Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:27 - ಪರಿಶುದ್ದ ಬೈಬಲ್‌

27 “ಮೋವಾಬೇ, ನೀನು ಇಸ್ರೇಲಿನ ಬಗ್ಗೆ ತಮಾಷೆ ಮಾಡಿದೆ. ಇಸ್ರೇಲ್ ಒಂದು ಕಳ್ಳರ ಗುಂಪಿನಿಂದ ಹಿಡಿಯಲ್ಪಟ್ಟಿತ್ತೇನು? ಇಸ್ರೇಲಿನ ಬಗ್ಗೆ ಮಾತನಾಡಿದಾಗಲೆಲ್ಲ ನೀನು ತಲೆಯಾಡಿಸಿದೆ. ಇಸ್ರೇಲಿಗಿಂತ ಉತ್ತಮನೋ ಎಂಬಂತೆ ನಟಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮೋವಾಬೇ, ನೀನು ಇಸ್ರಯೇಲನ್ನು ಕುರಿತು ಗೇಲಿಮಾಡುತ್ತಿದ್ದೆಯಲ್ಲವೆ? ಕಳ್ಳರ ಗುಂಪಿಗೆ ಸೇರಿ ಅದು ಸಿಕ್ಕಿಕೊಂಡಂತೆ ನಿನಗೆ ಕಾಣುತ್ತಿತ್ತೇ? ಇಸ್ರಯೇಲಿನ ಪ್ರಸ್ತಾಪ ಎತ್ತಿದಾಗಲೆಲ್ಲ ನೀನು ತಲೆಯಾಡಿಸಿ ಹಿಯ್ಯಾಳಿಸುತ್ತಿಯಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇಸ್ರಾಯೇಲು ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೇನು? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕ್ಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ಏಕೆಂದರೆ ನೀನು ಅದರ ವಿಷಯ ಯಾವಾಗ ಮಾತನಾಡಿದಂದಿನಿಂದ ತಲೆ ಅಲ್ಲಾಡಿಸಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:27
22 ತಿಳಿವುಗಳ ಹೋಲಿಕೆ  

“ಜನರ ಕೈಗೆ ಸಿಕ್ಕಿಬಿದ್ದಾಗ ಕಳ್ಳನಿಗೆ ನಾಚಿಕೆಯಾಗುತ್ತದೆ. ಅದೇ ರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆಪಡುತ್ತದೆ. ರಾಜರು ಮತ್ತು ನಾಯಕರು ನಾಚಿಕೆಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು.


ಯೆಹೋವನು ಹೀಗೆನ್ನುತ್ತಾನೆ, “ಮೋವಾಬ್ಯರೂ ಅಮ್ಮೋನ್ಯರೂ ಏನು ಮಾಡಿದ್ದಾರೆಂದು ನನಗೆ ಗೊತ್ತಿದೆ. ಅವರು ನನ್ನ ಜನರನ್ನೂ ಕೆಣಕಿದರು. ಅವರ ಪ್ರದೇಶಗಳನ್ನು ಎಳೆದುಕೊಂಡು ತಮ್ಮ ರಾಜ್ಯಗಳನ್ನು ವಿಸ್ತರಿಸಿದರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಮೋವಾಬ್ ಮತ್ತು ಸೇಯೀರ್, ‘ಯೆಹೂದ ಜನಾಂಗದವರು ಇತರ ಎಲ್ಲಾ ಜನಾಂಗಗಳವರಂತಿದ್ದಾರೆ.’ ಎಂದು ಹೇಳುತ್ತಾರೆ.


ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದ್ದರು. ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು.


ನಂತರ ಯೇಸು ಆ ಜನರಿಗೆ, “ನೀವು ಅಪರಾಧಿಯನ್ನು ಬಂಧಿಸುವವರಂತೆ ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡು ಇಲ್ಲಿಗೆ ಬಂದಿದ್ದೀರಿ. ನಾನು ಪ್ರತಿದಿನವೂ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಅಲ್ಲಿ ಬಂಧಿಸಲೇ ಇಲ್ಲ.


ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.


ಸರ್ವಶಕ್ತನಾದ ಯೆಹೋವನ ಜನರನ್ನು ಮೋವಾಬ್ಯರು ಮತ್ತು ಅಮ್ಮೋನ್ಯರು ಕ್ರೂರವಾಗಿ ಕಂಡು ಅವರನ್ನು ಪರಿಹಾಸ್ಯಮಾಡಿದ್ದರಿಂದಲೂ ಈ ಸಂಗತಿಗಳು ಅವರಲ್ಲಿ ನೆರವೇರುವವು.


ಆದ್ದರಿಂದ ಇಸ್ರೇಲಿನ ಪರ್ವತಗಳೇ, ನನ್ನ ಒಡೆಯನಾದ ಯೆಹೋವನ ಮಾತುಗಳಿಗೆ ಕಿವಿಗೊಡಿರಿ! ನನ್ನ ಒಡೆಯನಾದ ಯೆಹೋವನು ಬೆಟ್ಟಗುಡ್ಡಗಳಿಗೂ ತೊರೆಗಳಿಗೂ ಕಣಿವೆಗಳಿಗೂ ಪಾಳುಬಿದ್ದ ಸ್ಥಳಗಳಿಗೂ ಮತ್ತು ಅನ್ಯಜನರಿಂದ ಕೊಳ್ಳೆಹೊಡೆಯಲ್ಪಟ್ಟು ಅಪಹ್ಯಾಸಕ್ಕೆ ಒಳಗಾಗಿ ನಿರ್ಜನವಾಗಿರುವ ಪಟ್ಟಣಗಳಿಗೂ ಹೀಗೆನ್ನುತ್ತಾನೆ:


ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಅವುಗಳಿಗೆ ಹೇಳು. ‘ವೈರಿಗಳು ನಿನಗೆ ವಿರುದ್ಧವಾಗಿ ಕೆಟ್ಟಮಾತುಗಳನ್ನಾಡಿದ್ದಾರೆ. ಒಳ್ಳೆಯದಾಯಿತು. ಈಗ ಪುರಾತನ ಪರ್ವತಗಳು ನಮ್ಮದಾದವು ಎಂದು ಹೇಳುತ್ತಾರೆ.’


ಇಸ್ರೇಲ್ ರಾಜ್ಯವು ನಾಶವಾದಾಗ ನೀನು ಸಂತೋಷಪಟ್ಟಿರುವೆ. ನಾನು ಕೂಡ ಹಾಗೆಯೇ ಮಾಡುವೆನು. ಸೇಯೀರ್ ಪರ್ವತ ಮತ್ತು ಎದೋಮ್ ರಾಜ್ಯವೆಲ್ಲಾ ನಾಶವಾಗುವದು. ಆಗ ನಾನು ಯೆಹೋವನೆಂದು ನೀನು ತಿಳಿಯುವೆ.”


ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲೆಲ್ಲಾ ಸಿಳ್ಳುಹಾಕಿ ತಲೆಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು.


ನಮ್ಮ ನೆರೆಹೊರೆಯ ದೇಶಗಳವರು ನಮಗೆ ಅವಮಾನ ಮಾಡಿದರು. ನಮ್ಮ ಸುತ್ತಮುತ್ತಲಿನ ಜನರೆಲ್ಲರೂ ನಮ್ಮನ್ನು ನೋಡಿ ನಗುತ್ತಾ ಗೇಲಿ ಮಾಡಿದರು.


ನೀನು ನಮ್ಮನ್ನು ನೆರೆಹೊರೆಯವರಿಗೆ ತಮಾಷೆಯನ್ನಾಗಿ ಮಾಡಿರುವೆ. ನಮ್ಮ ನೆರೆಹೊರೆಯವರು ನಮ್ಮನ್ನು ಕಂಡು ನಗುತ್ತಾರೆ; ನಮ್ಮನ್ನು ಗೇಲಿ ಮಾಡುತ್ತಾರೆ.


ನಿಮಗೆ ನನ್ನ ಸ್ಥಿತಿಯು ಬಂದಿದ್ದರೆ ನೀವು ಹೇಳಿದ್ದನ್ನೇ ನಾನು ಹೇಳಬಹುದಾಗಿತ್ತು. ನಿಮಗೆ ವಿರುದ್ಧವಾಗಿ ಜ್ಞಾನದ ಮಾತುಗಳನ್ನು ಹೇಳಿ ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.


ದುಷ್ಟರು ಬೇರೆಯವರಿಗೆ ಕೇಡುಮಾಡಲು ಆಲೋಚಿಸುವರು. ಆದರೆ ಆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು. ಆಗ ಅವರನ್ನು ಕಂಡ ಪ್ರತಿಯೊಬ್ಬನೂ ಆಶ್ಚರ್ಯದಿಂದ ತಲೆಯಾಡಿಸುವನು.


ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.


ರಸ್ತೆಯಲ್ಲಿ ಹಾದುಹೋಗುವ ಜನರೇ, ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. ನನ್ನ ಕಡೆಗೆ ಗಮನ ಕೊಡಿ. ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? ಆತನು ತನ್ನ ಮಹಾಕೋಪದ ದಿನದಂದು ನನ್ನನ್ನು ದಂಡಿಸಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು