ಯೆರೆಮೀಯ 48:42 - ಪರಿಶುದ್ದ ಬೈಬಲ್42 ಮೋವಾಬ್ ಜನಾಂಗವನ್ನು ನಾಶಮಾಡಲಾಗುವದು. ಏಕೆಂದರೆ ತಾವು ಯೆಹೋವನಿಗಿಂತ ಬಹಳ ಮುಖ್ಯವಾದವರೆಂದು ಅವರು ಭಾವಿಸಿಕೊಂಡರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಉಬ್ಬಿಕೊಂಡು ಸರ್ವೇಶ್ವರನನ್ನೆ ತಿರಸ್ಕರಿಸಿದ ಕಾರಣ ಹಾಳಾಗಿ ಇನ್ನು ರಾಷ್ಟ್ರವೆನಿಸಿಕೊಳ್ಳದು ಮೋವಾಬ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಏಕೆಂದರೆ ಮೋವಾಬು ಅದು ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ, ಜನಾಂಗವಲ್ಲದ ಹಾಗೆ ನಾಶವಾಗುವುದು. ಅಧ್ಯಾಯವನ್ನು ನೋಡಿ |
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”