Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:37 - ಪರಿಶುದ್ದ ಬೈಬಲ್‌

37 ಪ್ರತಿಯೊಬ್ಬರ ತಲೆಯನ್ನು ಬೋಳಿಸಲಾಗಿದೆ. ಪ್ರತಿಯೊಬ್ಬರ ಗಡ್ಡವನ್ನು ಕತ್ತರಿಸಲಾಗಿದೆ. ಪ್ರತಿಯೊಬ್ಬರ ಕೈಗಳು ಕತ್ತರಿಸಲ್ಪಟ್ಟು ಅವುಗಳಿಂದ ರಕ್ತ ಸುರಿಯುತ್ತಿದೆ. ಪ್ರತಿಯೊಬ್ಬರು ತಮ್ಮ ಸೊಂಟಕ್ಕೆ ದುಃಖಸೂಚಕ ವಸ್ತ್ರಗಳನ್ನು ಸುತ್ತಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಎಲ್ಲರ ತಲೆಬೋಳು, ಎಲ್ಲರ ಗಡ್ಡ ವಿಕಾರ, ಎಲ್ಲರ ಕೈ ಗಾಯ. ಎಲ್ಲರ ನಡುವಿಗೆ ಗೋಣಿತಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಏಕೆಂದರೆ ಎಲ್ಲಾ ತಲೆಗಳು ಬೋಳಾಗುವುವು; ಎಲ್ಲಾ ಗಡ್ಡಗಳು ಕ್ಷೌರವಾಗುವುವು; ಎಲ್ಲಾ ಕೈಗಳ ಮೇಲೆ ಗಾಯಗಳು, ಸೊಂಟಗಳ ಮೇಲೆ ಗೋಣಿತಟ್ಟು ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:37
22 ತಿಳಿವುಗಳ ಹೋಲಿಕೆ  

ಗಾಜಾದ ಜನರು ದುಃಖಿತರಾಗಿ ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವರು. ಅಷ್ಕೆಲೋನಿನ ಜನರನ್ನು ಸ್ತಬ್ಧಗೊಳಿಸಲಾಗುವುದು. ಕಣಿವೆ ಪ್ರದೇಶದಿಂದ ಉಳಿದುಕೊಂಡವರೇ, ನಿಮ್ಮನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿರಿ?


ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡು ಬಹುದಿನಗಳವರೆಗೆ ದುಃಖಪಟ್ಟನು.


“ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನ್ನು ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಬಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನ್ನು ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವದಿಲ್ಲ.


ಆ ಸಮಯದಲ್ಲಿ ಆಮೋಚನ ಮಗನಾದ ಯೆಶಾಯನೊಂದಿಗೆ ಯೆಹೋವನು ಮಾತನಾಡಿದನು. “ನಿನ್ನ ಶೋಕವಸ್ತ್ರಗಳನ್ನು ತೆಗೆದುಹಾಕು. ನಿನ್ನ ಕಾಲುಗಳಿಂದ ಪಾದರಕ್ಷೆಗಳನ್ನು ತೆಗೆದುಬಿಡು” ಎಂದು ಯೆಹೋವನು ಹೇಳಿದಾಗ ಯೆಶಾಯನು ಆತನಿಗೆ ವಿಧೇಯನಾದನು. ಯೆಶಾಯನು ಪಾದರಕ್ಷೆಗಳಿಲ್ಲದೆ, ಬಟ್ಟೆಗಳಿಲ್ಲದೆ ಅಡ್ಡಾಡಿದನು.


ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”


ಅವನು ಹಗಲಿರುಳು ಸಮಾಧಿಯ ಗವಿಗಳ ಸುತ್ತಲು ಮತ್ತು ಬೆಟ್ಟಗಳ ಮೇಲೆ ನಡೆದಾಡುತ್ತಿದ್ದನು. ಅವನು ಕಿರುಚುತ್ತಾ ತನ್ನನ್ನು ಕಲ್ಲುಗಳಿಂದ ಜಜ್ಜಿಕೊಳ್ಳುತ್ತಿದ್ದನು.


ನಿನ್ನ ಕೂದಲನ್ನು ಬೋಳಿಸು; ಯಾಕೆಂದರೆ ನೀನು ಪ್ರೀತಿಸುವ ಮಕ್ಕಳಿಗಾಗಿ ನೀನು ಅಳುವೆ. ಗಿಡುಗನಂತೆ ನಿನ್ನ ತಲೆ ಬೋಳಾಗಲಿ. ನಿನ್ನ ದುಃಖವನ್ನು ಪ್ರದರ್ಶಿಸು. ಯಾಕೆಂದರೆ ನಿನ್ನ ಮಕ್ಕಳು ನಿನ್ನಿಂದ ತೆಗೆಯಲ್ಪಡುವರು.


ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋದಿಸುವ ದಿವಸಗಳನ್ನಾಗಿ ಮಾಡುವೆನು. ನಿಮ್ಮ ಹಾಡುಗಳೆಲ್ಲಾ ಶೋಕಗೀತೆಯಾಗುವವು. ಎಲ್ಲರೂ ಶೋಕಬಟ್ಟೆಯನ್ನು ಧರಿಸುವಂತೆ ಮಾಡುವೆನು. ಪ್ರತಿ ತಲೆಯನ್ನು ಬೋಳು ತಲೆಯನ್ನಾಗಿ ಮಾಡುವೆನು. ಒಬ್ಬನೇ ಮಗನನ್ನು ಕಳೆದುಕೊಳ್ಳುವಾಗ ರೋದಿಸುವ ಹಾಗೆ ಗಟ್ಟಿಯಾಗಿ ರೋದಿಸುವಂತೆ ಮಾಡುತ್ತೇನೆ. ಅದರ ಅಂತ್ಯ ಕಹಿಯಾಗಿರುವುದು.”


ನಿನಗಾಗಿ ಶೋಕದಿಂದ ತಮ್ಮ ತಲೆಗಳನ್ನು ಬೋಳಿಸುವರು. ಶೋಕದ ಬಟ್ಟೆಗಳನ್ನು ಧರಿಸುವರು. ತಮ್ಮ ಪ್ರಿಯರು ಸತ್ತಾಗ ಅಳುವಂತೆ ನಿನಗಾಗಿ ಅಳುವರು.


ಅವರು ಶೋಕಬಟ್ಟೆಗಳನ್ನು ಧರಿಸಿ ಭಯಗ್ರಸ್ತರಾಗುವರು. ಪ್ರತೀ ಮುಖದಲ್ಲಿ ನಾಚಿಕೆಯು ಕಾಣಿಸುವುದು. ತಮ್ಮ ದುಃಖವನ್ನು ಪ್ರದರ್ಶಿಸಲು ತಮ್ಮ ತಲೆಗಳನ್ನು ಬೋಳಿಸುವರು.


ಅರಸನಾದ ಹಿಜ್ಕೀಯನು ಎಲ್ಲಾ ವಿಷಯಗಳನ್ನು ಕೇಳಿ ಮನಸ್ಸಿನಲ್ಲಿ ಬಹಳ ದುಃಖಪಟ್ಟು ತನ್ನ ಬಟ್ಟೆಗಳನ್ನು ಹರಿದುಕೊಂಡನು. ತರುವಾಯ ಶೋಕವಸ್ತ್ರವನ್ನು ಧರಿಸಿ ದೇವಾಲಯದೊಳಕ್ಕೆ ಹೋದನು.


ಆ ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳೆತ ವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಕೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟಕಲೆಗಳೇ ಇರುವವು.


ಆ ಸ್ತ್ರೀಯ ಮಾತುಗಳನ್ನು ರಾಜನು ಕೇಳಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನೆಲ್ಲಾ ಹರಿದುಕೊಂಡನು. ಅವನ ಮೈಮೇಲೆ ಗೋಣಿತಟ್ಟಿರುವುದು ಜನರಿಗೆಲ್ಲಾ ಕಾಣಿಸಿತು.


ಎಲೀಯನು ಮಾತನಾಡಿದ ನಂತರ ಅಹಾಬನು ಬಹಳ ಶೋಕತಪ್ತನಾದನು. ಅವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡನು. ಅವನು ಊಟಮಾಡದೆ ಹಾಗೆಯೇ ಮಲಗಿಕೊಂಡನು; ದುಃಖದಿಂದ ತಳಮಳಗೊಂಡನು.


ಪ್ರವಾದಿಗಳು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿದರು. ಅವರು ಖಡ್ಗ ಮತ್ತು ಬರ್ಜಿಗಳಿಂದ ತಮ್ಮನ್ನು ತಾವೇ ತಿವಿದುಕೊಂಡರು. (ಅವರು ಆರಾಧಿಸುವ ರೀತಿಯೇ ಇದು.) ರಕ್ತವು ತಮ್ಮ ದೇಹದ ಮೇಲೆ ಚಿಮ್ಮುವತನಕ ಅವರು ತಮ್ಮನ್ನು ತಾವು ತಿವಿದುಕೊಂಡರು.


ಸತ್ತವರನ್ನು ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನೇ ಯೆಹೋವನು!


ಆ ಸಮಯದಲ್ಲಿ ರೂಬೇನನು ತನ್ನ ಸಹೋದರರೊಡನೆ ಇರಲಿಲ್ಲ. ಅವರು ಯೋಸೇಫನನ್ನು ಮಾರಿದ್ದು ಅವನಿಗೆ ಗೊತ್ತಿರಲಿಲ್ಲ. ರೂಬೇನನು ಬಾವಿಗೆ ಹಿಂತಿರುಗಿ ಬಂದಾಗ, ಯೋಸೇಫನನ್ನು ಅಲ್ಲಿ ಕಾಣದೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು.


“ಹೆಷ್ಬೋನಿನ ಜನರೇ, ಗೋಳಾಡಿರಿ; ಏಕೆಂದರೆ ಆಯಿ ಎಂಬ ಪಟ್ಟಣ ನಾಶವಾಯಿತು. ರಬ್ಬಾದ ಸ್ತ್ರೀಯರೇ, ಅಮ್ಮೋನಿನ ಸ್ತ್ರೀಯರೇ, ಗೋಳಾಡಿರಿ. ದುಃಖಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಗೋಳಾಡಿರಿ. ರಕ್ಷಣೆಗಾಗಿ ನಗರಕ್ಕೆ ಓಡಿಹೋಗಿರಿ. ಏಕೆಂದರೆ ನಿಮ್ಮ ಶತ್ರುಗಳು ಬರುತ್ತಿದ್ದಾರೆ. ಅವರು ಮಲ್ಕಾಮ್ ದೇವತೆಯನ್ನು ತೆಗೆದುಕೊಂಡು ಹೋಗುತ್ತಾರೆ. ಶತ್ರುಗಳು ಮಲ್ಕಾಮ್ ದೇವತೆಯ ಯಾಜಕರನ್ನೂ ಪ್ರಧಾನರನ್ನೂ ತೆಗೆದುಕೊಂಡು ಹೋಗುವರು.


“ನರಪುತ್ರನೇ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಸೈನ್ಯವು ತೂರ್ ದೇಶದವರೊಂದಿಗೆ ಉಗ್ರವಾಗಿ ಹೋರಾಡುವಂತೆ ನಡೆಸಿದನು. ಪ್ರತಿ ಸೈನಿಕನ ತಲೆಯನ್ನು ಬೋಳಿಸಿದರು. ಪ್ರತಿಯೊಬ್ಬನ ಭುಜಗಳು ಭಾರ ಹೊತ್ತುಹೊತ್ತು ಸವೆದುಹೋಗಿದ್ದವು. ನೆಬೂಕದ್ನೆಚ್ಚರ್ ಮತ್ತು ಅವನ ಸೈನ್ಯವು ತೂರ್ ದೇಶವನ್ನು ಸೋಲಿಸಲು ಬಹಳವಾಗಿ ಪ್ರಯಾಸಪಡಬೇಕಾಗಿ ಬಂತು. ಆದರೆ ಅವರ ಪ್ರಯಾಸದ ಪ್ರತಿಫಲವಾಗಿ ಏನೂ ದೊರಕಲಿಲ್ಲ.”


ಆಗ ಹಾನೂನನು ದಾವೀದನ ಸೇವಕರನ್ನು ಬಂಧಿಸಿ ಅವರ ಗಡ್ಡಗಳನ್ನು ಬೋಳಿಸಿ ಅವರ ವಸ್ತ್ರಗಳನ್ನು ಸೊಂಟದಿಂದ ಕೆಳಭಾಗದವರೆಗೆ ಕತ್ತರಿಸಿಬಿಟ್ಟು ಅವರನ್ನು ಹಿಂದಕ್ಕೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು