Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:1 - ಪರಿಶುದ್ದ ಬೈಬಲ್‌

1 ಈ ಸಂದೇಶವು ಮೋವಾಬ್ ದೇಶವನ್ನು ಕುರಿತದ್ದು. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ನೆಬೋ ಪರ್ವತಕ್ಕೆ ದುರ್ಗತಿ ಬರುವುದು. ನೆಬೋ ಪರ್ವತ ಪ್ರದೇಶವು ಹಾಳಾಗುವುದು. ಕಿರ್ಯಾತಯಿಮ್ ಪಟ್ಟಣವು ಸೋಲುವುದು. ಅದನ್ನು ವಶಪಡಿಸಿಕೊಳ್ಳಲಾಗುವುದು. ಭದ್ರವಾದ ಸ್ಥಳವನ್ನು ಸೋಲಿಸಿ ಧ್ವಂಸ ಮಾಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಮೋವಾಬನ್ನು ಕುರಿತು ಹೀಗೆನ್ನುತ್ತಾರೆ: “ನೆಬೋ ಊರಿನ ಗತಿಯನ್ನು ಅಯ್ಯೋ, ಏನೆಂದು ಹೇಳಲಿ, ಅದು ಹಾಳಾಯಿತು. ಕಿರ್ಯತಯಿಮ್ ಮಾನಭಂಗ ಹೊಂದಿದೆ ಶತ್ರು ಕೈಗೆ ಸಿಕ್ಕಿ. ಮಿಸ್ಗಾಬ್ ಅವಮಾನಕ್ಕೆ ಗುರಿಯಾಗಿದೆ ನೆಲಸಮವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೋವಾಬನ್ನು ಕುರಿತದ್ದು. ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ನೆಬೋಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗಹೊಂದಿದೆ, ವಿುಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋವಾಬನ್ನು ಕುರಿತದ್ದು: ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೆಬೋ ಊರಿನವರಿಗೆ ಕಷ್ಟ! ಆ ಊರು ಸೂರೆಯಾಯಿತು; ಕಿರ್ಯಾತಯಿಮು ಶತ್ರುವಿನ ಕೈವಶವಾಗಿ ಅವಮಾನಕ್ಕೆ ಗುರಿಯಾಗಿದೆ; ಬಲವಾದ ಕೋಟೆಯು ಸಹ ಚದರಿ ನಾಚಿಕೆಗೆ ಈಡಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:1
19 ತಿಳಿವುಗಳ ಹೋಲಿಕೆ  

“ಯೆಹೋವನು ಇಸ್ರೇಲರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ, ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬ ಪಟ್ಟಣಗಳ ಪ್ರದೇಶವು ಪಶುಗಳ ಮೇವಿಗೆ ಒಳ್ಳೆಯ ಸ್ಥಳವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ಪಶುಗಳು ಇವೆ.


ಆಮೇಲೆ ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು.


ತರುವಾಯ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನಿನ ರಾಜ, ತೂರಿನ ರಾಜ, ಚೀದೋನಿನ ರಾಜ ಇವರುಗಳಿಗೆ ಅವುಗಳನ್ನು ಕಳಿಸು. ಯೆಹೂದದ ರಾಜನಾದ ಚಿದ್ಕೀಯನನ್ನು ನೋಡಲು ಬಂದ ಈ ರಾಜರ ರಾಯಭಾರಿಗಳ ಮೂಲಕ ಸಂದೇಶವನ್ನು ಕಳಿಸು.


ನಾನು ಈಜಿಪ್ಟ್, ಯೆಹೂದ, ಎದೋಮ್, ಅಮ್ಮೋನ್, ಮೋವಾಬ್ ಜನಾಂಗಗಳ ಜನರ ಬಗ್ಗೆ ಮತ್ತು ಮರಳು ಪ್ರದೇಶದಲ್ಲಿ ವಾಸಮಾಡುತ್ತಿರುವ ಎಲ್ಲಾ ಜನಗಳ ಬಗ್ಗೆ ಮಾತನಾಡುತ್ತಿದ್ದೇನೆ. ಈ ಎಲ್ಲಾ ದೇಶಗಳ ಜನರಿಗೆ ದೈಹಿಕವಾಗಿ ಸುನ್ನತಿ ಆಗಿದ್ದಿಲ್ಲ. ಆದರೆ ಇಸ್ರೇಲ್ ವಂಶದವರು ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ಅನ್ನುತ್ತಾನೆ.


“ಯೆಹೋವನಾದ ನಾನು ಆ ತೋಟವನ್ನು ಚೆನ್ನಾಗಿ ನೋಡಿಕೊಳ್ಳುವೆನು; ಸರಿಯಾದ ಕಾಲದಲ್ಲಿ ತೋಟಕ್ಕೆ ನೀರು ಹೊಯ್ಯುವೆನು. ಹಗಲಿರುಳು ತೋಟವನ್ನು ಕಾಯುವೆನು. ಆ ತೋಟವನ್ನು ಯಾರೂ ಹಾಳುಮಾಡುವದಿಲ್ಲ.


ಏಕೆಂದರೆ ಯೆಹೋವನ ಬಲವು ಈ ಪರ್ವತದಲ್ಲಿದೆ. ಮೋವಾಬ್ ಸೋಲಿಸಲ್ಪಡುವದು. ಯೆಹೋವನು ವೈರಿಯನ್ನು ಹುಲ್ಲಿನಂತೆ ತುಳಿದುಬಿಡುವನು.


“ಈಗ ಅಮ್ಮೋನಿಯರೂ ಮೋವಾಬಿನವರೂ ಸೇಯೀರ್ ಬೆಟ್ಟಪ್ರದೇಶದವರೂ ನಮಗೆ ವಿರೋಧವಾಗಿ ಬಂದಿದ್ದಾರೆ. ಈಜಿಪ್ಟಿನಿಂದ ಇಸ್ರೇಲರು ಹೊರಬಂದಾಗ ಅವರ ದೇಶದೊಳಗಿಂದ ಪ್ರಯಾಣ ಮಾಡಲು ನೀನು ಬಿಡಲಿಲ್ಲ. ಆದ್ದರಿಂದ ಇಸ್ರೇಲರು ಅವರನ್ನು ನಾಶಮಾಡದೆ ಬೇರೆ ಕಡೆಗೆ ತಿರುಗಿದರು.


ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೆಬೋವಿನ ಪೂರ್ವದಿಕ್ಕಿನಲ್ಲಿ ಇಳಿದುಕೊಂಡರು.


“ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ. ಆದರೆ ಈಗಲ್ಲ. ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ, ಆದರೆ ಬೇಗನೆ ಅಲ್ಲ. ಯಾಕೋಬನ ವಂಶದಿಂದ ನಕ್ಷತ್ರವೊಂದು ಬರುವುದು. ಇಸ್ರೇಲರಿಂದ ಅರಸನೊಬ್ಬನು ಬರುವನು. ಅವನು ಮೋವಾಬ್ಯರ ತಲೆಯನ್ನು ಜಜ್ಜುವನು. ಆ ಅರಸನು ಶೇತನ ಪುತ್ರರೆಲ್ಲರ ತಲೆಗಳನ್ನು ಜಜ್ಜುವನು.


ಹಿರಿಯ ಮಗಳು ಗಂಡುಮಗನನ್ನು ಹೆತ್ತಳು. ಆಕೆ ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಈಗ ಜೀವಿಸುತ್ತಿರುವ ಎಲ್ಲಾ ಮೋವಾಬ್ಯರಿಗೆ ಮೋವಾಬನೇ ಮೂಲಪುರುಷ.


ಕಣಿವೆಯಲ್ಲಿರುವ ಪ್ರದೇಶ, ಬೆಟ್ಟದ ಮೇಲಿನ ಕಿರ್ಯಾತಯಿಮ್, ಸಿಬ್ಮಾ, ಚೆರೆತ್‌ಶಹರ್,


ಆದ್ದರಿಂದ ಹದಿನಾಲ್ಕನೆಯ ವರ್ಷದಲ್ಲಿ, ರಾಜನಾದ ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅವರ ವಿರೋಧವಾಗಿ ಯುದ್ಧಮಾಡಲು ಬಂದರು. ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅಷ್ಟರೋತ್-ಕರ್ನಯಿಮಿನಲ್ಲಿದ್ದ ರೆಫಾಯರನ್ನೂ ಹಾಮಿನಲ್ಲಿದ್ದ ಜೂಜ್ಯರನ್ನೂ ಶಾವೆಕೆರ್ಯಾತಯಿಮಿನಲ್ಲಿದ್ದ ಏಮಿಯರನ್ನೂ ಸೋಲಿಸಿದರು.


ಯೆಹೋವನು ಜನರ ಉನ್ನತವಾದ ಗೋಡೆಗಳನ್ನೂ ಸುರಕ್ಷಿತ ಸ್ಥಳಗಳನ್ನೂ ನಾಶಮಾಡುವನು. ಯೆಹೋವನು ಅವುಗಳನ್ನೆಲ್ಲಾ ನೆಲಸಮಮಾಡಿ ಧೂಳಿಗೇ ತರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು