ಯೆರೆಮೀಯ 49:22 - ಪರಿಶುದ್ದ ಬೈಬಲ್22 ಯೆಹೋವನು ತಾನು ಎರಗಬೇಕಾದ ಪ್ರಾಣಿಯ ಮೇಲೆ ಹಾರಾಡುವ ರಣಹದ್ದಿನಂತೆ ಇರುವನು. ಆತನು ಬೊಚ್ರ ನಗರದ ಮೇಲೆ ತನ್ನ ರೆಕ್ಕೆಗಳನ್ನು ಹರಡುವ ರಣಹದ್ದಿನಂತಿದ್ದಾನೆ. ಆ ಸಮಯದಲ್ಲಿ ಎದೋಮಿನ ಸೈನಿಕರು ಭಯಪಡುವರು. ಪ್ರಸವವೇದನೆಪಡುವ ಹೆಂಗಸಿನಂತೆ ಅವರು ಭಯದಿಂದ ಗೋಳಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಶತ್ರುವು ಬೊಚ್ರದ ಮೇಲೆ ಎರಗಲು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರಿ ಏರುವನು. ಆ ದಿನದಂದು ಎದೋಮಿನ ಶೂರರ ಎದೆ ಹೆರುವ ಹೆಂಗಸಿನ ಎದೆಯಂತೆ ಅದರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋವಿುನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮಶಾಲಿಗಳು ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವುದು. ಅಧ್ಯಾಯವನ್ನು ನೋಡಿ |
ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.