Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:2 - ಪರಿಶುದ್ದ ಬೈಬಲ್‌

2 ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಆ ಸೈನ್ಯದ ಮೇಲೆ ದಾಳಿಮಾಡಿದ ವಿಷಯ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಐಗುಪ್ತವನ್ನು ಕುರಿತದ್ದು. ಐಗುಪ್ತದ ಅರಸನಾದ ಫರೋಹನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈಜಿಪ್ಟನ್ನು ಕುರಿತದ್ದು: ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿಯಿರುವ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಆ ಸೈನ್ಯದ ಮೇಲೆ ದಾಳಿಮಾಡಿದ್ದರ ವಿಷಯ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:2
16 ತಿಳಿವುಗಳ ಹೋಲಿಕೆ  

ಯೋಷೀಯನ ಕಾಲದಲ್ಲಿ ಈಜಿಪ್ಟಿನ ರಾಜನಾದ ಫರೋಹ-ನೆಕೋ ಎಂಬವನು ಅಶ್ಶೂರದ ರಾಜನ ವಿರುದ್ಧವಾಗಿ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ರಾಜನಾದ ಯೋಷೀಯನು ಫರೋಹ ನೆಕೋವನ ವಿರುದ್ಧ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಆದರೆ ಮೆಗಿದ್ದೋವಿನಲ್ಲಿ ಫರೋಹ ನೆಕೋವನು ಯೋಷೀಯನನ್ನು ನೋಡಿ, ಅವನನ್ನು ಕೊಂದು ಹಾಕಿದನು.


“ಈಜಿಪ್ಟಿನಲ್ಲಿ ಈ ಸಂದೇಶವನ್ನು ಪ್ರಕಟಿಸು, ಮಿಗ್ದೋಲ್ ನಗರದಲ್ಲಿ ಇದನ್ನು ಪ್ರಚುರಪಡಿಸು. ನೋಫ್ ಮತ್ತು ತಹಪನೇಸ್‌ಗಳಲ್ಲಿ ಪ್ರಚುರಪಡಿಸಿರಿ, ‘ಯುದ್ಧಕ್ಕೆ ಸಿದ್ಧರಾಗಿರಿ, ಏಕೆಂದರೆ ನಿಮ್ಮ ಸುತ್ತಲೂ ಜನರು ಖಡ್ಗಕ್ಕೆ ಆಹುತಿಯಾಗಿದ್ದಾರೆ.’


ಯೆಹೋಯಾಕೀಮನು ಯೋಷೀಯನ ಮಗ. ಯೆಹೋಯಾಕೀಮನು ಯೆಹೂದದ ರಾಜನಾದ ನಾಲ್ಕನೇ ವರ್ಷದಲ್ಲಿ ಪ್ರವಾದಿಯಾದ ಯೆರೆಮೀಯನು ನೇರೀಯನ ಮಗನಾದ ಬಾರೂಕನಿಗೆ ಹೀಗೆ ಹೇಳಿದನು. ಬಾರೂಕನು ಅದನ್ನು ಒಂದು ಸುರುಳಿಯ ಮೇಲೆ ಬರೆದನು. ಯೆರೆಮೀಯನು ಬಾರೂಕನಿಗೆ ಹೇಳಿದ್ದು ಹೀಗೆ:


ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೋವನ ಸಂದೇಶ ಹೀಗಿತ್ತು:


ಈಜಿಪ್ಟಿನ ರಾಜನಾದ ಫರೋಹನು ಸಹ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆ. ಅವನ ಅಧಿಕಾರಿಗಳೂ ಪ್ರಮುಖ ನಾಯಕರೂ ಅವನ ಎಲ್ಲಾ ಜನರೂ ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ಯೆಹೂದದ ಎಲ್ಲಾ ಜನರ ಬಗ್ಗೆ ಯೆರೆಮೀಯನಿಗೆ ಈ ಸಂದೇಶವು ಬಂದಿತು. ಈ ಸಂದೇಶವು ಯೆಹೂದದ ಅರಸನಾದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಂದಿತು. ಯೆಹೋಯಾಕೀಮನು ಯೋಷೀಯನ ಮಗ. ಅವನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಅಂದರೆ ಬಾಬಿಲೋನಿನಲ್ಲಿ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ


ಕಲ್ನೋ ನಗರವು ಕರ್ಕೆಮೀಷ್ ಹಾಗೆ ಇರುವದು. ಹಮಾತ್ ನಗರವು ಅರ್ಪದ್ ನಗರದಂತಿರುವದು. ಸಮಾರ್ಯಪಟ್ಟಣವು ದಮಸ್ಕದಂತಿರುವದು.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ನೀನು ಮುರಿದುಬಿದ್ದಿರುವ ದಂಟನ್ನು ಊರುಗೋಲೆಂದು ನಂಬಿ ಭರವಸೆಯಿಟ್ಟಿರುವೆ! ಈಜಿಪ್ಟ್ ಊರುಗೋಲಾಗಿದೆ. ಒಬ್ಬ ಮನುಷ್ಯನು ಈ ಊರುಗೋಲಿನ ಮೇಲೆ ಭರವಸೆಯಿಟ್ಟರೆ ಅದು ಮುರಿದು ಬೀಳುತ್ತದೆ ಮತ್ತು ಅವನ ಕೈಯನ್ನೇ ಚುಚ್ಚಿ ಅವನಿಗೆ ನೋವನ್ನು ಉಂಟುಮಾಡುತ್ತದೆ! ಈಜಿಪ್ಟಿನ ರಾಜನು ತನ್ನನ್ನು ನಂಬಿದ ಜನರೆಲ್ಲರಿಗೂ ಇದೇ ರೀತಿಯಲ್ಲಿದ್ದಾನೆ.


ಫರೋಹ ನೆಕೋವನು ಹಮಾತ್ ದೇಶದ ರಿಬ್ಲಾ ಎಂಬಲ್ಲಿ ಯೆಹೋವಾಹಾಜನನ್ನು ಸೆರೆಹಿಡಿದನು. ಆದ್ದರಿಂದ ಯೆಹೋವಾಹಾಜನು ಜೆರುಸಲೇಮಿನಲ್ಲಿ ಆಳಲಿಲ್ಲ. ಫರೋಹ ನೆಕೋವನು ಮೂರುಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿಯನ್ನು ಮತ್ತು ಮೂವತ್ನಾಲ್ಕು ಕಿಲೋಗ್ರಾಂ ಚಿನ್ನವನ್ನು ಕೊಡುವಂತೆ ಯೆಹೂದದವರನ್ನು ಬಲವಂತಪಡಿಸಿದನು.


ಈಜಿಪ್ಟಿನ ರಾಜನು ಈಜಿಪ್ಟನ್ನು ಬಿಟ್ಟು ಹೊರಗೆ ಹೋಗಲಿಲ್ಲ. ಏಕೆಂದರೆ ಬಾಬಿಲೋನ್ ರಾಜನು, ಈಜಿಪ್ಟಿನ ಹಳ್ಳದಿಂದ ಯೂಫ್ರೇಟೀಸ್ ನದಿಯವರೆಗಿನ ದೇಶವನ್ನೆಲ್ಲಾ ಆಕ್ರಮಿಸಿಕೊಂಡಿದ್ದನು.


ನೆಬೂಕದ್ನೆಚ್ಚರನು ಇಲ್ಲಿಗೆ ಬಂದು ಈಜಿಪ್ಟಿನ ಮೇಲೆ ಧಾಳಿ ಮಾಡುವನು. ಕೊಲ್ಲಬೇಕೆಂದು ಗೊತ್ತುಮಾಡಿದವರನ್ನು ಕೊಂದುಹಾಕುವನು; ಸೆರೆಹಿಡಿಯಬೇಕೆಂದು ಗೊತ್ತು ಮಾಡಿಕೊಂಡವರನ್ನು ಸೆರೆಹಿಡಿಯುವನು; ಖಡ್ಗದಿಂದ ಕೊಲೆಯಾಗಬೇಕೆಂದು ಗೊತ್ತುಪಡಿಸಿದವರ ಸಲುವಾಗಿ ಅವನು ಖಡ್ಗವನ್ನು ತರುವನು.


ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.


ಆ ಸಮಯದಲ್ಲಿ ಈಜಿಪ್ಟಿನ ಮಧ್ಯದಲ್ಲಿ ಯೆಹೋವನಿಗಾಗಿ ಒಂದು ವೇದಿಕೆ ಇರುವದು. ಈಜಿಪ್ಟಿನ ಗಡಿಯಲ್ಲಿ ಯೆಹೋವನ ಗೌರವಾರ್ಥವಾಗಿ ಸ್ಮಾರಕಸ್ತಂಭ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು