Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:21 - ಪರಿಶುದ್ದ ಬೈಬಲ್‌

21 ಸಂಬಳಕ್ಕಾಗಿ ದುಡಿಯುವ ಈಜಿಪ್ಟಿನ ಸೈನಿಕರು ಕೊಬ್ಬಿದ ಕರುಗಳಂತಿದ್ದಾರೆ. ಅವರೆಲ್ಲರು ಹಿಂತಿರುಗಿ ಓಡಿಹೋಗುವರು. ಅವರು ಧೈರ್ಯದಿಂದ ಧಾಳಿಯನ್ನು ಎದುರಿಸಲಾರರು. ಅವರ ವಿನಾಶದ ಕಾಲ ಬರುತ್ತಿದೆ. ಬೇಗ ಅವರನ್ನು ದಂಡಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸಂಬಳಕ್ಕಾಗಿ ಈಜಿಪ್ಟ್ ಸೇರಿದ ದಂಡಾಳುಗಳು ನೋಡಲಿಕ್ಕೆ ಅವರು ಕೊಬ್ಬಿದ ಕರುಗಳು. ಆದರೂ ಬೆಂಗೊಟ್ಟು ಓಡಿಹೋಗಿರುವರು ನಿಲ್ಲದೆ, ವಿಪತ್ಕಾಲ, ದಂಡನೆಯ ದಿನ, ಬಂದೊದಗಿದೆ ಅವರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ; ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಕರುಗಳಂತಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಏಕೆಂದರೆ ಅವರ ಆಪತ್ತಿನ ದಿವಸವೂ, ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:21
25 ತಿಳಿವುಗಳ ಹೋಲಿಕೆ  

ನಾನು ನೋಡುತ್ತಿರುವುದೇನು? ಸೈನ್ಯವು ಗಾಬರಿಪಟ್ಟಿದೆ. ಸೈನಿಕರು ಓಡಿಹೋಗುತ್ತಿದ್ದಾರೆ. ಅವರ ಶೂರಸೈನಿಕರು ಸೋತಿದ್ದಾರೆ. ಅವರು ಅವಸರದಿಂದ ಓಡಿಹೋಗುತ್ತಿದ್ದಾರೆ. ಅವರು ಹಿಂದಕ್ಕೆ ತಿರುಗಿ ಸಹ ನೋಡುತ್ತಿಲ್ಲ. ಎಲ್ಲಾ ಕಡೆಗೂ ಭೀತಿ ಆವರಿಸಿಕೊಂಡಿದೆ” ಯೆಹೋವನು ಹೀಗೆಂದನು.


ಅರಾಮ್ಯರ ಸೇನೆಯು ರಥಗಳ, ಕುದುರೆಗಳ ಮತ್ತು ಮಹಾಸೇನೆಯ ರಣಘೋಷವನ್ನು ಕೇಳುವಂತೆ ಯೆಹೋವನು ಮಾಡಿದ್ದನು. ಅರಾಮ್ಯ ಸೈನಿಕರು, “ಇಸ್ರೇಲಿನ ರಾಜನು, ಹಿತ್ತೀಯರಿಗೆ ಮತ್ತು ಈಜಿಪ್ಟಿನವರಿಗೆ ಹಣಕೊಟ್ಟು ನಮ್ಮ ವಿರುದ್ಧ ಹೋರಾಟಕ್ಕೆ ಬರುವಂತೆ ಮಾಡಿದ್ದಾನೆ” ಎಂದು ಮಾತನಾಡಿಕೊಂಡು,


ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವೆ. ನೀನು ಈಗ ಗಲಿಬಿಲಿಗೆ ಒಳಗಾಗುವೆ!


ನನ್ನ ಜನರ ನಗರದ ಬಾಗಿಲನ್ನು ನೀನು ಪ್ರವೇಶಿಸಿ ಅವರ ತೊಂದರೆಗಳನ್ನು ನೋಡಿ ನೀನು ಹಾಸ್ಯ ಮಾಡಿದೆ. ನೀನು ಹಾಗೆ ಮಾಡಬಾರದಾಗಿತ್ತು. ಅವರು ಸಂಕಟಪಡುತ್ತಿರುವಾಗ ನೀನು ಅವರ ಐಶ್ವರ್ಯವನ್ನು ಸೂರೆಮಾಡಿದೆ. ನೀನು ಹಾಗೆ ಮಾಡಬಾರದಿತ್ತು.


ಆದರೆ ಈಗ ನೀವು ಸುಖದ ಜೀವಿತದಲ್ಲಿ ಆನಂದಿಸುತ್ತಿದ್ದೀರಿ, ದಂತದ ಮಂಚದಲ್ಲಿ ಮಲಗುವಿರಿ; ಸುಖಾಸನಗಳ ಮೇಲೆ ಬಿದ್ದುಕೊಳ್ಳುವಿರಿ. ಹಿಂಡಿನಿಂದ ಎಳೇ ಕುರಿಮರಿಯನ್ನೂ ಹಟ್ಟಿಯಿಂದ ಎಳೇ ಕರುವನ್ನೂ ಭಕ್ಷಿಸುತ್ತೀರಿ.


ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”


ಬಾಬಿಲೋನಿನ ಎಲ್ಲಾ ತರುಣರನ್ನು ಕೊಂದುಹಾಕಿರಿ. ಅವರನ್ನು ಕತ್ತರಿಸಿಬಿಡಿ. ಅವರನ್ನು ಸೋಲಿಸುವ ಸಮಯ ಬಂದಿದೆ. ಇದು ಅವರಿಗೆ ಕೇಡಿನ ಕಾಲ. ಇದು ಅವರನ್ನು ದಂಡಿಸುವ ಸಮಯ.


ಟಗರುಗಳು, ದನಕುರಿಗಳು ಮತ್ತು ಬಲವಾದ ಹೋರಿಗಳು ಕೊಲ್ಲಲ್ಪಡುವವು. ಭೂಮಿಯು ಅವುಗಳ ರಕ್ತದಿಂದ ತುಂಬಿಹೋಗುವದು. ಅಲ್ಲಿನ ಧೂಳು ಅವುಗಳ ಕೊಬ್ಬಿನಿಂದ ಆವೃತವಾಗಿದೆ.


ಆದರೆ ನಮ್ಮ ಒಡೆಯನು ಆ ದುಷ್ಟರನ್ನು ನೋಡಿ ನಗುವನು. ಅವರಿಗೆ ಬರಲಿರುವ ಆಪತ್ತುಗಳು ಆತನಿಗೆ ತಿಳಿದಿವೆ.


ಅಮ್ಮೋನಿಯರು ತಾವು ದಾವೀದನಿಗೆ ಶತ್ರುಗಳಾಗಿರುವುದಾಗಿ ತಿಳಿದುಕೊಂಡರು. ಆದ್ದರಿಂದ ಅಮ್ಮೋನಿಯರು ಹಣಕೊಟ್ಟು ಬೇತ್‌ರೆಹೋಬ್ ಮತ್ತು ಚೋಬಾಗಳಿಂದ ಅರಾಮ್ಯರ ಇಪ್ಪತ್ತುಸಾವಿರ ಮಂದಿ ಭೂದಳವನ್ನು ಬರಮಾಡಿಕೊಂಡರು. ಅಮ್ಮೋನಿಯರು ಮಾಕಾದ ರಾಜನನ್ನು ಮತ್ತು ಅವನ ಒಂದು ಸಾವಿರ ಸೈನಿಕರನ್ನು ಹಾಗೂ ಟೋಬ್‌ನಿಂದ ಹನ್ನೆರಡು ಸಾವಿರ ಮಂದಿ ಸೈನಿಕರನ್ನು ಬರಮಾಡಿಕೊಂಡರು.


ಯಾಕೆಂದರೆ ನೀನು ಯಾವಾಗಲೂ ನನ್ನ ಜನಕ್ಕೆ ವಿರೋಧವಾಗಿರುವೆ. ನೀನು ಇಸ್ರೇಲರ ವಿರುದ್ಧವಾಗಿ ಕತ್ತಿಯನ್ನೆತ್ತಿರುವೆ. ಅವರು ಆಗ ಸಂಕಟದಲ್ಲಿದ್ದರು ಮತ್ತು ತಮ್ಮ ಶಿಕ್ಷೆಯ ಕಡೆಗಾಲದಲ್ಲಿದ್ದರು.’”


“ಬಾಬಿಲೋನೇ, ನೀನು ಉಲ್ಲಾಸದಲ್ಲಿರುವೆ ಮತ್ತು ಸಂತೋಷದಲ್ಲಿರುವೆ. ನೀನು ನನ್ನ ಪ್ರದೇಶವನ್ನು ತೆಗೆದುಕೊಂಡೆ. ನೀನು ಕಣತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿರುವೆ. ನಿನ್ನ ನಗು ಕುದುರೆಗಳ ಸಂತೋಷಭರಿತ ಕೆನೆತದಂತೆ ಇದೆ.


ಅಶ್ವಾರೋಹಿಗಳೇ, ಯುದ್ಧದಲ್ಲಿ ಧುಮುಕಿರಿ, ಸಾರಥಿಗಳೇ, ರಥಗಳನ್ನು ವೇಗವಾಗಿ ಓಡಿಸಿರಿ. ಶೂರ ಸೈನಿಕರೇ, ಮುನ್ನುಗ್ಗಿರಿ; ಕೂಷ್ಯ ಮತ್ತು ಪೂಟ್ಯ ಸೈನಿಕರೇ, ನಿಮ್ಮ ಗುರಾಣಿಗಳನ್ನು ಹಿಡಿದುಕೊಂಡು ಹೋಗಿರಿ. ಲೂದ್ಯ ಸೈನಿಕರೇ, ನಿಮ್ಮ ಬಿಲ್ಲುಗಳನ್ನು ಉಪಯೋಗಿಸಿರಿ.


ಪೂರ್ವದಿಂದ ಬರುವ ಗಾಳಿಯಂತೆ ಯೆಹೂದದ ಜನರನ್ನು ಅವರ ವೈರಿಗಳ ಎದುರಿನಲ್ಲಿ ಚದರಿಸಿಬಿಡುವೆನು. ನಾನು ಅವರನ್ನು ನಾಶಮಾಡುವೆನು. ಆ ಸಮಯದಲ್ಲಿ ಅವರಿಗೆ ಸಹಾಯಮಾಡಲು ನಾನು ಬರುವದಿಲ್ಲ. ಇಲ್ಲ! ನಾನು ಬಿಟ್ಟುಹೋಗುವುದನ್ನು ಅವರು ನೋಡುವರು.”


ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.


ದ್ವೇಷವಿರುವಲ್ಲಿ ಹೆಚ್ಚಾಗಿ ತಿನ್ನುವುದಕ್ಕಿಂತಲೂ ಪ್ರೀತಿಯಿರುವಲ್ಲಿ ಸ್ವಲ್ಪ ತಿನ್ನುವುದೇ ಉತ್ತಮ.


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


“ಆಮೇಲೆ ರಾಜನು ಇನ್ನೂ ಕೆಲವು ಸೇವಕರನ್ನು ಕರೆದು, ‘ಈ ಜನರನ್ನು ನಾನು ಆಗಲೇ ಆಹ್ವಾನಿಸಿದ್ದೇನೆ. ಆದ್ದರಿಂದ ಈಗ ಔತಣವು ಸಿದ್ಧವಾಗಿದೆ. ಅಡಿಗೆಗಾಗಿ ಕೊಬ್ಬಿದ ಎತ್ತುಗಳನ್ನು ಮತ್ತು ಕರುಗಳನ್ನು ಕೊಯ್ಸಿದ್ದೇನೆ. ಎಲ್ಲವೂ ಸಿದ್ಧವಾಗಿದೆ. ಮದುವೆ ಔತಣಕ್ಕೆ ಬನ್ನಿ ಎಂದು ಅವರಿಗೆ ತಿಳಿಸಿ’ ಎಂದು ಹೇಳಿ ಕಳುಹಿಸಿದನು.


ಈಜಿಪ್ಟು ಬುಸುಗುಟ್ಟಿ ತಪ್ಪಿಸಿಕೊಳ್ಳಲು ಪ್ರಯತ್ನಮಾಡುವ ಹಾವಿನಂತಿದೆ. ವೈರಿಗಳು ಬಹಳ ಹತ್ತಿರಕ್ಕೆ ಬಂದಿದ್ದಾರೆ. ಈಜಿಪ್ಟಿನ ಸೈನಿಕರು ಓಡಿಹೋಗಲು ಪ್ರಯತ್ನ ಮಾಡುತ್ತಿದ್ದಾರೆ. ವೈರಿಗಳು ಕೊಡಲಿಯನ್ನು ಹಿಡಿದುಕೊಂಡು ಈಜಿಪ್ಟಿನ ಮೇಲೆ ಬೀಳುವರು; ಅವರು ಮರ ಕಡಿಯುವ ಜನರಂತಿದ್ದಾರೆ.”


ಜನರು ಅಂಜಿ ಓಡಿಹೋಗುವರು; ಆಳವಾದ ಗುಂಡಿಗಳಲ್ಲಿ ಬೀಳುವರು. ಯಾರಾದರೂ ಆ ಆಳವಾದ ಗುಂಡಿಗಳಿಂದ ಮೇಲಕ್ಕೆ ಹತ್ತಿ ಬಂದರೆ ಅವರನ್ನು ಬಲೆಯಲ್ಲಿ ಹಿಡಿಯಲಾಗುವುದು. ನಾನು ಮೋವಾಬಿಗೆ ದಂಡನೆಯ ವರ್ಷವನ್ನು ತರುವೆನು” ಎಂದು ಯೆಹೋವನು ನುಡಿದನು.


ದೆದಾನಿನ ನಿವಾಸಿಗಳೇ, ಓಡಿಹೋಗಿರಿ, ಅಡಗಿಕೊಳ್ಳಿರಿ; ಏಕೆಂದರೆ ಏಸಾವನು ಮಾಡಿದ ತಪ್ಪಿಗಾಗಿ ನಾನು ಅವನನ್ನು ದಂಡಿಸುವೆನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಈಜಿಪ್ಟಿನ ರಾಜನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಅವನ ಎರಡು ಕೈಗಳನ್ನೂ ಮುರಿಯುವೆನು. ಒಂದು ಕೈ ಮುರಿಯಲ್ಪಟ್ಟಿತ್ತು. ಇನ್ನೊಂದು ಸರಿಯಾಗಿದ್ದ ಕೈಯೂ ಮುರಿಯಲ್ಪಡುವದು. ಅವನ ಕೈಯಿಂದ ಖಡ್ಗವು ಬೀಳುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು