Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:31 - ಪರಿಶುದ್ದ ಬೈಬಲ್‌

31 ಆದ್ದರಿಂದ ನಾನು ಮೋವಾಬಿಗಾಗಿ ಗೋಳಾಡುವೆನು; ಮೋವಾಬಿನ ಪ್ರತಿಯೊಬ್ಬರಿಗಾಗಿ ಗೋಳಾಡುವೆನು. ನಾನು ಕೀರ್ ಹೆರೆಸಿನವರಿಗಾಗಿ ಪ್ರಲಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದಕಾರಣ ನಾನು ಮೋವಾಬಿನ ನಿಮಿತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದಕಾರಣ ನಾನು ಮೋವಾಬಿನ ಬಗ್ಗೆ ವಿಷಾದಿಸುತ್ತೇನೆ. ಹೌದು, ಇಡೀ ನಾಡಿನ ದುರ್ಗತಿಯನ್ನು ನೋಡಿ ಪ್ರಲಾಪಿಸುತ್ತೇನೆ. ಕೀರ್‍ಹೆರೆಸಿನವರ ವಿಷಯದಲ್ಲೂ ನನಗೆ ವ್ಯಥೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದಕಾರಣ ನಾನು ಮೋವಾಬಿನ ನಿವಿುತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದ್ದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:31
4 ತಿಳಿವುಗಳ ಹೋಲಿಕೆ  

ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ. ಪರ್ವತಮಾರ್ಗವಾಗಿ ಲೂಹೀಥ್ ಗೆ ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ.


ಇಸ್ರೇಲರು ನಗರಗಳನ್ನು ಕೆಡವಿಹಾಕಿದರು. ಅವರು ಮೋವಾಬಿನ ಪ್ರತಿಯೊಂದು ಉತ್ತಮ ತೋಟದ ಕಡೆಗೆ ಕಲ್ಲುಗಳನ್ನೆಸೆದರು. ಅವರು ನೀರಿನ ಬುಗ್ಗೆಗಳನ್ನೆಲ್ಲ ನಿಲ್ಲಿಸಿದರು. ಅವರು ಉತ್ತಮವಾದ ಮರಗಳನ್ನು ಕಡಿದು ಉರುಳಿಸಿದರು. ಇಸ್ರೇಲರು ಕೀರ್ಹರೆಷೆತ್‌ನ ಮಾರ್ಗದುದ್ದಕ್ಕೂ ಹೋರಾಟ ಮಾಡಿದರು. ಸೈನಿಕರು ಕೀರ್ಹರೆಷೆತನ್ನು ಸುತ್ತುವರಿದು ಅದಕ್ಕೂ ಮುತ್ತಿಗೆ ಹಾಕಿದರು.


“ಮೋವಾಬಿಗಾಗಿ ನಾನು ಬಹಳ ದುಃಖಿತನಾಗಿದ್ದೇನೆ. ಸ್ಮಶಾನಯಾತ್ರೆಯ ಕಾಲದಲ್ಲಿ ಊದುವ ಕೊಳಲಿನಿಂದ ಹೊರಬರುವ ದುಃಖದ ಧ್ವನಿಯಂತೆ ನನ್ನ ಹೃದಯ ಅಳುತ್ತಿದೆ. ಕೀರ್ ಹೆರೆಸಿನ ಜನರಿಗಾಗಿ ನಾನು ದುಃಖಿಸುತ್ತೇನೆ. ಅವರ ಹಣವನ್ನು ಮತ್ತು ಸಂಪತ್ತನ್ನು ಕಿತ್ತುಕೊಳ್ಳಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು