ಯೆರೆಮೀಯ 48:47 - ಪರಿಶುದ್ದ ಬೈಬಲ್47 “ಮೋವಾಬಿನ ಜನರನ್ನು ಸೆರೆಹಿಡಿದುಕೊಂಡು ಹೋಗಲಾಗುವುದು. ಆದರೆ ಭವಿಷ್ಯದಲ್ಲಿ ನಾನು ಮೋವಾಬ್ಯರನ್ನು ಪುನಃ ಕರೆದು ತರುವೆನು” ಇದು ಯೆಹೋವನಿಂದ ಬಂದ ಸಂದೇಶ. ಮೋವಾಬಿನ ಕುರಿತಾದ ನ್ಯಾಯತೀರ್ಪು ಇದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಆದರೂ ಬರಲಿರುವಾ ದಿನದಂದು ತಪ್ಪಿಸುವೆನು ಮೋವಾಬಿನ ದುರವಸ್ಥೆಯನ್ನು ಎನ್ನುತ್ತಾರೆ ಸರ್ವೇಶ್ವರ. - ಇತಿ ಮೋವಾಬನ್ನು ಕುರಿತ ತೀರ್ಪು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 “ಆದರೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸಮೃದ್ಧಿಯನ್ನು ತಿರುಗಿ ತರುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ಈವರೆಗೆ ಮೋವಾಬಿನ ನ್ಯಾಯ ತೀರ್ವಿಕೆಯು ಇರುವುದು. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನಿಗೆ ವಿಶೇಷವಾದ ಕಾಣಿಕೆಯು ಸಮರ್ಪಿಸಲ್ಪಡುವದು. ಆ ಕಾಣಿಕೆಯು ಉನ್ನತವಾಗಿರುವ ಬಲಶಾಲಿಗಳಾದ ಜನರಿಂದ ಬರುವದು. ಎಲ್ಲಾ ದೇಶಗಳ ಜನರು ಈ ಉನ್ನತವಾದ ಈ ಬಲಿಷ್ಠರಿಗೆ ಹೆದರುವರು. ಅವರು ಬಲಾಢ್ಯ ಜನಾಂಗವಾಗಿದ್ದಾರೆ. ಅವರ ಜನಾಂಗವು ಇತರ ಜನಾಂಗಗಳನ್ನು ಸೋಲಿಸುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿದೆ. ಈ ಕಾಣಿಕೆಯನ್ನು ಚೀಯೋನ್ ಪರ್ವತದಲ್ಲಿರುವ ಯೆಹೋವನ ಸ್ಥಳಕ್ಕೆ ತರುವರು.
ಬಹುಕಾಲದ ನಂತರ, ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಅನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣಹೊಂದಿರುವ ದೇಶಕ್ಕೆ ಬರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಬಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಬರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನ್ನು ಮತ್ತೆ ಕರೆದುಕೊಂಡು ಬರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.