ಯೆರೆಮೀಯ 46:18 - ಪರಿಶುದ್ದ ಬೈಬಲ್18 ಈ ಸಂದೇಶವು ರಾಜನಿಂದ ಬಂದದ್ದು. ಆ ರಾಜನೇ ಸರ್ವಶಕ್ತನಾದ ಯೆಹೋವನು. “ನನ್ನ ಜೀವದಾಣೆಯಾಗಿ ಹೇಳುತ್ತೇನೆ. ಬಲಿಷ್ಠನಾದ ನಾಯಕನು ಬರುವನು. ಅವನು ತಾಬೋರ್ ಬೆಟ್ಟದಂತೆಯೂ ಸಮುದ್ರದ ಸಮೀಪದ ಕರ್ಮೆಲ್ ಗುಡ್ಡದಂತೆಯೂ ಇರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇಗೋ, ಸೇನಾಧೀಶ್ವರ ಸರ್ವೇಶ ಎಂಬ ಹೆಸರುಳ್ಳ ರಾಜಾಧಿರಾಜನ ನುಡಿ: ‘ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದಂತೆ ಉನ್ನತನೊಬ್ಬನು ಬರುವನು, ನನ್ನ ಜೀವದಾಣೆ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದ ಹಾಗೂ ಉನ್ನತನಾದವನೊಬ್ಬನು ಬರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು. ಅಧ್ಯಾಯವನ್ನು ನೋಡಿ |
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.
ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.
ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು “ದೇವರ ಆಣೆಯಾಗಿ” ಎಂದು ಹೇಳಲಾರರು.