Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:24 - ಪರಿಶುದ್ದ ಬೈಬಲ್‌

24 ದಮಸ್ಕ ನಗರವು ನಿಬರ್ಲವಾಗಿದೆ. ಜನರು ಓಡಿಹೋಗಬಯಸುತ್ತಾರೆ, ಜನರು ಗಾಬರಿಗೊಂಡಿದ್ದಾರೆ. ಪ್ರಸವವೇದನೆಪಡುವ ಸ್ತ್ರೀಯಂತೆ ಸಂಕಟಪಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ದಮಸ್ಕಸ್ ಕುಂದಿದೆ, ಓಡಿಹೋಗಲು ಸಿದ್ಧವಿದೆ. ಅದಕ್ಕೆ ನಡುಕ ಹುಟ್ಟಿದೆ. ಪ್ರಸವವೇದನೆಗೆ, ಕಷ್ಟಸಂಕಟಕ್ಕೆ ಅದು ಒಳಗಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನಾವ್ಯಥೆಗಳಿಗೆ ಒಳಗಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದಮಸ್ಕವು ನಿತ್ರಾಣವಾಯಿತು; ಓಡಿಹೋಗುವುದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡಿದುಕೊಂಡಿದೆ; ಹೆರುವ ಸ್ತ್ರೀಯ ಹಾಗೆ ಸಂಕಟವೂ, ವೇದನೆಗಳೂ ಅದನ್ನು ಹಿಡಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:24
13 ತಿಳಿವುಗಳ ಹೋಲಿಕೆ  

ಇವೆಲ್ಲಾ ಪ್ರಸವವೇದನೆಯ ಆರಂಭವಷ್ಟೇ.


ಪ್ರತಿಯೊಬ್ಬರೂ ಭಯಪೀಡಿತರಾಗುವರು. ಯಾತನೆವೇದನೆಗಳು ಅವರನ್ನು ಆಕ್ರಮಿಸುವವು. ಪ್ರಸವವೇದನೆಯಿಂದ ನರಳುವ ಹೆಂಗಸಿನಂತೆ ಅವರ ಹೊಟ್ಟೆಯಲ್ಲಿ ನೋವು ಉಂಟಾಗುವದು; ಅವರ ಮುಖಗಳು ಬೆಂಕಿಯಂತೆ ಕೆಂಪಗಾಗುವವು. ಭಯದ ಮುಖವು ತಮ್ಮ ನೆರೆಯವರಲ್ಲಿಯೂ ಇರುವದನ್ನು ನೋಡಿ ಜನರು ಆಶ್ಚರ್ಯಪಡುವರು.


ಆ ಸೈನ್ಯದ ಬಗ್ಗೆ ಸಮಾಚಾರವನ್ನು ನಾವು ಕೇಳಿದ್ದೇವೆ. ಭಯದಿಂದ ನಾವು ಅಸಹಾಯಕರಾಗಿದ್ದೇವೆ. ಕಷ್ಟಗಳಲ್ಲಿ ನಾವು ಸಿಕ್ಕಿಹಾಕಿಕೊಂಡಿದ್ದೇವೆ. ಸ್ತ್ರೀಯರ ಪ್ರಸವವೇದನೆಯಂತಿರುವ ಯಾತನೆಯಿಂದ ನಾವು ಬಳಲುತ್ತಿದ್ದೇವೆ.


ಬಾಬಿಲೋನಿನ ರಾಜನು ಆ ಸೈನ್ಯಗಳ ಬಗ್ಗೆ ಕೇಳಿ ಬಹಳ ಗಾಬರಿಗೊಂಡನು; ಹೆದರಿಕೆಯಿಂದ ಅವನ ಕೈಗಳು ಚಲಿಸದಂತಾಗಿವೆ. ಪ್ರಸವವೇದನೆಯಂತೆ ಅವನಿಗೆ ವೇದನೆಯಾಗಿದೆ.”


ಬಳಿಕ ದೇವರಾದ ಯೆಹೋವನು ಸ್ತ್ರೀಗೆ, “ನೀನು ಗರ್ಭಿಣಿಯಾಗಿರುವಾಗ ಬಹು ಸಂಕಟಪಡುವೆ. ನೀನು ಮಕ್ಕಳನ್ನು ಹೆರುವಾಗ ಬಹಳ ವೇದನೆಪಡುವೆ. ನೀನು ಗಂಡನನ್ನು ಬಹಳವಾಗಿ ಇಷ್ಟಪಡುವೆ; ಆದರೆ ಅವನು ನಿನ್ನನ್ನು ಆಳುವನು” ಎಂದನು.


ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.


“ಈ ಪ್ರಶ್ನೆಯನ್ನು ಕೇಳಿ ಪರಿಶೀಲಿಸಿರಿ. ಪುರುಷನು ಮಗುವಿಗೆ ಜನ್ಮಕೊಡಬಲ್ಲನೆ? ಖಂಡಿತವಾಗಿಯೂ ಇಲ್ಲ. ಹಾಗಾದರೆ ಪ್ರತಿಯೊಬ್ಬ ಬಲಿಷ್ಠನೂ ಪ್ರಸವವೇದನೆಪಡುತ್ತಿರುವ ಸ್ತ್ರೀಯಂತೆ ತನ್ನ ಹೊಟ್ಟೆಯನ್ನು ಏಕೆ ಹಿಡಿದುಕೊಂಡಿದ್ದಾನೆ? ಪ್ರತಿಯೊಬ್ಬನ ಮುಖವು ಸತ್ತವನ ಮುಖದಂತೆ ಏಕೆ ಬಿಳಿಚಿದೆ? ಏಕೆಂದರೆ ಜನರು ಬಹಳ ಭಯಪಟ್ಟಿದ್ದಾರೆ.


ಮೋವಾಬಿನ ಪಟ್ಟಣಗಳನ್ನು ಗೆದ್ದುಕೊಳ್ಳಲಾಗುವುದು. ಅಡಗಿಕೊಳ್ಳುವ ಭದ್ರವಾದ ನೆಲೆಗಳನ್ನು ವಶಪಡಿಸಿಕೊಳ್ಳಲಾಗುವುದು. ಆಗ ಮೋವಾಬಿನ ಸೈನಿಕರು ಪ್ರಸವವೇದನೆಪಡುವ ಹೆಂಗಸಿನಂತೆ ಗಾಬರಿಯಾಗುವರು.


ಯೆಹೋವನು ತಾನು ಎರಗಬೇಕಾದ ಪ್ರಾಣಿಯ ಮೇಲೆ ಹಾರಾಡುವ ರಣಹದ್ದಿನಂತೆ ಇರುವನು. ಆತನು ಬೊಚ್ರ ನಗರದ ಮೇಲೆ ತನ್ನ ರೆಕ್ಕೆಗಳನ್ನು ಹರಡುವ ರಣಹದ್ದಿನಂತಿದ್ದಾನೆ. ಆ ಸಮಯದಲ್ಲಿ ಎದೋಮಿನ ಸೈನಿಕರು ಭಯಪಡುವರು. ಪ್ರಸವವೇದನೆಪಡುವ ಹೆಂಗಸಿನಂತೆ ಅವರು ಭಯದಿಂದ ಗೋಳಾಡುವರು.


ಅವರ ಗುಡಾರಗಳನ್ನು ಮತ್ತು ಹಿಂಡುಗಳನ್ನು ತೆಗೆದುಕೊಂಡು ಹೋಗಲಾಗುವುದು. ಅವರ ಗುಡಾರಗಳನ್ನು, ಅವರ ಎಲ್ಲಾ ವಸ್ತುಗಳನ್ನು ಎತ್ತಿಕೊಂಡು ಹೋಗಲಾಗುವುದು. ಅವರ ಶತ್ರುಗಳು ಒಂಟೆಗಳನ್ನು ತೆಗೆದುಕೊಂಡು ಹೋಗುವರು. ‘ನಮ್ಮ ಸುತ್ತಲೂ ಭಯಂಕರ ಘಟನೆಗಳು ನಡೆಯುತ್ತಿವೆ’ ಎಂದು ತಮ್ಮತಮ್ಮಲ್ಲಿಯೇ ಕೂಗಿಕೊಳ್ಳುವರು.


ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ ನಾನು ಏಲಾಮನ್ನು ಚೂರುಚೂರು ಮಾಡುವೆನು. ಏಲಾಮ್ಯರನ್ನು ಕೊಲ್ಲಬೇಕೆಂದಿರುವ ಜನರೆದುರಿಗೆ ನಾನು ಎಲಾಮ್ಯರನ್ನು ಮುರಿದುಬಿಡುವೆನು. ನಾನು ಅವರ ಮೇಲೆ ಭಯಂಕರವಾದ ವಿಪತ್ತುಗಳನ್ನು ತರುವೆನು. ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ನಾನು ಅವರಿಗೆ ತೋರಿಸುವೆನು.” ಇದು ಯೆಹೋವನ ನುಡಿ. “ಏಲಾಮನ್ನು ಬೆನ್ನಟ್ಟಲು ನಾನೊಂದು ಖಡ್ಗವನ್ನು ಕಳುಹಿಸುವೆನು. ನಾನು ಏಲಾಮ್ಯರನ್ನೆಲ್ಲ ಕೊಂದುಹಾಕುವವರೆಗೆ ಆ ಖಡ್ಗವು ಅವರನ್ನು ಬೆನ್ನಟ್ಟುವುದು.


ಅವನಿಗಾಗುವ ಶಿಕ್ಷೆಯು ಒಬ್ಬ ಸ್ತ್ರೀಯ ಪ್ರಸವವೇದನೆಯಂತಿರುವದು. ಅವನು ಜಾಣನಾದ ಮಗನಾಗಿರುವದಿಲ್ಲ; ಹುಟ್ಟುವ ಸಮಯ ಬಂದರೂ ಅವನು ಜೀವಿಸುವದಿಲ್ಲ.


ಜನಾಂಗಗಳು ಇತರ ಜನಾಂಗಗಳ ವಿರುದ್ಧ ಹೋರಾಡುತ್ತವೆ. ರಾಜ್ಯಗಳು ಇತರ ರಾಜ್ಯಗಳ ವಿರುದ್ಧ ಹೋರಾಡುತ್ತವೆ. ಜನರಿಗೆ ತಿನ್ನಲು ಏನೂ ಆಹಾರವಿಲ್ಲದಂಥ ಕಾಲ ಬರುತ್ತದೆ. ಅನೇಕ ಸ್ಥಳಗಳಲ್ಲಿ ಭೂಕಂಪಗಳಾಗುತ್ತವೆ. ಈ ಸಂಗತಿಗಳು ಪ್ರಸವವೇದನೆಯಂತಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು