ಯೆರೆಮೀಯ 49:2 - ಪರಿಶುದ್ದ ಬೈಬಲ್2 ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆದುದರಿಂದ ಇಗೋ ಕೇಳಿ: ನನ್ನ ಅಪ್ಪಣೆಯ ಮೇರೆಗೆ ಶತ್ರುಗಳು ರಬ್ಬಾ ಎಂಬ ಅಮ್ಮೋನ್ಯರ ನಗರದ ಮೇಲೆ ಬಿದ್ದು ಯುದ್ಧ ಘೋಷಣೆ ಮಾಡುವ ದಿನಗಳು ಬರುವುವು. ಆ ನಗರ ಹಾಳುದಿಬ್ಬವಾಗುವುದು. ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಯೇಲ್ ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಸರ್ವೇಶ್ವರನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆದದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು ಯುದ್ಧಘೋಷಮಾಡುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವದು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.
ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.