ಯೆರೆಮೀಯ 46:28 - ಪರಿಶುದ್ದ ಬೈಬಲ್28 ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನನ್ನ ಸೇವಕ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು; ವಿುತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವದಿಲ್ಲ. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿ ಓಡಿಸಿದೆನೋ, ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ಮುಗಿಸಿಬಿಡುತ್ತೇನೆ; ಆದರೆ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದರೂ ನಿನ್ನನ್ನು ಶಿಕ್ಷಿಸದೆ ಬಿಡುವುದಿಲ್ಲ.” ಅಧ್ಯಾಯವನ್ನು ನೋಡಿ |
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”
ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳೆಲ್ಲ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.