Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:5 - ಪರಿಶುದ್ದ ಬೈಬಲ್‌

5 ಮೋವಾಬಿನ ಜನರು ಲೂಹೀತಿನ ದಾರಿಹಿಡಿದು ಹೋಗುತ್ತಾರೆ. ಹೋಗುವಾಗ ಅವರು ಬಹಳವಾಗಿ ಗೋಳಾಡುತ್ತಾರೆ. ಅವರ ಕಷ್ಟ ಮತ್ತು ನೋವಿನ ಗೋಳಾಟವು ಆ ದಾರಿಯಿಂದ ಹೊರೊನಯಿಮ್ ಪಟ್ಟಣದವರೆಗೂ ಕೇಳಿಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದೆವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಳುತ್ತಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಿರುವರು ‘ನಾಶವಾದೆವಲ್ಲಾ!’ ಎಂಬ ಪ್ರಾಣಸಂಕಟದ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಳುತ್ತಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದೆವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶದ ಶಬ್ದವನ್ನು ಕೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:5
3 ತಿಳಿವುಗಳ ಹೋಲಿಕೆ  

ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ. ಪರ್ವತಮಾರ್ಗವಾಗಿ ಲೂಹೀಥ್ ಗೆ ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ.


ಹೊರೊನಯಿಮಿನಿಂದ ಬರುವ ಗೋಳಾಟದ ಧ್ವನಿಯನ್ನು ಕೇಳಿರಿ. ಅದು ವಿನಾಶದ ಮತ್ತು ಗೊಂದಲದ ಧ್ವನಿ.


ಮೋವಾಬನ್ನು ನಾಶಮಾಡಲಾಗುವುದು. ಅವಳ ಚಿಕ್ಕಮಕ್ಕಳು ಸಹಾಯಕ್ಕಾಗಿ ಗೋಳಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು