Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:1 - ಪರಿಶುದ್ದ ಬೈಬಲ್‌

1 ಈ ಸಂದೇಶ ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಹೀಗೆ ಹೇಳಿದನು: “ಅಮ್ಮೋನ್ಯರೇ, ಇಸ್ರೇಲಿನ ಜನರಿಗೆ ಮಕ್ಕಳಿಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ತಂದೆತಾಯಿಗಳು ಸತ್ತಮೇಲೆ ಭೂಮಿಯನ್ನು ತೆಗೆದುಕೊಳ್ಳುವದಕ್ಕೆ ಅವರ ವಾರಸುದಾರರು ಇಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ಅದಕ್ಕಾಗಿಯೇ ಮಲ್ಕಾಮ್ ದೇವತೆಯು ಗಾದನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಳೇ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಮ್ಮೋನ್ಯರನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಇಸ್ರಯೇಲಿಗೆ ಮಕ್ಕಳಿಲ್ಲವೆ? ಅದಕ್ಕೆ ನೆರವಾಗಲು ನೆಂಟನಿಲ್ಲವೆ? ಮಲ್ಕಾಮ್ ದೇವತೆಯು ಗಾದಿನ ನಾಡನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ನಗರಗಳಲ್ಲಿ ವಾಸಿಸುತ್ತಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನಮಾಡಿಕೊಂಡಿರುವದೇಕೆ, ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:1
32 ತಿಳಿವುಗಳ ಹೋಲಿಕೆ  

“ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಇಸ್ರೇಲರೊಂದಿಗೆ ಸೇರಿ ದೇವಾರಾಧನೆ ಮಾಡಕೂಡದು. ಅವರ ಸಂತತಿಯ ಹತ್ತನೆಯ ತಲೆಮಾರಿನವರೆಗೂ ಆರಾಧನೆ ಮಾಡಬಾರದು.


ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಬುದ್ಧಿ ಉಳಿದಿಲ್ಲವೇ? ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನ್ನು ಕೊಡಲು ಸಮರ್ಥರಾಗಿಲ್ಲವೇ? ಅವರು ತಮ್ಮ ಜ್ಞಾನವನ್ನು ಕಳೆದುಕೊಂಡರೇ?


ಆಮೇಲೆ ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು.


ಕೆಲಕಾಲದನಂತರ ಮೋವಾಬ್ಯರೂ ಅಮ್ಮೋನಿಯರೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನೊಂದಿಗೆ ಯುದ್ಧಮಾಡಲು ಬಂದರು.


ಈ ಸಂದೇಶವು ಕೇದಾರ್ ಕುಲವನ್ನೂ ಹಾಚೋರಿನ ಅಧಿಪತಿಗಳನ್ನೂ ಕುರಿತದ್ದು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಅವರನ್ನು ಸೋಲಿಸಿದನು. ಯೆಹೋವನು ಹೀಗೆನ್ನುತ್ತಾನೆ: “ಹೋಗಿ ಕೇದಾರ ಕುಲದವರ ಮೇಲೆ ಧಾಳಿ ಮಾಡಿರಿ. ಪೂರ್ವದಿಕ್ಕಿನ ಜನರನ್ನು ನಾಶಮಾಡಿರಿ.


ಈ ಸಂದೇಶವು ದಮಸ್ಕ ನಗರದ ಕುರಿತಾಗಿದೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಹೆದರಿಕೊಂಡಿವೆ. ಅವು ಕೆಟ್ಟ ಸಮಾಚಾರವನ್ನು ಕೇಳಿದ್ದರಿಂದ ಹೆದರಿಕೊಂಡಿವೆ. ಅವುಗಳು ನಿರಾಶೆಗೊಂಡಿವೆ. ಅವು ಆತಂಕಪಡುತ್ತಿವೆ ಮತ್ತು ಭಯಪಡುತ್ತಿವೆ.


ಈ ಸಂದೇಶವು ಮೋವಾಬ್ ದೇಶವನ್ನು ಕುರಿತದ್ದು. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ನೆಬೋ ಪರ್ವತಕ್ಕೆ ದುರ್ಗತಿ ಬರುವುದು. ನೆಬೋ ಪರ್ವತ ಪ್ರದೇಶವು ಹಾಳಾಗುವುದು. ಕಿರ್ಯಾತಯಿಮ್ ಪಟ್ಟಣವು ಸೋಲುವುದು. ಅದನ್ನು ವಶಪಡಿಸಿಕೊಳ್ಳಲಾಗುವುದು. ಭದ್ರವಾದ ಸ್ಥಳವನ್ನು ಸೋಲಿಸಿ ಧ್ವಂಸ ಮಾಡಲಾಗುವುದು.


ತರುವಾಯ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನಿನ ರಾಜ, ತೂರಿನ ರಾಜ, ಚೀದೋನಿನ ರಾಜ ಇವರುಗಳಿಗೆ ಅವುಗಳನ್ನು ಕಳಿಸು. ಯೆಹೂದದ ರಾಜನಾದ ಚಿದ್ಕೀಯನನ್ನು ನೋಡಲು ಬಂದ ಈ ರಾಜರ ರಾಯಭಾರಿಗಳ ಮೂಲಕ ಸಂದೇಶವನ್ನು ಕಳಿಸು.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ವೈರಿಗಳು ಇಲ್ಲವಾದರು. ನೀನು ಅವರ ನಗರಗಳನ್ನು ನಾಶಮಾಡಿದೆ! ಈಗ ಹಾಳಾದ ಕಟ್ಟಡಗಳು ಮಾತ್ರ ಉಳಿದಿವೆ; ದುಷ್ಟರನ್ನು ಜ್ಞಾಪಕಕ್ಕೆ ತರುವ ಯಾವುದೂ ಉಳಿದಿಲ್ಲ.


ಸನ್ಬಲ್ಲಟನು, ಟೋಬೀಯನು, ಅರಬಿಯರು, ಅಮ್ಮೋನಿಯರು ಮತ್ತು ಅಷ್ಡೋದಿನವರು ತುಂಬಾ ಕೋಪಗೊಂಡಿದ್ದರು. ಯಾಕೆಂದರೆ ಜೆರುಸಲೇಮಿನ ಗೋಡೆಯ ಕೆಲಸ ಮುಂದುವರಿಯುತ್ತಿದೆಯೆಂದೂ ಮತ್ತು ಗೋಡೆಗಳ ಕಿಂಡಿಗಳನ್ನು ರಿಪೇರಿ ಮಾಡಲಾಗುತ್ತಿದೆಯೆಂದೂ ಅವರು ಕೇಳಿದ್ದರು.


ಆದರೆ ಹೋರೋಬಿನ ಸನ್ಬಲ್ಲಟನು, ಅಮ್ಮೋನಿಯ ಅಧಿಕಾರಿಯಾದ ಟೋಬೀಯ ಮತ್ತು ಅರಬಿಯವನಾದ ಗೆಷೆಮ್ ಇವರುಗಳು ನಾವು ಪೌಳಿ ಗೋಡೆಯನ್ನು ಕಟ್ಟುತ್ತೇವೆಂಬ ಸುದ್ಧಿಯನ್ನು ಕೇಳಿ ಅಸಹ್ಯವಾಗಿ ಗೇಲಿಮಾಡಿ, “ನೀವು ಮಾಡುತ್ತಿರುವುದೇನು? ರಾಜನಿಗೆ ವಿರುದ್ಧವಾಗಿ ದಂಗೆ ಏಳುತ್ತಿರುವಿರೋ?” ಎಂದು ಕೇಳಿದರು.


ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್ ಬೆಟ್ಟಪ್ರದೇಶದವರೊಂದಿಗೆ ಹೋರಾಡಲಾರಂಭಿಸಿ ಅವರನ್ನು ಕೊಂದು ನಾಶಪಡಿಸಿದರು. ಅವರು ಸೇಯೀರ್ ಬೆಟ್ಟಪ್ರದೇಶದವರನ್ನು ಕೊಂದ ಬಳಿಕ ತಮ್ಮಲ್ಲಿ ತಾವೇ ಒಬ್ಬರನ್ನೊಬ್ಬರು ಕೊಂದರು.


ಯೆಹೋವನು ಬಾಬಿಲೋನಿನವರನ್ನು, ಅರಾಮ್ಯರನ್ನು, ಮೋವಾಬ್ಯರನ್ನು ಮತ್ತು ಅಮ್ಮೋನಿಯರನ್ನು ಯೆಹೋಯಾಕೀಮನ ವಿರುದ್ಧ ಹೋರಾಡಲು ಕಳುಹಿಸಿದನು. ಯೆಹೋವನು ಯೆಹೂದವನ್ನು ನಾಶಗೊಳಿಸಲು ಈ ಗುಂಪುಗಳನ್ನು ಕಳುಹಿಸಿದನು. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮೂಲಕ ತಿಳಿಸಿದ್ದಂತೆಯೇ ಇದು ಸಂಭವಿಸಿತು.


ಹಜಾಯೇಲನು ಜೋರ್ಡನ್ ನದಿಯ ಪೂರ್ವಕ್ಕಿರುವ ಪ್ರದೇಶವನ್ನೆಲ್ಲ ಗೆದ್ದುಕೊಂಡನು. ಅವನು ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳಿಗೆ ಸೇರಿದ ಎಲ್ಲಾ ಪ್ರದೇಶವನ್ನು, ಗಿಲ್ಯಾದ್‌ನ ಎಲ್ಲಾ ಪ್ರದೇಶವನ್ನು ಗೆದ್ದನು. ಹಜಾಯೇಲನು ಆರ್ನೋನ್ ಕಣಿವೆಯಿಂದ ಗಿಲ್ಯಾದ್, ಬಾಷಾನ್‌ವರೆಗಿನ ಅರೋಯೇರ್ ಪ್ರದೇಶವನ್ನೆಲ್ಲ ಗೆದ್ದುಕೊಂಡನು.


ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.’”


ಚಿಕ್ಕಮಗಳು ಸಹ ಗಂಡುಮಗುವನ್ನು ಹೆತ್ತಳು. ಆಕೆ ತನ್ನ ಮಗನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಈಗ ಜೀವಿಸುತ್ತಿರುವ ಅಮ್ಮೋನಿಯರಿಗೆ ಬೆನಮ್ಮಿಯೇ ಮೂಲಪುರುಷ.


ಗಾದ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.


ಯಾಕೆಂದರೆ ಇಸ್ರೇಲರು ಈಜಿಪ್ಟಿನಿಂದ ಹೊರಟುಬಂದು ಪ್ರಯಾಣದಲ್ಲಿದ್ದಾಗ ಅವರಿಗೆ ರೊಟ್ಟಿಯನ್ನಾಗಲಿ ನೀರನ್ನಾಗಲಿ ಕೊಡಲು ಅವರು ನಿರಾಕರಿಸಿದ್ದರು. ಅವರು ಮೆಸಪೊಟೋಮಿಯದಿಂದ ಬಿಳಾಮನನ್ನು ಕರೆಸಿ ಇಸ್ರೇಲರನ್ನು ಶಪಿಸುವಂತೆ ಬಲವಂತಪಡಿಸಿದರು.


ಯೆಹೋವನು ಹೀಗೆ ಹೇಳುತ್ತಾನೆ: “ಇಸ್ರೇಲ್ ಪ್ರದೇಶದ ಸುತ್ತಮುತ್ತ ವಾಸಮಾಡುವ ಜನರಿಗಾಗಿ ನಾನು ಏನು ಮಾಡುವೆನೆಂಬುದನ್ನು ನಿಮಗೆ ಹೇಳುವೆನು. ಆ ಜನರು ತುಂಬ ದುಷ್ಟರಾಗಿದ್ದಾರೆ. ನಾನು ಇಸ್ರೇಲಿನ ಜನರಿಗೆ ಕೊಟ್ಟ ಪ್ರದೇಶವನ್ನು ಅವರು ಹಾಳು ಮಾಡಿದರು. ನಾನು ಆ ಜನರನ್ನು ಅವರ ಪ್ರದೇಶದಿಂದ ಹೊರಗೆ ಎಸೆಯುವೆನು. ನಾನು ಅವರೊಂದಿಗೆ ಯೆಹೂದದ ಜನರನ್ನೂ ಎಸೆಯುವೆನು.


ತಮ್ಮ ಮಾಳಿಗೆಯ ಮೇಲೆ ಹತ್ತಿ ನಕ್ಷತ್ರಗಳನ್ನು ಆರಾಧಿಸುತ್ತಾರೋ ನಾನು ಅವರನ್ನು ನಿರ್ಮೂಲ ಮಾಡುತ್ತೇನೆ. ಜನರು ತಮ್ಮ ಸುಳ್ಳು ಪುರೋಹಿತರನ್ನು ಮರೆತುಬಿಡುವರು. ಕೆಲವರು ತಮ್ಮನ್ನು ನನ್ನ ಆರಾಧಕರೆಂದು ಹೇಳಿಕೊಳ್ಳುವರು. ಆದರೆ ಈಗ ಅವರು ಸುಳ್ಳು ದೇವರಾದ ಮಲ್ಕಾಮನನ್ನು ಆರಾಧಿಸುತ್ತಾರೆ. ಅಂಥವರನ್ನು ಅವರ ಸ್ಥಳಗಳಿಂದ ತೆಗೆದುಹಾಕುವೆನು.


ಇಸ್ರೇಲಿನ ದುಷ್ಟ ಅಧಿಪತಿಯೇ, ನೀನು ಸಾಯುವಿ. ನಿನಗೆ ನನ್ನ ಶಿಕ್ಷೆಯು ಬಂದಾಯಿತು. ನಿನ್ನ ಅಂತ್ಯವು ಹತ್ತಿರವೇ ಇದೆ.”


ಒಡೆಯನಾದ ಯೆಹೋವನ ಮಾತುಗಳು ನನಗೆ ಬಂದವು. ಆತನು ಹೀಗೆ ಹೇಳಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು