ಯೆರೆಮೀಯ 48:2 - ಪರಿಶುದ್ದ ಬೈಬಲ್2 ಇನ್ನು ಮುಂದೆ ಮೋವಾಬ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ. ಹೆಷ್ಬೋನ್ ಪಟ್ಟಣದ ಜನರು ಮೋವಾಬನ್ನು ಸೋಲಿಸುವ ಯುಕ್ತಿ ಮಾಡುವರು. ಅವರು ಆ ಜನಾಂಗವನ್ನು ನಾಶಮಾಡುವ ಆಲೋಚನೆ ಮಾಡುವರು. ಮದ್ಮೆನೆ ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನ್ನನ್ನು ಬೆನ್ನಟ್ಟುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ, ‘ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ’ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮೋವಾಬಿನ ಕೀರ್ತಿ ಮಾಯವಾಯಿತು ಹೆಷ್ಬೋನ್ ಶತ್ರುಗಳ ಕೈವಶವಾಯಿತು. ‘ಮೋವಾಬ್ ಇನ್ನು ರಾಷ್ಟ್ರವೆನಿಸಿಕೊಳ್ಳದಷ್ಟು ಅದನ್ನು ಹಾಳುಮಾಡೋಣ ಬನ್ನಿ’ ಎಂದಿದ್ದಾರೆ ಆ ಶತ್ರುಗಳು. ಮದ್ಮೆನೇ, ನೀನೂ ಸುಮ್ಮನಾಗುವೆ, ಖಡ್ಗ ಬರುವುದು ನಿನ್ನನ್ನು ಬೆನ್ನಟ್ಟಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ - ಮೋವಾಬು ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಮೋವಾಬಿನ ಸ್ತೋತ್ರ ಇನ್ನು ಮೇಲೆ ಇರುವುದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ರಾಷ್ಟ್ರವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ; ಮದ್ಮೆನೇ, ನೀನು ಸಹ ಸುಮ್ಮನಾಗುವೆ; ಖಡ್ಗವು ನಿನ್ನನ್ನು ಹಿಂದಟ್ಟುವುದು. ಅಧ್ಯಾಯವನ್ನು ನೋಡಿ |
“ಹೆಷ್ಬೋನಿನ ಜನರೇ, ಗೋಳಾಡಿರಿ; ಏಕೆಂದರೆ ಆಯಿ ಎಂಬ ಪಟ್ಟಣ ನಾಶವಾಯಿತು. ರಬ್ಬಾದ ಸ್ತ್ರೀಯರೇ, ಅಮ್ಮೋನಿನ ಸ್ತ್ರೀಯರೇ, ಗೋಳಾಡಿರಿ. ದುಃಖಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಗೋಳಾಡಿರಿ. ರಕ್ಷಣೆಗಾಗಿ ನಗರಕ್ಕೆ ಓಡಿಹೋಗಿರಿ. ಏಕೆಂದರೆ ನಿಮ್ಮ ಶತ್ರುಗಳು ಬರುತ್ತಿದ್ದಾರೆ. ಅವರು ಮಲ್ಕಾಮ್ ದೇವತೆಯನ್ನು ತೆಗೆದುಕೊಂಡು ಹೋಗುತ್ತಾರೆ. ಶತ್ರುಗಳು ಮಲ್ಕಾಮ್ ದೇವತೆಯ ಯಾಜಕರನ್ನೂ ಪ್ರಧಾನರನ್ನೂ ತೆಗೆದುಕೊಂಡು ಹೋಗುವರು.
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”
ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ ನಾನು ಏಲಾಮನ್ನು ಚೂರುಚೂರು ಮಾಡುವೆನು. ಏಲಾಮ್ಯರನ್ನು ಕೊಲ್ಲಬೇಕೆಂದಿರುವ ಜನರೆದುರಿಗೆ ನಾನು ಎಲಾಮ್ಯರನ್ನು ಮುರಿದುಬಿಡುವೆನು. ನಾನು ಅವರ ಮೇಲೆ ಭಯಂಕರವಾದ ವಿಪತ್ತುಗಳನ್ನು ತರುವೆನು. ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ನಾನು ಅವರಿಗೆ ತೋರಿಸುವೆನು.” ಇದು ಯೆಹೋವನ ನುಡಿ. “ಏಲಾಮನ್ನು ಬೆನ್ನಟ್ಟಲು ನಾನೊಂದು ಖಡ್ಗವನ್ನು ಕಳುಹಿಸುವೆನು. ನಾನು ಏಲಾಮ್ಯರನ್ನೆಲ್ಲ ಕೊಂದುಹಾಕುವವರೆಗೆ ಆ ಖಡ್ಗವು ಅವರನ್ನು ಬೆನ್ನಟ್ಟುವುದು.