Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:5 - ಪರಿಶುದ್ದ ಬೈಬಲ್‌

5 ನಾನು ನೋಡುತ್ತಿರುವುದೇನು? ಸೈನ್ಯವು ಗಾಬರಿಪಟ್ಟಿದೆ. ಸೈನಿಕರು ಓಡಿಹೋಗುತ್ತಿದ್ದಾರೆ. ಅವರ ಶೂರಸೈನಿಕರು ಸೋತಿದ್ದಾರೆ. ಅವರು ಅವಸರದಿಂದ ಓಡಿಹೋಗುತ್ತಿದ್ದಾರೆ. ಅವರು ಹಿಂದಕ್ಕೆ ತಿರುಗಿ ಸಹ ನೋಡುತ್ತಿಲ್ಲ. ಎಲ್ಲಾ ಕಡೆಗೂ ಭೀತಿ ಆವರಿಸಿಕೊಂಡಿದೆ” ಯೆಹೋವನು ಹೀಗೆಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಆದರೆ, ನನ್ನ ಕಣ್ಣಿಗೆ ಕಾಣುತ್ತಿರುವುದೇನು? ಅವರು ಓಡುತ್ತಿರುವರು ನೋಡು, ಧೈರ್ಯಗೆಟ್ಟು, ಬೆನ್ನುಗೊಟ್ಟು. ಅವರ ಶೂರರು ಹಿಂದಿರುಗದೆ ಓಡುತ್ತಿರುವರು ಪೆಟ್ಟುತಿಂದು, ದಿಗಿಲು ಕವಿದಿದೆ ಸುತ್ತ ಮುತ್ತಲು,” ಸರ್ವೇಶ್ವರನ ವಾಣಿ ಇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನು ಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತುಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಹಾ, ನಾನು ಕಂಡದ್ದೇನು? ಅವರು ದಿಗಿಲುಪಟ್ಟು ಹಿಂದಿರುಗಿದ್ದನ್ನು, ಅವರ ಪರಾಕ್ರಮಶಾಲಿಗಳು ಪೆಟ್ಟುತಿಂದಿದ್ದಾರೆ. ಹಿಂದೆ ನೋಡದೆ ಓಡಿಹೋಗುತ್ತಾರೆ, ಏಕೆಂದರೆ ಸುತ್ತಲು ದಿಗಿಲು ಕವಿದಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:5
19 ತಿಳಿವುಗಳ ಹೋಲಿಕೆ  

ಅವರ ಗುಡಾರಗಳನ್ನು ಮತ್ತು ಹಿಂಡುಗಳನ್ನು ತೆಗೆದುಕೊಂಡು ಹೋಗಲಾಗುವುದು. ಅವರ ಗುಡಾರಗಳನ್ನು, ಅವರ ಎಲ್ಲಾ ವಸ್ತುಗಳನ್ನು ಎತ್ತಿಕೊಂಡು ಹೋಗಲಾಗುವುದು. ಅವರ ಶತ್ರುಗಳು ಒಂಟೆಗಳನ್ನು ತೆಗೆದುಕೊಂಡು ಹೋಗುವರು. ‘ನಮ್ಮ ಸುತ್ತಲೂ ಭಯಂಕರ ಘಟನೆಗಳು ನಡೆಯುತ್ತಿವೆ’ ಎಂದು ತಮ್ಮತಮ್ಮಲ್ಲಿಯೇ ಕೂಗಿಕೊಳ್ಳುವರು.


ಊರ ಹೊರಗೆ ಹೋಗಬೇಡಿರಿ. ರಸ್ತೆಗಳ ಮೇಲೆ ಹೋಗಬೇಡಿರಿ. ಏಕೆಂದರೆ ಶತ್ರುವಿನ ಕೈಯಲ್ಲಿ ಖಡ್ಗವಿದೆ. ಎಲ್ಲಾ ಕಡೆಗೂ ಅಪಾಯವಿದೆ.


ಸಂಬಳಕ್ಕಾಗಿ ದುಡಿಯುವ ಈಜಿಪ್ಟಿನ ಸೈನಿಕರು ಕೊಬ್ಬಿದ ಕರುಗಳಂತಿದ್ದಾರೆ. ಅವರೆಲ್ಲರು ಹಿಂತಿರುಗಿ ಓಡಿಹೋಗುವರು. ಅವರು ಧೈರ್ಯದಿಂದ ಧಾಳಿಯನ್ನು ಎದುರಿಸಲಾರರು. ಅವರ ವಿನಾಶದ ಕಾಲ ಬರುತ್ತಿದೆ. ಬೇಗ ಅವರನ್ನು ದಂಡಿಸಲಾಗುವುದು.


ನಿನೆವೆಯು ನೀರು ಬತ್ತುತ್ತಿರುವ ಕೊಳದಂತಿದೆ. “ನಿಲ್ಲಿ, ನಿಲ್ಲಿ, ಓಡಿಹೋಗಬೇಡಿ” ಎಂದು ಜನರು ಬೊಬ್ಬಿಡುತ್ತಾರೆ. ಆದರೆ ಅದರಿಂದ ಪ್ರಯೋಜನವಿಲ್ಲ.


ಅನೇಕ ಮಂದಿ ನಿನಗೆ ಸಂಭವಿಸಿದ್ದನ್ನು ನೋಡಿ ಚಕಿತರಾಗುವರು. ನಾನು ನಿನ್ನ ಕಡೆಗೆ ಖಡ್ಗ ಬೀಸುವಾಗ ಅವರ ಅರಸರು ಬಹಳ ಭಯಗ್ರಸ್ತರಾಗುವರು; ನೀನು ಬೀಳುವ ದಿವಸದಲ್ಲಿ ಅರಸರು ಹೆದರಿ ನಡುಗುವರು. ಪ್ರತಿಯೊಬ್ಬ ರಾಜನು ತನ್ನ ಜೀವವನ್ನು ಉಳಿಸಿಕೊಳ್ಳಲು ಆತುರಪಡುವನು.”


ಈಜಿಪ್ಟೇ, ನಿಮ್ಮ ಶೂರಸೈನಿಕರು ಏಕೆ ಕೊಲ್ಲಲ್ಪಡುವರು? ಅವರು ನಿಲ್ಲಲಾರರು. ಏಕೆಂದರೆ ಯೆಹೋವನು ಅವರನ್ನು ನೆಲಕ್ಕೆ ತಳ್ಳುವನು.


ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.


ಆ ಸಮಯದಲ್ಲಿ ಈಜಿಪ್ಟಿನವರು ಭಯದಿಂದ ಕಂಗೆಟ್ಟ ಹೆಂಗಸರಂತಿರುವರು. ಅವರು ಸರ್ವಶಕ್ತನಾದವನಿಗೆ ಭಯಪಡುವರು. ಯೆಹೋವನು ಜನರನ್ನು ಶಿಕ್ಷಿಸಲು ತನ್ನ ಕೈಯನ್ನೆತ್ತುವನು. ಆಗ ಅವರೆಲ್ಲರೂ ಹೆದರಿಹೋಗುವರು.


ಅವರು ನಗರದ ಹೊರಕ್ಕೆ ಬಂದ ಮೇಲೆ ಆ ಪುರುಷರಲ್ಲಿ ಒಬ್ಬನು, “ಈಗ ಓಡಿಹೋಗಿ ನಿಮ್ಮ ಪ್ರಾಣವನ್ನು ಕಾಪಾಡಿಕೊಳ್ಳಿ; ನಗರದ ಕಡೆಗೆ ತಿರುಗಿ ನೋಡಬೇಡಿ; ಕಣಿವೆಯ ಯಾವ ಸ್ಥಳದಲ್ಲೂ ನಿಂತುಕೊಳ್ಳಬೇಡಿ; ತಪ್ಪಿಸಿಕೊಂಡು ಬೆಟ್ಟಗಳಿಗೆ ಓಡಿಹೋಗಿರಿ; ಇಲ್ಲವಾದರೆ, ಈ ನಗರದೊಡನೆ ನೀವೂ ನಾಶವಾಗುವಿರಿ” ಎಂದು ಹೇಳಿದನು.


ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.


ಪ್ರತಿಯೊಬ್ಬರೂ ಭಯಪೀಡಿತರಾಗುವರು. ಯಾತನೆವೇದನೆಗಳು ಅವರನ್ನು ಆಕ್ರಮಿಸುವವು. ಪ್ರಸವವೇದನೆಯಿಂದ ನರಳುವ ಹೆಂಗಸಿನಂತೆ ಅವರ ಹೊಟ್ಟೆಯಲ್ಲಿ ನೋವು ಉಂಟಾಗುವದು; ಅವರ ಮುಖಗಳು ಬೆಂಕಿಯಂತೆ ಕೆಂಪಗಾಗುವವು. ಭಯದ ಮುಖವು ತಮ್ಮ ನೆರೆಯವರಲ್ಲಿಯೂ ಇರುವದನ್ನು ನೋಡಿ ಜನರು ಆಶ್ಚರ್ಯಪಡುವರು.


ಆದರೆ ಕೆಲವರು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿಬಿಟ್ಟಿದ್ದಾರೆ. ಅವರ ಬಳಿಯಲ್ಲಿ ಬಂಗಾರದ ತಗಡಿನಿಂದ ಹೊದಿಸಿದ ವಿಗ್ರಹಗಳಿವೆ. ಅವರು ಆ ವಿಗ್ರಹಗಳಿಗೆ, ‘ನೀನೇ ನಮ್ಮ ದೇವರು’ ಎಂದು ಹೇಳುವರು. ಸುಳ್ಳುದೇವರುಗಳನ್ನು ಅವರು ಅವಲಂಬಿಸಿರುವದರಿಂದ ನಿರಾಶರಾಗುವರು.


ಆದರೆ ಸರ್ವಶಕ್ತನಾದ ಯೆಹೋವನು ಹೀಗೆನ್ನುವನು, “ನಾನು ಎಲ್ಲೆಡೆಗಳಿಂದಲೂ ನಿಮಗೆ ಆಪತ್ತುಗಳನ್ನು ತರುವೆನು. ನೀವೆಲ್ಲರೂ ಭಯದಿಂದ ಓಡಿಹೋಗುವಿರಿ. ಯಾರೂ ನಿಮ್ಮನ್ನು ಪುನಃ ಒಂದಡೆ ಸೇರಿಸಲಾರರು.”


ನೀವು ರಣವೀರರ ಮಾಂಸವನ್ನು ತಿನ್ನುವಿರಿ, ಪ್ರಪಂಚದ ನಾಯಕರ ರಕ್ತವನ್ನು ಕುಡಿಯುವಿರಿ. ಅವರೆಲ್ಲಾ ಬಾಷಾನಿನ ಕುರಿ, ಹೋತ, ಹೋರಿಗಳಂತೆ ಕೊಬ್ಬಿಕೊಂಡಿದ್ದಾರೆ.


ನಿನೆವೆಯನ್ನು ನಾಶಮಾಡುವ ಸೈನಿಕರೇ, ಬೆಳ್ಳಿಬಂಗಾರಗಳನ್ನು ತೆಗೆದುಕೊಳ್ಳಿರಿ. ತೆಗೆದುಕೊಳ್ಳಲು ಎಷ್ಟೋ ವಸ್ತುಗಳಿವೆ. ಎಷ್ಟೋ ನಿಕ್ಷೇಪಗಳಿವೆ.


ಯೆಹೋವನ ನ್ಯಾಯತೀರ್ಪಿನ ದಿನವು ಬೇಗನೇ ಬರುತ್ತದೆ; ಅತ್ಯಂತ ವೇಗವಾಗಿ ಬರುತ್ತಿದೆ. ಆ ದಿನದಂದು ಜನರು ಬಹಳವಾಗಿ ದುಃಖಿಸುವರು. ಧೈರ್ಯಶಾಲಿಗಳಾದ ಸೈನಿಕರೂ ಅಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು