರಯಕ್ಕೆ ಕೊಂಡ ಎಲ್ಲಾ ಷರತ್ತುಗಳಿದ್ದವು. ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಮತ್ತು ಉಳಿದ ಸಾಕ್ಷಿಗಳು ಅಲ್ಲಿದ್ದಾಗಲೇ ನಾನು ಈ ಕ್ರಯಪತ್ರವನ್ನು ಬಾರೂಕನ ಕೈಗೆ ಕೊಟ್ಟೆನು. ಆ ಸಾಕ್ಷಿಗಳು ಸಹ ಈ ಕ್ರಯಪತ್ರಕ್ಕೆ ಸಹಿಹಾಕಿದ್ದರು. ಆ ಅಂಗಳದಲ್ಲಿ ಕುಳಿತ ಹಲವಾರು ಜನ ಯೆಹೂದ್ಯರು ನಾನು ಬಾರೂಕನ ಕೈಗೆ ಆ ಕ್ರಯಪತ್ರ ಕೊಡುವದನ್ನು ನೋಡಿದರು.


ಅನಂತರ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ ಲಿಪಿಕಾರ ಬಾರೂಕನಿಗೆ ಕೊಟ್ಟನು. ರಾಜ ಯೆಹೋಯಾಕೀಮನು ಸುಟ್ಟುಹಾಕಿದ ಸುರುಳಿಯಲ್ಲಿದ್ದ ಸಂದೇಶವನ್ನೇ ಯೆರೆಮೀಯನು ಹೇಳಿದಂತೆಲ್ಲ ಬಾರೂಕನು ಸುರುಳಿಯ ಮೇಲೆ ಬರೆದನು. ಬೇರೆ ಹಲವು ಸಂದೇಶಗಳನ್ನು ಎರಡನೇ ಸುರುಳಿಯಲ್ಲಿ ಸೇರಿಸಲಾಯಿತು.


ನೇರೀಯನ ಮಗನಾದ ಬಾರೂಕನಿಗೆ ಕ್ರಯಪತ್ರವನ್ನು ಕೊಟ್ಟ ಮೇಲೆ ನಾನು ಯೆಹೋವನಿಗೆ ಪ್ರಾರ್ಥಿಸಿ ಹೀಗೆಂದೆನು:


ಯೆಹೂದದ ಎಲ್ಲಾ ಜನರ ಬಗ್ಗೆ ಯೆರೆಮೀಯನಿಗೆ ಈ ಸಂದೇಶವು ಬಂದಿತು. ಈ ಸಂದೇಶವು ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಂದಿತು. ಯೆಹೋಯಾಕೀಮನು ಯೋಷೀಯನ ಮಗ. ಅವನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಅಂದರೆ ಬಾಬಿಲೋನಿನಲ್ಲಿ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ


ಯೆಹೋಯಾಕೀಮನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಯೆಹೋಯಾಕೀಮನು ಯೆಹೋವನ ಚಿತ್ತಕ್ಕೆ ಒಳಗಾಗಲಿಲ್ಲ. ಅವನು ತನ್ನ ದೇವರಾದ ಯೆಹೋವನ ವಿರುದ್ಧವಾಗಿ ಪಾಪಮಾಡಿದನು.


ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.


ಯೆಹೋಯಾಕೀಮನು ಯೆಹೂದದ ರಾಜನಾದ ಮೊದಲನೇ ವರ್ಷದಲ್ಲಿ ಯೆಹೋವನಿಂದ ಈ ಸಂದೇಶ ಬಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು.


ಯೆಹೋಯಾಕೀಮನ ಕಾಲದಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶಕ್ಕೆ ಬಂದನು. ಯೆಹೋಯಾಕೀಮನು ಮೂರು ವರ್ಷಗಳವರೆಗೆ ನೆಬೂಕದ್ನೆಚ್ಚರನ ಸೇವೆಮಾಡಿದನು. ನಂತರ ಯೆಹೋಯಾಕೀಮನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದು ಅವನ ಆಳ್ವಿಕೆಯಿಂದ ದೂರವಾದನು.


“ಇಸ್ರೇಲಿನ ದೇವರಾದ ನಮ್ಮ ಯೆಹೋವನು ಹೀಗೆ ಹೇಳುತ್ತಾನೆ:


ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು:


ಯೆರೆಮೀಯನು ಸೆರಾಯ ಎಂಬ ಅಧಿಕಾರಿಯ ಕೈಗೆ ಕೊಟ್ಟ ಸಂದೇಶವಿದು. ಸೆರಾಯನು ಯೆಹೂದದ ನೇರೀಯನ ಮಗ. ನೇರೀಯನು ಮಹ್ಸೇಯನ ಮಗನು. ಸೆರಾಯನು ಯೆಹೂದದ ರಾಜನಾದ ಚಿದ್ಕೀಯನ ಜೊತೆಗೆ ಬಾಬಿಲೋನಿಗೆ ಹೋದನು. ಈ ಸಂಗತಿ ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ನಡೆದದ್ದು. ಆ ಸಮಯದಲ್ಲಿ ಯೆರೆಮೀಯನು ಸೆರಾಯನೆಂಬ ಅಧಿಕಾರಿಯ ಕೈಗೆ ಈ ಸಂದೇಶವನ್ನು ಕೊಟ್ಟನು.


ನೆಬೂಕದ್ನೆಚ್ಚರನು ಬಾಬಿಲೋನಿನ ಅರಸನಾಗಿದ್ದನು. ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದನು. ನೆಬೂಕದ್ನೆಚ್ಚರನು ತನ್ನ ಸೈನ್ಯ ಸಮೇತ ಜೆರುಸಲೇಮಿಗೆ ಮುತ್ತಿಗೆ ಹಾಕಿದನು. ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಈ ಘಟನೆ ನಡೆಯಿತು.


“ಯೆರೆಮೀಯನೇ, ಒಂದು ಸುರಳಿಯನ್ನು ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನ್ನು ಅದರಲ್ಲಿ ಬರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ ಜನಾಂಗಗಳ ಬಗ್ಗೆಯೂ ಮತ್ತು ಉಳಿದ ಜನಾಂಗಗಳ ಬಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳ್ವಿಕೆಯ ಕಾಲದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿಯೊಂದು ಶಬ್ಧವನ್ನೂ ಬರೆದಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು