ಯೆರೆಮೀಯ 46:20 - ಪರಿಶುದ್ದ ಬೈಬಲ್20 “ಈಜಿಪ್ಟು ಸುಂದರವಾದ ಹಸುವಿನಂತಿದೆ, ಆದರೆ ಉತ್ತರದಿಂದ ತೊಣಚಿಯು ಅದನ್ನು ಪೀಡಿಸಲು ಬರುತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಐಗುಪ್ತವು ಅಂದವಾದ ಕಡಸಾಗಿದೆ; ತೊಣಚೆಯ ಹುಳಗಳು ಉತ್ತರ ದಿಕ್ಕಿನಿಂದ ಅದರ ಮೇಲೆ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಈಜಿಪ್ಟ್ ಅಂದವಾದ ಒಂದು ಕಡಸು ಅದಕ್ಕೆ ಹತ್ತಿಬಿಟ್ಟಿದೆ ಬಡಗಲಿಂದ ಬಂದ ಉಣ್ಣೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಐಗುಪ್ತವು ಅಂದವಾದ ಕಡಸಾಗಿದೆ; ತೊಣಚೆಯು ಬಡಗಲಿಂದ ಅದರ ಮೇಲೆ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಈಜಿಪ್ಟ್ ದೇಶವು ಬಹಳ ಅಂದವಾದ ಕಡಸಾಗಿದೆ; ಆದರೆ ಉತ್ತರದಿಂದ ತೊಣಚೆಯು ಬಂದೇ ಬರುತ್ತದೆ. ಅಧ್ಯಾಯವನ್ನು ನೋಡಿ |
“ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.