ಯೆರೆಮೀಯ 48:13 - ಪರಿಶುದ್ದ ಬೈಬಲ್13 ಆಗ ಮೋವಾಬಿನ ಜನರು ತಮ್ಮ ಸುಳ್ಳುದೇವರಾದ ಕೆಮೋಷಿಗಾಗಿ ನಾಚಿಕೆಪಡುವರು. ಇಸ್ರೇಲಿನ ಜನರು ಬೇತೇಲಿನಲ್ಲಿ ಆ ಸುಳ್ಳುದೇವರನ್ನು ನಂಬಿಕೊಂಡಿದ್ದರು. ಆದರೆ ಆ ಸುಳ್ಳುದೇವರು ಅವರ ಸಹಾಯಕ್ಕೆ ಬಾರದೆ ಇದ್ದಾಗ ಆ ಇಸ್ರೇಲರು ನಾಚಿಕೆಗೆ ಈಡಾದರು. ಮೋವಾಬ್ ಸಹ ಅದೇ ಸ್ಥಿತಿಯಲ್ಲಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇಸ್ರಯೇಲ್ ವಂಶದವರು ನಂಬಿಕೆ ಇಟ್ಟಿದ್ದ ಬೇತೇಲ್ ಕ್ಷೇತ್ರವನ್ನು ಕುರಿತು ಆಶಾಭಂಗಪಟ್ಟಂತೆ ಆಗ ಮೋವಾಬ್ಯರು ತಮ್ಮ ಕೆಮೋಷ್ ದೇವತೆಯನ್ನು ಕುರಿತು ಆಶಾಭಂಗಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ, ಹಾಗೆಯೇ ಮೋವಾಬು ಕೆಮೋಷನ ವಿಷಯ ನಾಚಿಕೆಪಡುವುದು. ಅಧ್ಯಾಯವನ್ನು ನೋಡಿ |
ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.