ಯೆರೆಮೀಯ 46:4 - ಪರಿಶುದ್ದ ಬೈಬಲ್4 ಕುದುರೆಗಳನ್ನು ಸಜ್ಜುಗೊಳಿಸಿರಿ. ಸೈನಿಕರೇ, ನಿಮ್ಮ ಕುದುರೆಯ ಮೇಲೆ ಹತ್ತಿರಿ, ಯುದ್ಧಕ್ಕಾಗಿ ನಿಮ್ಮನಿಮ್ಮ ಸ್ಥಾನಗಳಿಗೆ ಹೋಗಿರಿ. ನಿಮ್ಮ ಶಿರಸ್ತ್ರಾಣಗಳನ್ನು ಧರಿಸಿರಿ, ನಿಮ್ಮ ಭರ್ಜಿಗಳನ್ನು ಚೂಪುಗೊಳಿಸಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿ. ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ತೊಟ್ಟುಕೊಳ್ಳಿರಿ!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಬರ್ಜಿಗಳನ್ನು ಬೆಳಗಿರಿ, ಕವಚ ತೊಟ್ಟುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ರಾಹುತರೇ, ಕುದುರೆಗಳನ್ನು ಕಟ್ಟಿರಿ; ವಾಹನಾಶ್ವಗಳನ್ನು ಹತ್ತಿರಿ. ಎದ್ದು ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಂತುಕೊಳ್ಳಿರಿ; ಈಟಿಗಳನ್ನು ಮೆರುಗು ಮಾಡಿರಿ; ಕವಚಗಳನ್ನು ತೊಟ್ಟುಕೊಳ್ಳಿರಿ. ಅಧ್ಯಾಯವನ್ನು ನೋಡಿ |
ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.
ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.