Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:14 - ಪರಿಶುದ್ದ ಬೈಬಲ್‌

14 “‘ನಾವು ಒಳ್ಳೆಯ ಯೋಧರಾಗಿದ್ದೇವೆ. ನಾವು ಯುದ್ಧವೀರರಾಗಿದ್ದೇವೆ’ ಎಂದು ನೀವು ಹೇಳಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “‘ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು’ ಎಂದು ನೀವು ಅಂದುಕೊಳ್ಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ‘ನಾವು ಶೂರರು, ಯುದ್ಧ ಪ್ರವೀಣರು, ಪರಾಕ್ರಮಿಗಳು’ ಎಂದು ನೀವು ಹೇಳುವುದೆಂತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು ಎಂದು ನೀವು ಅಂದುಕೊಳ್ಳುವದು ಹೇಗೆ? ಮೋವಾಬು ಹಾಳಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ನಾವು ಪರಾಕ್ರಮಶಾಲಿಗಳೂ, ಯುದ್ಧಕ್ಕೆ ಬಲಿಷ್ಠರೂ,’ ಎಂದು ನೀವು ಹೇಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:14
12 ತಿಳಿವುಗಳ ಹೋಲಿಕೆ  

ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ. ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು.


ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು.


ಅಶ್ಶೂರದ ಅರಸನು ಹೇಳುವುದೇನೆಂದರೆ, “ನಾನು ಜ್ಞಾನಿಯಾಗಿದ್ದೇನೆ, ನನ್ನ ಸ್ವಂತ ಜ್ಞಾನದಿಂದಲೂ ಸಾಮರ್ಥ್ಯದಿಂದಲೂ ನಾನು ಅನೇಕ ಮಹಾಕಾರ್ಯಗಳನ್ನು ನಡಿಸಿದ್ದೇನೆ. ಅನೇಕ ಜನಾಂಗಗಳನ್ನು ಸೋಲಿಸಿದ್ದೇನೆ; ಅವರ ಐಶ್ವರ್ಯಗಳನ್ನು ಸೂರೆಮಾಡಿದ್ದೇನೆ. ಅವರ ಜನರನ್ನು ನನ್ನ ಗುಲಾಮರನ್ನಾಗಿ ಮಾಡಿದ್ದೇನೆ. ನಾನು ಮಹಾ ವೀರನಾಗಿರುವೆ.


ಸರ್ವಶಕ್ತನಾದ ಯೆಹೋವನ ಜನರನ್ನು ಮೋವಾಬ್ಯರು ಮತ್ತು ಅಮ್ಮೋನ್ಯರು ಕ್ರೂರವಾಗಿ ಕಂಡು ಅವರನ್ನು ಪರಿಹಾಸ್ಯಮಾಡಿದ್ದರಿಂದಲೂ ಈ ಸಂಗತಿಗಳು ಅವರಲ್ಲಿ ನೆರವೇರುವವು.


“‘ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: ಈಜಿಪ್ಟಿಗೆ ಸಹಾಯ ಮಾಡುವವನು ಬೀಳುವನು. ಅವಳು ಹೆಮ್ಮೆಪಡುವ ಸಾಮರ್ಥ್ಯ ಅಂತ್ಯವಾಗುವದು. ಈಜಿಪ್ಟಿನಲ್ಲಿರುವ ಜನರು ರಣರಂಗದಲ್ಲಿ ಮಿಗ್ದೋಲ್‌ನಿಂದ ಹಿಡಿದು ಅಸ್ವಾನ್ ತನಕ ಸಾಯುವರು. ಇದು ನನ್ನ ಒಡೆಯನಾದ ಯೆಹೋವನ ನುಡಿ.


ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.


ಯೆಹೋವನು ಹೇಳುತ್ತಾನೆ, “ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು. ಬಲಶಾಲಿಗಳು ತಮ್ಮ ಬಲದ ಬಗ್ಗೆ ಬಡಾಯಿಕೊಚ್ಚಿಕೊಳ್ಳಬಾರದು. ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು.


“‘“ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿ ಇದೆ. ಆದ್ದರಿಂದ ನಾವು ಜ್ಞಾನಿಗಳು” ಎಂದು ನೀವು ಹೇಳುವಿರಿ. ಆದರೆ ಅದು ನಿಜವಲ್ಲ. ಏಕೆಂದರೆ ಲಿಪಿಗಾರರು ತಮ್ಮ ಲೇಖನಿಯಿಂದ ಸುಳ್ಳು ಬರೆದಿದ್ದಾರೆ.


ಮೋವಾಬಿನ ಜನರು ತುಂಬ ಹೆಚ್ಚಳಪಡುವವರೂ ಜಂಬದವರೂ ಎಂದು ನಾವು ಕೇಳಿದ್ದೇವೆ. ಇವರು ಹಿಂಸಕರಾಗಿದ್ದಾರೆ; ಬಡಾಯಿ ಕೊಚ್ಚುವವರಾಗಿದ್ದಾರೆ, ಅವರ ಬಡಾಯಿ ಕೇವಲ ಮಾತುಗಳಷ್ಟೇ.


ಇದಲ್ಲದೆ ಲೋಕದಲ್ಲಿ ಇನ್ನೂ ಕೆಲವು ಅನ್ಯಾಯಗಳನ್ನು ಗಮನಿಸಿದ್ದೇನೆ. ಅತಿವೇಗದ ಓಟಗಾರನಿಗೆ ಓಟದಲ್ಲಿ ಯಾವಾಗಲೂ ಗೆಲುವಾಗದು; ಬಲಿಷ್ಠವಾದ ಸೈನ್ಯಕ್ಕೆ ಯುದ್ಧದಲ್ಲಿ ಯಾವಾಗಲೂ ಜಯವಾಗದು; ಜ್ಞಾನಿಗೆ ಯಾವಾಗಲೂ ಆಹಾರ ದೊರಕದು; ಜಾಣನಿಗೆ ಯಾವಾಗಲೂ ಐಶ್ವರ್ಯ ದೊರೆಯದು; ಪ್ರವೀಣರಿಗೆ ಯಾವಾಗಲೂ ಹೊಗಳಿಕೆಬಾರದು; ಸಮಯ ಬಂದಾಗ, ಪ್ರತಿಯೊಬ್ಬರಿಗೂ ಕೇಡುಗಳಾಗುತ್ತವೆ.


ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು