Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:22 - ಪರಿಶುದ್ದ ಬೈಬಲ್‌

22 ಈಜಿಪ್ಟು ಬುಸುಗುಟ್ಟಿ ತಪ್ಪಿಸಿಕೊಳ್ಳಲು ಪ್ರಯತ್ನಮಾಡುವ ಹಾವಿನಂತಿದೆ. ವೈರಿಗಳು ಬಹಳ ಹತ್ತಿರಕ್ಕೆ ಬಂದಿದ್ದಾರೆ. ಈಜಿಪ್ಟಿನ ಸೈನಿಕರು ಓಡಿಹೋಗಲು ಪ್ರಯತ್ನ ಮಾಡುತ್ತಿದ್ದಾರೆ. ವೈರಿಗಳು ಕೊಡಲಿಯನ್ನು ಹಿಡಿದುಕೊಂಡು ಈಜಿಪ್ಟಿನ ಮೇಲೆ ಬೀಳುವರು; ಅವರು ಮರ ಕಡಿಯುವ ಜನರಂತಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವುದು; ಶತ್ರುಗಳು ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅವರ ಮೇಲೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈಜಿಪ್ಟ್ ದೇಶ ದೌಡಾಯಿಸುವ ಶಬ್ದ ಸರಿಯುವ ಸರ್ಪದ ಸಪ್ಪಳಕ್ಕೆ ಸಮಾನ. ಕೊಡಲಿಗಳಿಂದ ಮರಕಡಿಯುವವರಂತೆ ಶತ್ರುಗಳು ದಂಡೆತ್ತಿ ಬಂದು ಬೀಳುವರು ಆ ನಾಡಿನ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವದು; [ಶತ್ರುಗಳು] ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅದರ ಮೇಲೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದರ ಶಬ್ದವು ಸರ್ಪದಂತೆ ಹೊರಡುವುದು; ಏಕೆಂದರೆ ಅವರು ದಂಡಿನ ಸಂಗಡ ಸಂಚರಿಸಿ, ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:22
13 ತಿಳಿವುಗಳ ಹೋಲಿಕೆ  

ನೀನು ಸೋತುಹೋಗಿರುವೆ ಮತ್ತು ನೆಲದ ಮೇಲೆ ಕೆಡವಲ್ಪಟ್ಟಿರುವೆ. ಈಗ ನಿನ್ನ ಸ್ವರವು ಪ್ರೇತದ ಸ್ವರದಂತೆ ನನಗೆ ಕೇಳಿಸುತ್ತದೆ. ಅದು ಬಲಹೀನವಾದ ಸ್ವರವಾಗಿದೆ.”


ನೀನು ದುಷ್ಟ ಅರಸನಾಗಿದ್ದೆ, ಈಗ ನಿನಗೆ ಅಂತ್ಯವು ಬಂತು. ತುರಾಯಿ ಮರಗಳೂ ಲೆಬನೋನಿನ ದೇವದಾರು ವೃಕ್ಷಗಳೂ ಹರ್ಷಗೊಂಡಿವೆ. ಆ ಮರಗಳು ಹೀಗೆ ಹೇಳುತ್ತಿವೆ: ಅರಸನು ನಮ್ಮನ್ನು ಕಡಿದುರುಳಿಸಿದನು. ಈಗ ಅರಸನೇ ಉರುಳಿಬಿದ್ದಿದ್ದಾನೆ. ಅವನು ಮತ್ತೆಂದಿಗೂ ಏಳುವುದಿಲ್ಲ.


ದೇವದಾರು ಮರಗಳು ಬೀಳುವಾಗ ಓಕ್ ಮರಗಳು ರೋದಿಸುವವು. ಆ ಬಲವಾದ ಮರಗಳನ್ನು ತೆಗೆದುಕೊಂಡು ಹೋಗಲಾಗುವುದು. ಅಡವಿಯು ಕಡಿದುಹಾಕಲ್ಪಟ್ಟಿದ್ದಕ್ಕಾಗಿ ಬಾಷಾನಿನ ಶ್ರೇಷ್ಠ ವೃಕ್ಷಗಳು ದುಃಖಿಸುವವು.


ಜನಾಂಗಗಳು ಆ ಅದ್ಭುತವನ್ನು ನೋಡಿ ನಾಚಿಕೆಗೊಳ್ಳುವರು. ನನ್ನ ಶಕ್ತಿಯ ಎದುರು ಅವರ ಬಲವು ಏನೂ ಅಲ್ಲವೆಂದು ತಿಳಿಯುವರು. ಅವರು ಆಶ್ಚರ್ಯಚಕಿತರಾಗಿ ತಮ್ಮ ಬಾಯಿಗಳ ಮೇಲೆ ಕೈಗಳನ್ನಿಡುವರು. ತಮ್ಮ ಕಿವಿಗಳನ್ನು ಮುಚ್ಚಿ ವಾರ್ತೆ ಕೇಳಲು ನಿರಾಕರಿಸುವರು.


ಮುಂದೆ ಸಂಭವಿಸುವ ಘಟನೆಗಳ ಬಗ್ಗೆ ನಾನು ಬಹಳ ದುಃಖಿತನಾಗಿದ್ದೇನೆ. ನಾನು ಬಟ್ಟೆಯನ್ನಾಗಲಿ ಚಪ್ಪಲಿಯನ್ನಾಗಲಿ ಹಾಕಿಕೊಳ್ಳದೇ ಹೋಗುವೆನು. ನಾಯಿಯಂತೆ ಅಳುವೆನು, ಪಕ್ಷಿಯಂತೆ ಗೋಳಾಡುವೆನು.


ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.


ಕೊಡಲಿಯು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಗರಗಸವು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಆದರೆ ಅಶ್ಶೂರವು ತಾನು ದೇವರಿಗಿಂತಲೂ ಶಕ್ತಿಶಾಲಿ, ಸಾಮರ್ಥ್ಯವುಳ್ಳವನು ಎಂದು ನೆನಸುತ್ತಾನೆ. ಬೆತ್ತವು, ತನ್ನನ್ನು ಎತ್ತಿಹಿಡಿದು ಬೇರೆಯವರನ್ನು ಶಿಕ್ಷಿಸುವವನಿಗಿಂತ ತಾನು ಬಲಿಷ್ಠನೂ ಪ್ರಮುಖನೂ ಎಂದು ಹೇಳುವಂತಿದೆ ಇದು.


ಆದ್ದರಿಂದ ಅವರು ಜೀವಂತವಾಗಿ ಉಳಿಯಲಿ. ಆದರೆ ಅವರು ನಮ್ಮ ಸೇವಕರಾಗಲಿ. ಅವರು ನಮಗಾಗಿ ಸೌಧೆಯನ್ನು ಕಡಿಯಲಿ ಮತ್ತು ನಮ್ಮೆಲ್ಲರಿಗಾಗಿ ನೀರು ತಂದುಹಾಕಲಿ” ಎಂದು ಉತ್ತರಿಸಿದರು. ಹೀಗೆ ಜನನಾಯಕರು ಆ ಜನರೊಂದಿಗೆ ಮಾಡಿಕೊಂಡ ಶಾಂತಿ ಒಪ್ಪಂದವನ್ನು ಮುರಿಯಲಿಲ್ಲ.


ಶತ್ರು ಸೈನಿಕರಾದರೋ ಕಳೆಗುದ್ದಲಿಯಿಂದ ಕಳೆ ಕೀಳುತ್ತಿರುವ ಜನರಂತಿದ್ದಾರೆ.


ಸಂಬಳಕ್ಕಾಗಿ ದುಡಿಯುವ ಈಜಿಪ್ಟಿನ ಸೈನಿಕರು ಕೊಬ್ಬಿದ ಕರುಗಳಂತಿದ್ದಾರೆ. ಅವರೆಲ್ಲರು ಹಿಂತಿರುಗಿ ಓಡಿಹೋಗುವರು. ಅವರು ಧೈರ್ಯದಿಂದ ಧಾಳಿಯನ್ನು ಎದುರಿಸಲಾರರು. ಅವರ ವಿನಾಶದ ಕಾಲ ಬರುತ್ತಿದೆ. ಬೇಗ ಅವರನ್ನು ದಂಡಿಸಲಾಗುವುದು.


ಯೆಹೋವನು ಹೀಗೆನ್ನುತ್ತಾನೆ: “ವೈರಿಗಳು ಈಜಿಪ್ಟಿನ ಅರಣ್ಯವನ್ನು (ಸೈನ್ಯವನ್ನು) ಕತ್ತರಿಸುವರು. ಆ ಅರಣ್ಯದಲ್ಲಿ (ಸೈನ್ಯದಲ್ಲಿ) ಅನೇಕ ಮರಗಳಿವೆ (ಸೈನಿಕರಿದ್ದಾರೆ). ಆದರೂ ಅದನ್ನು ಕತ್ತರಿಸಲಾಗುವುದು. ಮಿಡತೆಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವೈರಿಗಳ ಸೈನಿಕರಿದ್ದಾರೆ. ಆ ಸೈನಿಕರನ್ನು ಯಾರಿಂದಲೂ ಎಣಿಸಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು