ಯೆರೆಮೀಯ 48:8 - ಪರಿಶುದ್ದ ಬೈಬಲ್8 ಪ್ರತಿಯೊಂದು ಪಟ್ಟಣದ ಮೇಲೆ ವಿನಾಶಕನು ಧಾಳಿ ಮಾಡುವನು. ಒಂದು ಪಟ್ಟಣವೂ ತಪ್ಪಿಸಿಕೊಳ್ಳಲಾರದು. ಇಳಿಜಾರು ಪ್ರದೇಶವನ್ನು ನಾಶಪಡಿಸಲಾಗುವುದು. ಎತ್ತರದಲ್ಲಿದ್ದ ಪ್ರದೇಶವನ್ನು ಹಾಳುಮಾಡಲಾಗುವುದು. ಇದನ್ನು ಯೆಹೋವನೇ ಹೇಳಿರುವುದರಿಂದ ನೆರವೇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು; ಯೆಹೋವನು ನುಡಿದಂತೆಯೇ ತಗ್ಗಿನ ಭೂಮಿಯು ಹಾಳಾಗುವುದು, ಮೇಲ್ನಾಡೂ ನಾಶವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸೂರೆಗಾರನು ಪ್ರತಿಯೊಂದು ನಗರದ ಮೇಲೆ ಬೀಳುವನು. ಯಾವ ಪಟ್ಟಣವೂ ಉಳಿಯದು. ಸರ್ವೇಶ್ವರನ ನುಡಿಯಂತೆಯೆ ಮೇಲ್ನಾಡು ನಾಶವಾಗುವುದು, ಬೈಲ್ನಾಡು ಹಾಳಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು; ಯೆಹೋವನು ನುಡಿದಂತೆಯೇ ತಗ್ಗಿನ ಭೂವಿುಯು ಹಾಳಾಗುವದು, ಮೇಲ್ನಾಡೂ ನಾಶವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಒಂದೊಂದು ಪಟ್ಟಣದ ಮೇಲೆ ವಿನಾಶಕನು ಬರುವನು; ಯೆಹೋವ ದೇವರು ಹೇಳಿದ ಹಾಗೆಯೇ, ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳಲಾರದು. ತಗ್ಗೂ ಸಹ ನಾಶವಾಗುವುದು; ಮತ್ತು ಬಯಲು ಹಾಳಾಗುವುದು. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಆದ್ದರಿಂದ ಅಮೋರಿಯರ ಅರಸನಾದ ಸೀಹೋನನ ಆಳ್ವಿಕೆಯಲ್ಲಿದ್ದ ಎಲ್ಲ ಊರುಗಳನ್ನು ಆ ಪ್ರದೇಶವು ಒಳಗೊಂಡಿತ್ತು. ಆ ಅರಸನು ಹೆಷ್ಬೋನ್ ಪಟ್ಟಣದಲ್ಲಿ ಆಳಿದನು. ಆದರೆ ಮೋಶೆಯು ಅವನನ್ನು ಮತ್ತು ಮಿದ್ಯಾನ್ ಜನರ ನಾಯಕರನ್ನು ಸೋಲಿಸಿದ್ದನು. ಎವೀ, ರೆಕೆಮ್, ಚೂರ್, ಹೂರ್ ಮತ್ತು ರೆಬಾ, ಇವರೇ ಆ ನಾಯಕರಾಗಿದ್ದರು. (ಈ ನಾಯಕರೆಲ್ಲ ಸೀಹೋನನ ಜೊತೆ ಸೇರಿ ಯುದ್ಧಮಾಡಿದ್ದರು.) ಈ ನಾಯಕರೆಲ್ಲ ಅದೇ ದೇಶದಲ್ಲಿ ವಾಸವಾಗಿದ್ದರು.