Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:16 - ಪರಿಶುದ್ದ ಬೈಬಲ್‌

16 ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:16
21 ತಿಳಿವುಗಳ ಹೋಲಿಕೆ  

ಭೂಮಿಯನ್ನು ಅವರು ಅಗೆದು ಅದರೊಳಗೆ ಅವಿತುಕೊಂಡರೆ ಅದರೊಳಗಿಂದ ಅವರನ್ನು ಎಳೆದುಹಾಕುವೆನು. ಆಕಾಶದೊಳಗೆ ಹಾರಿ ತಪ್ಪಸಿಕೊಂಡರೆ ಅಲ್ಲಿಂದಲೂ ನಾನು ಅವರನ್ನು ಎಳೆದುಹಾಕುವೆನು.


ಆದರೆ ಯೆಹೋವನು ಹೇಳುವುದೇನೆಂದರೆ, “ಕೈದಿಗಳು ತಪ್ಪಿಸಿಕೊಳ್ಳುವರು. ಬಲಿಷ್ಠ ಸೈನಿಕನಿಂದ ಯಾರೋ ಒಬ್ಬನು ಕೈದಿಯನ್ನು ಬಿಡಿಸಿಕೊಳ್ಳುವನು. ಇದು ಹೇಗೆ ಸಾಧ್ಯ? ಹೇಗೆಂದರೆ, ನಾನೇ ನಿನ್ನ ಬದಲಾಗಿ ಯುದ್ಧ ಮಾಡುವೆನು; ನಿನ್ನ ಮಕ್ಕಳನ್ನು ರಕ್ಷಿಸುವೆನು.


ನೀನು ಹದ್ದಿಗೆ ಹಾರಿಹೋಗಿ ಎತ್ತರವಾದ ಬೆಟ್ಟಗಳ ಮೇಲೆ ಗೂಡನ್ನು ಕಟ್ಟಿಕೊಳ್ಳಲು ಆಜ್ಞಾಪಿಸುವೆಯಾ?


ದುರಾಭಿಮಾನಿಯನ್ನು ಅವನ ದುರಾಭಿಮಾನವೇ ನಾಶಪಡಿಸುವುದು. ಆದರೆ ದೀನನನ್ನು ಬೇರೆ ಜನರು ಗೌರವಿಸುವರು.


ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.


ಜನರು ಬಿಸಾಡಿ, ಸಂದುಗೊಂದುಗಳಲ್ಲಿ ಅಡಗಿಕೊಳ್ಳುವರು. ಯೆಹೋವನಿಗೂ ಆತನ ಮಹಾಶಕ್ತಿಗೂ ಹೆದರಿ ಅವರು ಹಾಗೆ ಮಾಡುವರು. ಯೆಹೋವನು ಎದ್ದು ಭೂಮಿಯನ್ನು ಅಲುಗಾಡಿಸುವ ಸಮಯದಲ್ಲಿ ಇವೆಲ್ಲಾ ಸಂಭವಿಸುವವು.


ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ, ನಿನ್ನ ರೂಪವನ್ನು ತೋರಿಸು; ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರ ಎಷ್ಟೋ ಮಧುರ! ನಿನ್ನ ರೂಪ ಎಷ್ಟೋ ಅಂದ!


ಒಬ್ಬನ ಮಾತುಗಳು ಜೀವವನ್ನು ಉಳಿಸಬಲ್ಲವು ಅಥವಾ ಮರಣವನ್ನು ತರಬಲ್ಲವು. ಜನರು ತಮ್ಮ ಮಾತಿನ ಫಲವನ್ನು ಅನುಭವಿಸಲೇಬೇಕು.


ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತುಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಆ ಸ್ಥಳಕ್ಕೆ ಇಂದಿಗೂ ಅದೇ ಹೆಸರಿದೆ.


ಒಬ್ಬನು ಹಕ್ಕಿಯ ಗೂಡಿನಿಂದ ಮೊಟ್ಟೆಗಳನ್ನು ತೆಗೆಯುವಂತೆ ನಾನು ಅವರ ಐಶ್ವರ್ಯವನ್ನು ತೆಗೆದುಕೊಂಡಿರುವೆನು. ಹಕ್ಕಿಯು ತನ್ನ ಗೂಡಿಗೆ ಯಾವ ಭದ್ರತೆಯನ್ನೂ ಮಾಡದೆ ಆಹಾರಕ್ಕಾಗಿ ಹೋಗುವದು, ರೆಕ್ಕೆಯಾಡಿಸಿ, ಬಾಯಿದೆರೆದು, ಕಿಚುಗುಟ್ಟಿ ಮೊಟ್ಟೆಯನ್ನು ಶತ್ರುವಿನಿಂದ ರಕ್ಷಿಸಲು ಅದು ಗೂಡಿನಲ್ಲಿರದು, ಆದ್ದರಿಂದ ಅದರ ಮೊಟ್ಟೆಗಳು ತೆಗೆಯಲ್ಪಡುವವು. ಅದೇ ರೀತಿಯಲ್ಲಿ ನಾನು ಭೂಮಿಯ ಮೇಲಿನ ಜನರನ್ನು ಕೈದಿಗಳನ್ನಾಗಿ ಮಾಡುವಾಗ ನನ್ನನ್ನು ತಡೆಯುವವರು ಇಲ್ಲವೇ ಇಲ್ಲ.”


ಎದೋಮೇ, ನಾನು ನಿನಗೆ ಪ್ರಮುಖನಾಗಲು ಬಿಡುವುದಿಲ್ಲ. ಪ್ರತಿಯೊಬ್ಬರು ನಿನ್ನನ್ನು ದ್ವೇಷಿಸುವರು.


“ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.


ಬಾಬಿಲೋನ್ ನಗರವು ಗಗನ ಚುಂಬಿಯಾಗಿ ಬೆಳೆಯಬಹುದು. ಅದು ತನ್ನ ಕೋಟೆಗಳನ್ನು ಭದ್ರಪಡಿಸಿಕೊಳ್ಳಬಹುದು. ಆದರೆ ಆ ನಗರದ ವಿರುದ್ಧ ಯುದ್ಧಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಆ ಜನರು ಅದನ್ನು ನಾಶಮಾಡುವರು.” ಇದು ಯೆಹೋವನ ನುಡಿ.


“ಹೌದು, ಕೆಟ್ಟದ್ದನ್ನು ಮಾಡಿ ಧನಿಕನಾದವನಿಗೆ ಬಹಳ ಕೇಡಾಗುವುದು. ಆ ಮನುಷ್ಯನು ಒಂದು ಸುರಕ್ಷಿತವಾದ ಸ್ಥಳದಲ್ಲಿ ವಾಸಿಸಲು ಇದನ್ನೆಲ್ಲಾ ಮಾಡುತ್ತಾನೆ. ಹಾಗೆ ಮಾಡುವದರಿಂದ ಬೇರೆ ಜನರು ಅವನಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲವೆಂದು ಅವನು ತಿಳಿಯುತ್ತಾನೆ. ಆದರೆ ಕೆಟ್ಟ ಸಂಗತಿಗಳು ಅವನಿಗೆ ಸಂಭವಿಸುವವು.


ಏಸಾವನನ್ನು ನಾನು ಸ್ವೀಕರಿಸಲಿಲ್ಲ. ಏಸಾವನಿರುವ ಬೆಟ್ಟಪ್ರದೇಶವನ್ನು ನಾನು ಹಾಳುಮಾಡಿದೆನು. ಈಗ ಕಾಡುನಾಯಿಗಳು ಮಾತ್ರ ಅಲ್ಲಿ ವಾಸಿಸುತ್ತವೆ.” ಎಂದು ಹೇಳಿದನು.


“‘ನಾವು ಒಳ್ಳೆಯ ಯೋಧರಾಗಿದ್ದೇವೆ. ನಾವು ಯುದ್ಧವೀರರಾಗಿದ್ದೇವೆ’ ಎಂದು ನೀವು ಹೇಳಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು