Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 47:2 - ಪರಿಶುದ್ದ ಬೈಬಲ್‌

2 ಯೆಹೋವನು ಹೀಗೆನ್ನುತ್ತಾನೆ: “ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಬರುವರು. ಅವರು ಪ್ರವಾಹದಂತೆ ಇಡೀ ದೇಶವನ್ನು ವ್ಯಾಪಿಸುವರು. ಅವರು ಪಟ್ಟಣಗಳನ್ನೂ ಅಲ್ಲಿ ವಾಸಿಸುವ ಜನರನ್ನೂ ಮುತ್ತುವರು. ಆ ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಇಂತೆನ್ನುತ್ತಾನೆ, “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಸರ್ವೇಶ್ವರನ ವಾರ್ತೆ ಇದು: ಇಗೋ, ಬಡಗಲಿಂದ ಪ್ರವಾಹ ಹೊರಡುವುದು ತುಂಬಿತುಳುಕುವ ತೊರೆಯಾಗಿ ಬರುವುದು. ಆಕ್ರಮಿಸುವುದು ನಾಡನ್ನು, ಅದರಲ್ಲಿರುವ ಸಮಸ್ತವನ್ನು. ನಗರವನ್ನು, ಅದರ ನಿವಾಸಿಗಳನ್ನು. ಆಗ ನಾಡಿನವರೆಲ್ಲರೂ ಮೊರೆಯಿಡುವರು ದೇಶದವರೆಲ್ಲರು ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಇಂತೆನ್ನುತ್ತಾನೆ - ಇಗೋ, ಪ್ರವಾಹವು ಬಡಗಲಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಪಟ್ಟಣದ ನಿವಾಸಿಗಳನ್ನೂ ಆಕ್ರವಿುಸುವದು; ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ, ಅದು ತುಂಬಿ ತುಳುಕುವ ಪ್ರಳಯವಾಗುವುದು; ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ಆಕ್ರಮಿಸುವುವು; ಆಗ ಮನುಷ್ಯರು ಕೂಗುವರು; ದೇಶದ ನಿವಾಸಿಗಳೆಲ್ಲರು ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 47:2
32 ತಿಳಿವುಗಳ ಹೋಲಿಕೆ  

“ಈಜಿಪ್ಟು ಸುಂದರವಾದ ಹಸುವಿನಂತಿದೆ, ಆದರೆ ಉತ್ತರದಿಂದ ತೊಣಚಿಯು ಅದನ್ನು ಪೀಡಿಸಲು ಬರುತ್ತಿದೆ.


ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಬಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನು ಹಾಳುಮಾಡಲು ಬಂದಿದ್ದಾರೆ. ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಬಂದಿದ್ದಾರೆ.


ಯೆಹೋವನು ನನಗೆ, “ಉತ್ತರ ದಿಕ್ಕಿನಿಂದ ಈ ದೇಶದ ನಿವಾಸಿಗಳೆಲ್ಲರ ಮೇಲೆ ಒಂದು ಕೇಡು ಬರುವದು.


ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ಈ ನೀರುಗಳು ಈ ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ.


ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.


ಶ್ರೀಮಂತ ಜನರೇ, ಕೇಳಿರಿ! ನಿಮಗೆ ಮಹಾಕಷ್ಟವು ಬರಲಿರುವುದರಿಂದ ಗೋಳಾಡಿರಿ, ದುಃಖಪಡಿರಿ.


ಆದರೆ ಒಬ್ಬನು ನಿಮಗೆ, “ಆ ಪದಾರ್ಥವು ವಿಗ್ರಹಗಳಿಗೆ ಅರ್ಪಿತವಾದದ್ದು” ಎಂದು ಹೇಳಿದರೆ, ನೀವು ಅದನ್ನು ತಿನ್ನಬೇಡಿ. ನಿಮಗೆ ಹೇಳಿದ ವ್ಯಕ್ತಿಯ ನಂಬಿಕೆಯನ್ನು ಹಾಳುಮಾಡಲು ನಿಮಗೆ ಇಷ್ಟವಿಲ್ಲದ್ದರಿಂದ ಮತ್ತು ಆ ಮಾಂಸವನ್ನು ತಿನ್ನುವುದು ತಪ್ಪೆಂದು ಜನರು ಭಾವಿಸಿಕೊಂಡಿರುವುದರಿಂದ ನೀವು ಅದನ್ನು ತಿನ್ನಬಾರದು.


ನೀವು ಅದನ್ನು ತಿನ್ನಿರಿ. ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಪ್ರಭುವಿನದಾಗಿದೆ.”


ಆದರೆ ಆತನು ತನ್ನ ವೈರಿಗಳನ್ನು ಪೂರ್ತಿಯಾಗಿ ನಾಶಮಾಡುತ್ತಾನೆ. ತೆರೆಯಂತೆ ಅವರನ್ನು ಕೊಚ್ಚಿಕೊಂಡು ಹೋಗುತ್ತಾನೆ. ಕತ್ತಲೆಯ ಕಡೆಗೆ ವೈರಿಗಳನ್ನು ಅಟ್ಟಿಬಿಡುವನು.


ಅವನು ದೊಡ್ಡದಾದ ಮತ್ತು ಶಕ್ತಿಶಾಲಿಯಾದ ಸೈನ್ಯಗಳನ್ನು ಸೋಲಿಸುತ್ತಾನೆ. ಅವನು ಒಪ್ಪಂದ ಮಾಡಿಕೊಂಡ ನಾಯಕನಿಗೂ ಮೋಸಮಾಡುತ್ತಾನೆ.


“ಮೋವಾಬ್ ನುಚ್ಚುನೂರಾಯಿತು. ಜನರು ಕಿರುಚುತ್ತಿದ್ದಾರೆ. ಮೋವಾಬ್ ಶರಣಾಗತವಾಯಿತು. ಮೋವಾಬ್ ಈಗ ನಾಚಿಕೆಪಡುತ್ತಿದೆ. ಜನರು ಮೋವಾಬನ್ನು ತಮಾಷೆ ಮಾಡುತ್ತಾರೆ. ಆದರೆ ಇಲ್ಲಿ ನಡೆದ ಘಟನೆಗಳು ಅವರನ್ನು ಭೀತರನ್ನಾಗಿ ಮಾಡಿವೆ.”


ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನು ಕೊಟ್ಟ ಸಂದೇಶವಿದು. ಈ ಸಂದೇಶ ನೆಬೂಕದ್ನೆಚ್ಚರನು ಈಜಿಪ್ಟಿನ ಮೇಲೆ ಧಾಳಿ ಮಾಡಲು ಬರುವುದರ ಬಗ್ಗೆ ಇದೆ.


ಆಗ ಪಶ್ಚಿಮದಲ್ಲಿರುವ ಜನರು ಯೆಹೋವನ ನಾಮಕ್ಕೆ ಭಯಪಟ್ಟು ಗೌರವಿಸುವರು. ಪೂರ್ವದಲ್ಲಿದ್ದ ಜನರು ಆತನ ಮಹಿಮೆಯನ್ನು ಭಯಭಕ್ತಿಯಿಂದ ಕಾಣುವರು. ಬಿರುಗಾಳಿಯಿಂದ ರಭಸವಾಗಿ ಹರಿದುಬರುವ ಹೊಳೆಯಂತೆ ಯೆಹೋವನು ಬೇಗನೆ ಬರುವನು.


“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.


ದಿವ್ಯದರ್ಶನದ ಕಣಿವೆಯ ವಿಷಯವಾಗಿ ದುಃಖದ ಸಂದೇಶ: ಜನಗಳೇ, ನಿಮಗೆ ಏನಾಯಿತು? ನಿಮ್ಮ ಮನೆ ಮಾಳಿಗೆಯ ಮೇಲೆ ಯಾಕೆ ಅಡಗಿರುತ್ತೀರಿ?


ಮೋವಾಬ್ ದೇಶದಲ್ಲೆಲ್ಲಾ ಅಳುವ ಸದ್ದು ಕೇಳಿಸುತ್ತದೆ. ದೂರದಲ್ಲಿರುವ ಎಗ್ಲಯಿಮಿನಲ್ಲೂ ಜನರು ಅಳುತ್ತಿದ್ದಾರೆ. ಬೆಯೇರ್ ಏಲೀಮ್ ಪಟ್ಟಣದಲ್ಲೂ ಜನರು ರೋಧಿಸುತ್ತಾರೆ.


ಮಹಾದ್ವಾರಗಳ ಬಳಿಯಲ್ಲಿರುವ ಜನರೇ, ಗೋಳಾಡಿರಿ! ಪಟ್ಟಣದೊಳಗಿರುವ ಜನರೇ, ಕೂಗಾಡಿರಿ! ಫಿಲಿಷ್ಟಿಯದಲ್ಲಿರುವವರೆಲ್ಲರೂ ಭಯಪಡುವರು. ನಿಮ್ಮ ಧೈರ್ಯವು ಮೇಣದಂತೆ ಕರಗಿಹೋಗುವದು. ಇಗೋ, ಉತ್ತರದಿಕ್ಕಿನಲ್ಲಿ ಧೂಳು ಏಳುತ್ತಿದೆ. ಅಶ್ಶೂರದ ಸೈನ್ಯವು ಬರುತ್ತಿದೆ. ಅವರೆಲ್ಲರೂ ಬಲಶಾಲಿಗಳಾದ ವೀರರು.


ಸಮುದ್ರವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಗಟ್ಟಿಯಾಗಿ ಹಾಡಲಿ.


ಆಕಾಶಮಂಡಲವೇ, ಸಂತೋಷಪಡು! ಭೂಮಿಯೇ, ಉಲ್ಲಾಸಪಡು! ಸಮುದ್ರವೇ ಮತ್ತು ಸಮುದ್ರದೊಳಗಿರುವ ಸರ್ವಸ್ವವೇ, ಆನಂದಘೋಷ ಮಾಡಿರಿ!


ನನಗೆ ಹಸಿವೆಯಾಗಿದ್ದರೆ, ಆಹಾರಕ್ಕಾಗಿ ನಿಮ್ಮನ್ನು ಕೇಳಬೇಕಿಲ್ಲ. ಲೋಕವೂ ಅದರಲ್ಲಿರುವ ಸಮಸ್ತವೂ ನನ್ನದೇ.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದೇ. ಲೋಕವೂ ಅದರ ನಿವಾಸಿಗಳೂ ಆತನವೇ.


ಯೆಹೋವನು ಹೇಳುವುದೇನೆಂದರೆ: “ಉತ್ತರ ದಿಕ್ಕಿನಿಂದ ಒಂದು ಸೈನ್ಯವು ಬರಲಿದೆ. ಭೂಮಿಯ ಬಹುದೂರದ ಸ್ಥಳಗಳಿಂದ ಒಂದು ಮಹಾಜನಾಂಗವು ಬರಲಿದೆ.


ಬೇರೆ ಜನಾಂಗಗಳು ನೀನು ಗೋಳಾಡುವದನ್ನು ಕೇಳಿಸಿಕೊಳ್ಳುವವು. ನಿನ್ನ ಗೋಳಾಟವು ಇಡೀ ಭೂಮಂಡಲದಲ್ಲೆಲ್ಲ ಕೇಳಿಸುವುದು. ‘ಒಬ್ಬ ಶೂರ ಸೈನಿಕನು’ ಮತ್ತೊಬ್ಬ ‘ಶೂರ ಸೈನಿಕನನ್ನು’ ಎದುರಿಸುವನು. ಆ ಶೂರ ಸೈನಿಕರಿಬ್ಬರೂ ಒಟ್ಟಿಗೆ ನೆಲಕ್ಕೆ ಬೀಳುವರು.”


ಈಜಿಪ್ಟಿಗೆ ಅವಮಾನವಾಗುವುದು. ಉತ್ತರದ ಶತ್ರು ಅವಳನ್ನು ಸೋಲಿಸುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು