ಯೆರೆಮೀಯ 48:45 - ಪರಿಶುದ್ದ ಬೈಬಲ್45 “ಜನರು ಪ್ರಬಲನಾದ ವೈರಿಯಿಂದ ತಪ್ಪಿಸಿಕೊಂಡು ತಮ್ಮ ರಕ್ಷಣೆಗಾಗಿ ಹೆಷ್ಬೋನ್ ಪಟ್ಟಣಕ್ಕೆ ಓಡಿಹೋದರು. ಆದರೆ ಅಲ್ಲಿ ರಕ್ಷಣೆಯಿರಲಿಲ್ಲ. ಹೆಷ್ಬೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಸೀಹೋನಿನಲ್ಲಿ ಅಗ್ನಿಜ್ವಾಲೆ ಪ್ರಾರಂಭವಾಯಿತು. ಅದು ಮೋವಾಬಿನ ನಾಯಕರುಗಳನ್ನು ಸುಡುತ್ತಿದೆ. ಅದು ಆ ಗರ್ವಿಷ್ಠರನ್ನು ಸುಡುತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಹಣೆಯನ್ನೂ, ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಪಲಾಯನವಾದವರು ಹೆಷ್ಬೋನಿನ ನೆರಳಲ್ಲಿ ನಿಂತಿದ್ದಾರೆ ಬಲಗುಂದಿದವರಾಗಿ. ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಆ ಹೆಷ್ಬೋನಿನಿಂದಲೆ ಹೊರಟಿದೆ ಅಗ್ನಿ. ಮೋವಾಬಿನ ಮೇರೆಯನ್ನೂ ಶಿಖರವನ್ನೂ ನುಂಗಿಬಿಟ್ಟಿದೆ ಆ ಬೆಂಕಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಕೆನ್ನೆಯನ್ನೂ ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 “ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ, ಸೀಹೋನನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ, ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವುದು. ಅಧ್ಯಾಯವನ್ನು ನೋಡಿ |