ಯೆರೆಮೀಯ 49:15 - ಪರಿಶುದ್ದ ಬೈಬಲ್15 ಎದೋಮೇ, ನಾನು ನಿನಗೆ ಪ್ರಮುಖನಾಗಲು ಬಿಡುವುದಿಲ್ಲ. ಪ್ರತಿಯೊಬ್ಬರು ನಿನ್ನನ್ನು ದ್ವೇಷಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ‘ಇದೋ, ರಾಷ್ಟ್ರಗಳಲ್ಲಿ ನಿನ್ನನ್ನು ಕನಿಷ್ಠವಾಗಿಸುವೆನು, ಜನರ ತಾತ್ಸಾರಕ್ಕೆ ಈಡಾಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಗೋ [ಎದೋಮೇ,] ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಏಕೆಂದರೆ ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿಯೂ, ಜನರ ತಿರಸ್ಕಾರಕ್ಕೆ ಈಡಾಗುವಂತೆಯೂ ಮಾಡುವೆನು. ಅಧ್ಯಾಯವನ್ನು ನೋಡಿ |
ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.