ಯೆರೆಮೀಯ 47:3 - ಪರಿಶುದ್ದ ಬೈಬಲ್3 ಅವರು ವೇಗವಾಗಿ ಓಡುವ ಕುದುರೆಗಳ ಶಬ್ಧವನ್ನು ಕೇಳುವರು. ಅವರು ರಭಸವಾಗಿ ಚಲಿಸುವ ರಥಗಳ ಶಬ್ಧವನ್ನು ಕೇಳುವರು. ಅವರು ಚಕ್ರಗಳ ಗಡಗಡ ಶಬ್ಧವನ್ನು ಕೇಳುವರು. ತಂದೆಗಳು ತಮ್ಮತಮ್ಮ ಮಕ್ಕಳಿಗೆ ಸುರಕ್ಷಣೆಯನ್ನು ಕೊಡಲಾಗದಷ್ಟು ದುಬರ್ಲರಾಗಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯುದ್ಧ ಕುದುರೆಗಳೋಟದ ಶಬ್ದಕ್ಕೂ ರಥಗಳ ರಭಸಕ್ಕೂ ಚಕ್ರಗಳ ಚಟಪಟಕ್ಕೂ ಹೆದರಿ ಜೋಲುಬೀಳುವುವು ಹೆತ್ತವರ ಕೈಗಳು. ತಮ್ಮ ಮಕ್ಕಳನ್ನೂ ಹಿಂದಿರುಗಿ ನೋಡದೆ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಶತ್ರುವಿನ ತುರಗಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈಯವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನ ಬಲವಾದ ಕುದುರೆಗಳ ಗೊರಸುಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು. ಅಧ್ಯಾಯವನ್ನು ನೋಡಿ |
ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಆ ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಆ ಸೈನಿಕರು ತಮ್ಮ ಕುದುರೆಗಳ ಮೇಲೆ ಬರುತ್ತಿದ್ದಾರೆ. ಅವರ ಧ್ವನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಬಾಬಿಲೋನ್ ನಗರವೇ, ಅವರು ನಿನ್ನ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.