ಯೆರೆಮೀಯ 48:33 - ಪರಿಶುದ್ದ ಬೈಬಲ್33 ಮೋವಾಬಿನ ದೊಡ್ಡದೊಡ್ಡ ದ್ರಾಕ್ಷಿತೋಟಗಳಿಂದ ಹರ್ಷವೂ ಆನಂದವೂ ಕಣ್ಮರೆಯಾಗಿವೆ. ದ್ರಾಕ್ಷಿಗಾಣದಿಂದ ದ್ರಾಕ್ಷಾರಸ ಹರಿಯುವದನ್ನು ನಾನು ನಿಲ್ಲಿಸಿದ್ದೇನೆ. ದ್ರಾಕ್ಷಾರಸವನ್ನು ಮಾಡಲು ದ್ರಾಕ್ಷಿಯನ್ನು ತುಳಿಯುವ ಜನರ ಹಾಡು ಮತ್ತು ನೃತ್ಯ ಕಂಡುಬರುವದಿಲ್ಲ. ಸಂತೋಷದ ಧ್ವನಿ ಕೇಳಿಬರುತ್ತಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ನಾಡಿನಿಂದಲೂ ತೊಲಗಿವೆ. ತೊಟ್ಟಿಗಳಲ್ಲಿ ದ್ರಾಕ್ಷಾರಸ ಇಲ್ಲದಂತಾಗಿದೆ. ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಆನಂದ ಧ್ವನಿಗೈಯುತ್ತಿಲ್ಲ. ಕೇಳಿಸುವಾ ಧ್ವನಿ ಆನಂದ ಧ್ವನಿ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಫಲವುಳ್ಳ ಹೊಲದಿಂದಲೂ, ಮೋವಾಬಿನ ದೇಶದಿಂದಲೂ ಸಂತೋಷವೂ, ಉಲ್ಲಾಸವೂ ತೆಗೆಯಲಾಗಿವೆ; ಏಕೆಂದರೆ ದ್ರಾಕ್ಷಿ ಆಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಆರ್ಭಟದ ಸಂಗಡ ಅವರು ಯಾರೂ ತುಳಿಯುವುದಿಲ್ಲ; ಆರ್ಭಟವೇ ಆರ್ಭಟವಾಗುವುದಿಲ್ಲ. ಅಧ್ಯಾಯವನ್ನು ನೋಡಿ |