ಯೆರೆಮೀಯ 48:46 - ಪರಿಶುದ್ದ ಬೈಬಲ್46 ಮೋವಾಬ್ಯರೇ, ನಿಮಗೆ ಕೇಡು ಕಾದಿದೆ. ಕೆಮೋಷಿನ ಭಕ್ತರು ನಾಶವಾಗುತ್ತಿದ್ದಾರೆ. ನಿಮ್ಮ ಮಕ್ಕಳನ್ನು ಬಂಧಿಗಳನ್ನಾಗಿಯೂ ಸೆರೆಯಾಳುಗಳನ್ನಾಗಿಯೂ ತೆಗೆದುಕೊಂಡು ಹೋಗಲಾಗುತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 “ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ? ಕೆಮೋಷಿನ ಭಕ್ತರು ನಾಶವಾದರು; ನಿನ್ನ ಗಂಡು, ಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷ್ ದೇವತೆಯ ಭಕ್ತರು ನಾಶವಾದರು. ನಿಮ್ಮ ಗಂಡುಹೆಣ್ಣು ಮಕ್ಕಳು ಗಡೀಪಾರಾಗಿ ಸೆರೆಯಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರು ನಾಶವಾದರು; ನಿನ್ನ ಗಂಡುಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಮೋವಾಬೇ, ನೀನೇ ಅಯ್ಯೋ! ಕೆಮೋಷಿನ ಜನರು ನಾಶವಾದರು; ಏಕೆಂದರೆ ನಿನ್ನ ಗಂಡು ಹೆಣ್ಣುಮಕ್ಕಳು, ಗಡೀಪಾರಾಗಿ ಸೆರೆಯಾದರು. ಅಧ್ಯಾಯವನ್ನು ನೋಡಿ |
ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.