ಯೆರೆಮೀಯ 46:6 - ಪರಿಶುದ್ದ ಬೈಬಲ್6 “ವೇಗಶಾಲಿಗಳೂ ಓಡಿಹೋಗಲಾರರು. ಶೂರಸೈನಿಕರೂ ತಪ್ಪಿಸಿಕೊಳ್ಳಲಾರರು. ಅವರೆಲ್ಲರೂ ಎಡವಿ ಬಿದ್ದುಬಿಡುವರು. ಇದೆಲ್ಲ ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ನಡೆಯುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು. ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ವೇಗಶಾಲಿಗಳು ಓಡಿಹೋಗಲಾರರು ಬಲಿಷ್ಟರು ತಪ್ಪಿಸಿಕೊಳ್ಳಲಾರರು. ಉತ್ತರದಲ್ಲಿ, ಯೂಫ್ರೆಟಿಸ್ ನದಿಯ ಹತ್ತಿರದಲ್ಲಿ, ಎಡವಿಬಿದ್ದಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು; ಬಡಗಲಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ವೇಗಶಾಲಿಗಳು ಓಡಿ ಹೋಗದಿರಲಿ; ಪರಾಕ್ರಮಶಾಲಿಯು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿಬೀಳುವರು. ಅಧ್ಯಾಯವನ್ನು ನೋಡಿ |
“ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.