ನಾನು ಹೇಳಿದಂತೆ ಮಾಡುವೆನೆಂಬುದಕ್ಕೆ ಪ್ರಮಾಣ ಇದು. ಯೆಹೋವನು ಹೀಗೆ ಹೇಳಿದನು: ‘ಫರೋಹ ಹೊಫ್ರನೆಂಬುವನು ಈಜಿಪ್ಟಿನ ರಾಜನಾಗಿದ್ದಾನೆ. ಅವನ ಶತ್ರುಗಳು ಅವನನ್ನು ಕೊಲ್ಲಬಯಸುತ್ತಾರೆ. ನಾನು ಫರೋಹ ಹೊಫ್ರನನ್ನು ಅವನ ಶತ್ರುಗಳಿಗೆ ಒಪ್ಪಿಸುತ್ತೇನೆ. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ನೆಬೂಕದ್ನೆಚ್ಚರನು ಚಿದ್ಕೀಯನ ವೈರಿಯಾಗಿದ್ದನು. ನಾನು ಚಿದ್ಕೀಯನನ್ನು ಅವನ ಶತ್ರುವಿನ ಕೈಗೆ ಒಪ್ಪಿಸಿದೆ. ಅದೇ ರೀತಿ ನಾನು ಫರೋಹ ಹೊಫ್ರನನ್ನು ಅವನ ವೈರಿಯ ಕೈಗೆ ಒಪ್ಪಿಸುತ್ತೇನೆ.’”
ಎಲ್ಲಾ ಜನಾಂಗಗಳು ನೆಬೂಕದ್ನೆಚ್ಚರನ, ಅವನ ಮಗನ ಮತ್ತು ಅವನ ಮೊಮ್ಮಗನ ಸೇವೆಮಾಡುವವು. ಆಮೇಲೆ ಬಾಬಿಲೋನನ್ನು ಸೋಲಿಸುವ ಸಮಯ ಬರುತ್ತದೆ. ಅನೇಕ ಜನಾಂಗಗಳು ಮತ್ತು ದೊಡ್ಡ ರಾಜರು ಬಾಬಿಲೋನನ್ನು ತಮ್ಮ ಸೇವಕನನ್ನಾಗಿ ಮಾಡಿಕೊಳ್ಳುವರು.