ಯೆರೆಮೀಯ 48:10 - ಪರಿಶುದ್ದ ಬೈಬಲ್10 ಯೆಹೋವನು ಹೇಳಿದಂತೆ ನಡೆಯದಿದ್ದವನಿಗೆ ಮತ್ತು ಆ ಜನರನ್ನು ಕೊಲ್ಲಲು ತನ್ನ ಖಡ್ಗವನ್ನು ಬಳಸದಿದ್ದವನಿಗೆ ಕೇಡಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರನು ನೇಮಿಸಿದ ಕೆಲಸವನ್ನು ನಿರ್ವಹಿಸುವುದರಲ್ಲಿ ಆಲಸ್ಯನಾಗಿರುವವನು ಶಾಪಗ್ರಸ್ತನು. ತನ್ನ ಕತ್ತಿ ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನು ನೇವಿುಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪತಗಲಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಯೆಹೋವ ದೇವರು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ರಕ್ತದಿಂದ ತನ್ನ ಖಡ್ಗವನ್ನು ಹಿಂದೆಗೆಯುವವನಿಗೆ ಶಾಪವಾಗಲಿ. ಅಧ್ಯಾಯವನ್ನು ನೋಡಿ |
ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.
ರಾಜನು ಅಲ್ಲಿಗೆ ಬಂದಾಗ, ಪ್ರವಾದಿಯು ಅವನಿಗೆ, “ನಾನು ಯುದ್ಧದಲ್ಲಿ ಹೋರಾಡುವುದಕ್ಕೆ ಹೋಗಿದ್ದೆನು. ನಿನ್ನವನಾದ ಒಬ್ಬ ಮನುಷ್ಯನು ಶತ್ರುವಿನ ಸೈನಿಕನೊಬ್ಬನನ್ನು ನನ್ನ ಬಳಿಗೆ ಕರೆದುಕೊಂಡು ಬಂದು, ‘ಈ ಮನುಷ್ಯನನ್ನು ರಕ್ಷಿಸು. ಇವನು ಓಡಿಹೋದರೆ, ಇವನ ಜೀವಕ್ಕೆ ಬದಲಾಗಿ ನಿನ್ನ ಜೀವವನ್ನು ಕೊಡಬೇಕಾಗುವುದು ಅಥವಾ ಬೆಳ್ಳಿಯ ಮೂವತ್ನಾಲ್ಕು ಕಿಲೋಗ್ರಾಂ ದಂಡ ಕೊಡಬೇಕಾಗುವುದು’ ಎಂದನು.