Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:7 - ಪರಿಶುದ್ದ ಬೈಬಲ್‌

7 “ನೀವು ನಿರ್ಮಿಸಿದ ವಸ್ತುಗಳಲ್ಲಿ ಮತ್ತು ನಿಮ್ಮ ಸಂಪತ್ತಿನಲ್ಲಿ ನಂಬಿಕೆಯಿಟ್ಟಿದ್ದರಿಂದ ನಿಮ್ಮನ್ನು ವಶಪಡಿಸಿಕೊಳ್ಳಲಾಗುವುದು. ಕೆಮೋಷ್ ದೇವತೆಯನ್ನು ಅದರ ಯಾಜಕರೊಂದಿಗೆ ಮತ್ತು ಪ್ರಧಾನರೊಂದಿಗೆ ಸೆರೆಹಿಡಿಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಮೋವಾಬೇ, ನಿನ್ನ ಸಾಧನೆಗಳಲ್ಲೇ, ಧನರಾಶಿಗಳಲ್ಲೇ ಭರವಸೆಯಿಟ್ಟೆ. ಆದುದರಿಂದ ನೀನು ಇದೀಗಲೆ ಶತ್ರುಗಳ ಕೈವಶವಾಗುವೆ. ಕೆಮೋಷ್ ಎಂಬ ನಿನ್ನ ದೇವತೆಯೂ ಅದರ ಭಕ್ತ ಯಾಜಕರೂ ಹಾಗೂ ರಾಜ್ಯಾಧಿಕಾರಿಗಳು ಸೆರೆಗೆ ಹೋಗುವರು ಒಟ್ಟಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ನಿನ್ನ ಕೆಲಸಗಳಲ್ಲಿಯೂ ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ನಿನ್ನ ಕ್ರಿಯೆಗಳಲ್ಲಿಯೂ, ನಿನ್ನ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟಿದ್ದರಿಂದ, ನೀನು ಸಹ ಸೆರೆಯಾಗುವಿ ಮತ್ತು ಕೆಮೋಷನು, ಅವನ ಯಾಜಕರು, ಅವನ ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:7
22 ತಿಳಿವುಗಳ ಹೋಲಿಕೆ  

ಮೋವಾಬೇ, ಇದು ನಿನಗೆ ಕೆಟ್ಟದ್ದಾಗಿದೆ. ಕೆಮೋಷಿನ ಜನರೇ, ನೀವು ನಾಶವಾದಿರಿ. ಅವನ ಪುತ್ರರು ಓಡಿಹೋದರು. ಅಮೋರಿಯ ರಾಜನಾದ ಸೀಹೋನನು ಅವನ ಪುತ್ರಿಯರನ್ನು ಸೆರೆ ಒಯ್ದನು.


“ಹೆಷ್ಬೋನಿನ ಜನರೇ, ಗೋಳಾಡಿರಿ; ಏಕೆಂದರೆ ಆಯಿ ಎಂಬ ಪಟ್ಟಣ ನಾಶವಾಯಿತು. ರಬ್ಬಾದ ಸ್ತ್ರೀಯರೇ, ಅಮ್ಮೋನಿನ ಸ್ತ್ರೀಯರೇ, ಗೋಳಾಡಿರಿ. ದುಃಖಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಗೋಳಾಡಿರಿ. ರಕ್ಷಣೆಗಾಗಿ ನಗರಕ್ಕೆ ಓಡಿಹೋಗಿರಿ. ಏಕೆಂದರೆ ನಿಮ್ಮ ಶತ್ರುಗಳು ಬರುತ್ತಿದ್ದಾರೆ. ಅವರು ಮಲ್ಕಾಮ್ ದೇವತೆಯನ್ನು ತೆಗೆದುಕೊಂಡು ಹೋಗುತ್ತಾರೆ. ಶತ್ರುಗಳು ಮಲ್ಕಾಮ್ ದೇವತೆಯ ಯಾಜಕರನ್ನೂ ಪ್ರಧಾನರನ್ನೂ ತೆಗೆದುಕೊಂಡು ಹೋಗುವರು.


ಯೆಹೋವನು ಹೇಳುತ್ತಾನೆ, “ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು. ಬಲಶಾಲಿಗಳು ತಮ್ಮ ಬಲದ ಬಗ್ಗೆ ಬಡಾಯಿಕೊಚ್ಚಿಕೊಳ್ಳಬಾರದು. ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು.


“ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.”


ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.


ಆದರೆ ನೀನು ದುಷ್ಟತನವನ್ನು ಬಿತ್ತಿ ಸಂಕಟವೆಂಬ ಬೆಳೆಯನ್ನು ಕೊಯ್ದಿರುವೆ. ನಿನ್ನ ಸುಳ್ಳಿನ ಪ್ರತಿಫಲವನ್ನು ತಿಂದಿರುವೆ. ಯಾಕೆಂದರೆ ನೀನು ನಿನ್ನ ಸಾಮರ್ಥ್ಯ ಮತ್ತು ನಿನ್ನ ಸೈನ್ಯದ ಮೇಲೆ ಭರವಸವಿಟ್ಟಿರುವೆ.


ಮೋವಾಬ್ಯರೇ, ನಿಮಗೆ ಕೇಡು ಕಾದಿದೆ. ಕೆಮೋಷಿನ ಭಕ್ತರು ನಾಶವಾಗುತ್ತಿದ್ದಾರೆ. ನಿಮ್ಮ ಮಕ್ಕಳನ್ನು ಬಂಧಿಗಳನ್ನಾಗಿಯೂ ಸೆರೆಯಾಳುಗಳನ್ನಾಗಿಯೂ ತೆಗೆದುಕೊಂಡು ಹೋಗಲಾಗುತ್ತಿದೆ.


ಆಗ ಮೋವಾಬಿನ ಜನರು ತಮ್ಮ ಸುಳ್ಳುದೇವರಾದ ಕೆಮೋಷಿಗಾಗಿ ನಾಚಿಕೆಪಡುವರು. ಇಸ್ರೇಲಿನ ಜನರು ಬೇತೇಲಿನಲ್ಲಿ ಆ ಸುಳ್ಳುದೇವರನ್ನು ನಂಬಿಕೊಂಡಿದ್ದರು. ಆದರೆ ಆ ಸುಳ್ಳುದೇವರು ಅವರ ಸಹಾಯಕ್ಕೆ ಬಾರದೆ ಇದ್ದಾಗ ಆ ಇಸ್ರೇಲರು ನಾಚಿಕೆಗೆ ಈಡಾದರು. ಮೋವಾಬ್ ಸಹ ಅದೇ ಸ್ಥಿತಿಯಲ್ಲಿರುವುದು.


ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.


ಅವಳು ತನ್ನನ್ನು ಘನಪಡಿಸಿಕೊಂಡು ವೈಭವದಿಂದ ಜೀವಿಸಿದಳು. ಆದ್ದರಿಂದ ಅದಕ್ಕೆ ತಕ್ಕಂತೆ ಸಂಕಟವನ್ನೂ ದುಃಖವನ್ನೂ ಅವಳಿಗೆ ಬರಮಾಡಿರಿ. ‘ನಾನು ನನ್ನ ಸಿಂಹಾಸನದ ಮೇಲೆ ಕುಳಿತಿರುವ ರಾಣಿ. ನಾನು ವಿಧವೆಯಲ್ಲ, ನಾನು ಎಂದೆಂದಿಗೂ ದುಃಖಿಸುವುದಿಲ್ಲ’ ಎಂದು ಅವಳು ತನಗೆ ತಾನೇ ಹೇಳಿಕೊಳ್ಳುತ್ತಾಳೆ.


ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಬೂಕದ್ನೆಚ್ಚರನು ಬೆಂಕಿಯನ್ನು ಹೊತ್ತಿಸುವನು, ಅವನು ಆಲಯಗಳನ್ನು ಸುಟ್ಟು ಆ ವಿಗ್ರಹಗಳನ್ನು ತೆಗೆದುಕೊಂಡು ಹೋಗುವನು. ಕುರುಬನು ತನ್ನ ಬಟ್ಟೆಗಳಿಂದ ತಿಗಣೆ ಮತ್ತು ಹೇನುಗಳನ್ನು ತೆಗೆದುಹಾಕಿ ಸ್ವಚ್ಛಗೊಳಿಸುವಂತೆ ನೆಬೂಕದ್ನೆಚ್ಚರನು ಈಜಿಪ್ಟನ್ನು ಬಿಟ್ಟು ಹೋಗುವನು.


ನಿಮ್ಮ ಗತಿ ಹೀಗಾಗುವುದು. ನನ್ನ ಯೋಜನೆಗಳಲ್ಲಿ ಇದು ನಿಮ್ಮ ಪಾತ್ರ.” ಇದು ಯೆಹೋವನ ನುಡಿ. “ಏಕೆ ಹೀಗಾಗುವದು? ಏಕೆಂದರೆ ನೀವು ನನ್ನನ್ನು ಮರೆತುಬಿಟ್ಟಿರಿ. ಸುಳ್ಳುದೇವರುಗಳನ್ನು ನಂಬಿದಿರಿ.


ಯಾವನು ಯೆಹೋವನಲ್ಲಿ ಭರವಸವಿಟ್ಟಿದ್ದಾನೋ ಅವನೇ ಧನ್ಯನು. ಸಹಾಯಕ್ಕಾಗಿ ವಿಗ್ರಹಗಳ ಕಡೆಗೂ ಸುಳ್ಳುದೇವರುಗಳ ಕಡೆಗೂ ತಿರುಗಿಕೊಳ್ಳದವನೇ ಭಾಗ್ಯವಂತನು.


ಸೊಲೊಮೋನನು ಕೆಮೋಷನನ್ನು ಆರಾಧಿಸಲು ಒಂದು ಸ್ಥಳವನ್ನು ನಿರ್ಮಿಸಿದನು. ಮೋವಾಬ್ಯರ ಭಯಂಕರ ವಿಗ್ರಹವೇ ಕೆಮೋಷ್. ಜೆರುಸಲೇಮಿನ ಪಕ್ಕದಲ್ಲಿದ್ದ ಬೆಟ್ಟದ ಮೇಲೆ ಸೊಲೊಮೋನನು ಆರಾಧನೆಯ ಸ್ಥಳವನ್ನು ನಿರ್ಮಿಸಿದನು. ಆ ಬೆಟ್ಟದ ಮೇಲೆಯೇ ಸೊಲೊಮೋನನು ಮೋಲೆಕ್ ದೇವತೆಯ ಪೂಜಾಸ್ಥಳವನ್ನು ನಿರ್ಮಿಸಿದನು. ಅಮ್ಮೋನಿಯರ ಭಯಂಕರ ವಿಗ್ರಹವೇ ಮೋಲೆಕ್.


ನಿಮ್ಮ ದೇವರಾದ ಕೆಮೋಷನು ನಿಮಗೆ ಕೊಟ್ಟ ಪ್ರದೇಶದಲ್ಲಿ ನೀವು ಖಂಡಿತವಾಗಿ ವಾಸಮಾಡಬಹುದು. ಹಾಗೆಯೇ ಯೆಹೋವನಾದ ನಮ್ಮ ದೇವರು ನಮಗೆ ಕೊಟ್ಟ ಪ್ರದೇಶದಲ್ಲಿ ನಾವೂ ವಾಸಮಾಡುವೆವು.


ಫಿಲಿಷ್ಟಿಯರು ತಮ್ಮ ದೇವರ ವಿಗ್ರಹಗಳನ್ನು ಬಾಳ್‌ಪೆರಾಚೀಮ್‌ನಲ್ಲಿಯೇ ಬಿಟ್ಟುಹೋದರು. ದಾವೀದನು ಮತ್ತು ಅವನ ಜನರು ಈ ವಿಗ್ರಹಗಳನ್ನು ತೆಗೆದುಕೊಂಡು ಹೋದರು.


ನೀನು ನಿನ್ನ ಬಲದ ಬಗ್ಗೆ ಜಂಬ ಕೊಚ್ಚಿಕೊಳ್ಳುತ್ತಿರುವೆ, ಆದರೆ ನೀನು ನಿನ್ನ ಬಲವನ್ನು ಕಳೆದುಕೊಳ್ಳುತ್ತಿರುವೆ. ನಿನ್ನ ಹಣ ನಿನ್ನನ್ನು ರಕ್ಷಿಸುವದೆಂದು ನೀನು ನಂಬಿರುವೆ. ಯಾರೂ ನಿನ್ನ ಮೇಲೆ ಧಾಳಿಮಾಡುವ ವಿಚಾರ ಸಹ ಇಟ್ಟುಕೊಂಡಿಲ್ಲವೆಂದು ನೀನು ತಿಳಿದುಕೊಂಡಿರುವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು