14 “ಈಜಿಪ್ಟಿನಲ್ಲಿ ಈ ಸಂದೇಶವನ್ನು ಪ್ರಕಟಿಸು, ಮಿಗ್ದೋಲ್ ನಗರದಲ್ಲಿ ಇದನ್ನು ಪ್ರಚುರಪಡಿಸು. ನೋಫ್ ಮತ್ತು ತಹಪನೇಸ್‌ಗಳಲ್ಲಿ ಪ್ರಚುರಪಡಿಸಿರಿ, ‘ಯುದ್ಧಕ್ಕೆ ಸಿದ್ಧರಾಗಿರಿ, ಏಕೆಂದರೆ ನಿಮ್ಮ ಸುತ್ತಲೂ ಜನರು ಖಡ್ಗಕ್ಕೆ ಆಹುತಿಯಾಗಿದ್ದಾರೆ.’
14 “ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ.
14 “ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ, ನೋಫಿನಲ್ಲಿಯೂ, ತಹಪನೇಸಿನಲ್ಲಿಯೂ ಪ್ರಕಟಿಸಿ, ‘ನಿಮ್ಮ ಸ್ಥಾನಗಳನ್ನು ತೆಗೆದುಕೊಳ್ಳಿ ಮತ್ತು ಸಿದ್ಧರಾಗಿ, ಏಕೆಂದರೆ ಖಡ್ಗವು ನಿನ್ನ ಸುತ್ತಲೂ ಸಂಹರಿಸುವುದು,’ ಎಂದು ಹೇಳಿರಿ.
“ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.
ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಈ ಸಂದೇಶವನ್ನು ಈಜಿಪ್ಟಿನಲ್ಲಿ ವಾಸಿಸಿದ ಎಲ್ಲಾ ಯೆಹೂದ್ಯರಿಗಾಗಿ ಕೊಡಲಾಗಿತ್ತು. ಈ ಸಂದೇಶವು ಮಿಗ್ದೋಲ್, ತಹಪನೇಸ್, ನೋಫ್ ಪಟ್ಟಣಗಳಲ್ಲಿ ಮತ್ತು ಈಜಿಪ್ಟಿನ ದಕ್ಷಿಣ ಭಾಗದಲ್ಲಿ ವಾಸಮಾಡುತ್ತಿದ್ದ ಯೆಹೂದ್ಯರಿಗಾಗಿ ಇತ್ತು. ಆ ಸಂದೇಶವೇನೆಂದರೆ:
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಸುಟ್ಟುಹಾಕುತ್ತೇನೆ. ನಿನ್ನ ಎಳೆ ಸಿಂಹಗಳನ್ನು ರಣರಂಗದಲ್ಲಿ ಸಾಯಿಸುತ್ತೇನೆ. ಈ ಭೂಮಿಯ ಮೇಲೆ ಇನ್ನು ಯಾರನ್ನೂ ಭೇಟಿ ಮಾಡದಿರುವೆ. ನಿನ್ನ ಸಂದೇಶವಾಹಕರಿಂದ ಕೆಟ್ಟ ಸಮಾಚಾರವನ್ನು ಜನರು ಇನ್ನು ಎಂದಿಗೂ ಕೇಳರು.”
“ಯೆಹೂದದ ಜನರೇ ನಾನು ನಿಮ್ಮನ್ನು ಶಿಕ್ಷಿಸಿದೆ, ಆದರೆ ಅದರಿಂದ ಪ್ರಯೋಜನವಾಗಲಿಲ್ಲ. ಶಿಕ್ಷಿಸಿದರೂ ನೀವು ಹಿಂತಿರುಗಿ ಬರಲಿಲ್ಲ. ನಿಮ್ಮಲ್ಲಿಗೆ ಬಂದ ಪ್ರವಾದಿಗಳನ್ನು ನೀವು ಕತ್ತಿಯಿಂದ ಕೊಂದುಹಾಕಿದಿರಿ. ನೀವು ಅಪಾಯಕಾರಿಯಾದ ಸಿಂಹದಂತಿದ್ದು ಪ್ರವಾದಿಗಳನ್ನು ಕೊಂದುಹಾಕಿದಿರಿ.”
ಅನೇಕ ಸೈನಿಕರು ಆ ಬೋಳುಬೆಟ್ಟಗಳನ್ನು ತುಳಿದುಕೊಂಡು ಹೋದರು. ಆ ಸೈನ್ಯಗಳಿಂದ ಯೆಹೋವನು ಆ ದೇಶವನ್ನು ದಂಡಿಸಿದನು. ಆ ದೇಶದ ಒಂದು ತುದಿಯಿಂದ ಇನ್ನೊಂದು ತುದಿಯವರೆಗೆ ವಾಸಿಸಿದ ಎಲ್ಲಾ ಜನರನ್ನು ದಂಡಿಸಲಾಯಿತು. ಯಾರೂ ಸುರಕ್ಷಿತವಾಗಿ ಉಳಿಯಲಿಲ್ಲ.
ಅಶ್ಶೂರವು ಕತ್ತಿಯಿಂದ ನಾಶವಾಗುವದು ಖಂಡಿತ. ಆದರೆ ಆ ಕತ್ತಿಯು ಮನುಷ್ಯನ ಕತ್ತಿಯಲ್ಲ. ಖಡ್ಗವು ಅವರನ್ನು ನುಂಗುವುದು, ಆದರೆ ಅದು ಮನುಷ್ಯನ ಖಡ್ಗವಲ್ಲ. ಅಶ್ಶೂರವು ದೇವರ ಖಡ್ಗದಿಂದ ಓಡಿಹೋಗುವದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು.
ಅಬ್ನೇರನು ಯೋವಾಬನಿಗೆ, “ನಾವು ಎಂದೆಂದಿಗೂ ಯುದ್ಧ ಮಾಡಿ ಒಬ್ಬರನ್ನೊಬ್ಬರು ಕೊಲ್ಲಬೇಕೇ? ಇದು ಹಗೆತನದಲ್ಲಿ ಅಂತ್ಯಗೊಳ್ಳುತ್ತದೆಂಬುದು ನಿಜವಾಗಿಯೂ ನಿನಗೆ ತಿಳಿದಿದೆ. ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲು ನಿನ್ನ ಜನರಿಗೆ ಹೇಳು” ಎಂದು ಕೂಗಿ ಹೇಳಿದನು.
ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು:
ಈಜಿಪ್ಟಿನ ಜನಗಳೇ, ನಿಮ್ಮ ವಸ್ತುಗಳನ್ನು ಕಟ್ಟಿಕೊಂಡು ಸೆರೆವಾಸಕ್ಕೆ ಸಿದ್ಧರಾಗಿರಿ. ಏಕೆಂದರೆ ನೋಫ್ ಪಟ್ಟಣವು ಹಾಳುಬಿದ್ದ ನಿರ್ಜನವಾದ ಪ್ರದೇಶವಾಗುವುದು. ನಗರಗಳನ್ನು ನಾಶಪಡಿಸಲಾಗುವುದು; ಅವುಗಳು ನಿರ್ಜನವಾಗುವವು.
ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಈಜಿಪ್ಟಿನಲ್ಲಿರುವ ವಿಗ್ರಹಗಳನ್ನು ನಾನು ನಾಶಮಾಡುವೆನು. ಮೆಂಫೀಸಿನ ವಿಗ್ರಹಗಳನ್ನು ತೆಗೆದುಬಿಡುವೆನು. ಈಜಿಪ್ಟಿನಲ್ಲಿ ಇನ್ನು ಮುಂದೆ ರಾಜನಿರನು. ಅವರಲ್ಲಿ ಭಯವನ್ನು ಹುಟ್ಟಿಸುವೆನು.
ಶತ್ರುಗಳು ಇಸ್ರೇಲರಿಂದ ಎಲ್ಲವನ್ನು ದೋಚಿಕೊಂಡು ಹೋದುದರಿಂದ ಇಸ್ರೇಲರು ಬಿಟ್ಟು ಹೊರಟರು. ಈಜಿಪ್ಟ್ ಅವರನ್ನು ಒಟ್ಟಿಗೆ ಸೇರಿಸಿಕೊಳ್ಳುವುದು. ಮೆಂಫಿಸ್ ಪಟ್ಟಣವು ಅವರನ್ನು ಹೂಳಿಡುವದು. ಅವರ ಬೆಳ್ಳಿಯ ನಿಕ್ಷೇಪದ ಮೇಲೆ ಕಳೆ ಬೆಳೆಯುವದು. ಇಸ್ರೇಲರು ವಾಸಿಸಿದ್ದಲ್ಲಿ ಮುಳ್ಳಿನ ಗಿಡಗಳು ಬೆಳೆಯುವವು.