Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:25 - ಪರಿಶುದ್ದ ಬೈಬಲ್‌

25 “ದಮಸ್ಕವು ಸಂತೋಷಭರಿತವಾದ ನಗರವಾಗಿದೆ. ಜನರು ಇನ್ನೂ ಆ ‘ಮೋಜಿನ ನಗರವನ್ನು’ ಬಿಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅಕಟಾ, ಹೆಸರುವಾಸಿಯಾದಂಥ ಆ ನನ್ನ ಮೆಚ್ಚುಗೆಯ ನಗರ ವಲಸೆಹೋಗಲಿಲ್ಲವೇಕೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅಯ್ಯೋ, ಹೆಸರುವಾಸಿಯ ಪಟ್ಟಣವು, ನನ್ನ ಇಷ್ಟದ ಪುರವು, ಏಕೆ ವಲಸೆಹೋಗಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲಾಗಿದೆ ಅಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:25
10 ತಿಳಿವುಗಳ ಹೋಲಿಕೆ  

ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’


“ಶೇಷಕನು” ಶತ್ರುಗಳ ವಶವಾಗುವನು. ಲೋಕದಲ್ಲಿಯೇ ಅತ್ಯುತ್ತಮವಾದ ಮತ್ತು ಹೆಮ್ಮೆಪಡುವ ದೇಶವು ವೈರಿಗಳ ಕೈವಶವಾಗುವುದು. ಬೇರೆ ಜನಾಂಗದ ಜನರು ಬಾಬಿಲೋನಿನ ಕಡೆಗೆ ನೋಡಿದಾಗ ಅಲ್ಲಿನ ಸ್ಥಿತಿಗತಿಗಳನ್ನು ಕಂಡು ಭಯಪಡುವರು.


ಅವಳ ಯಾತನೆಯನ್ನು ಕಂಡು ರಾಜರುಗಳು ಭಯದಿಂದ ದೂರನಿಂತು ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ, ಬಲಿಷ್ಠವಾದ ಬಾಬಿಲೋನ್ ಪಟ್ಟಣವೇ, ಒಂದೇ ಗಳಿಗೆಯಲ್ಲಿ ನಿನಗೆ ದಂಡನೆ ಆಯಿತಲ್ಲಾ!’


“ಮೋವಾಬ್ ನುಚ್ಚುನೂರಾಯಿತು. ಜನರು ಕಿರುಚುತ್ತಿದ್ದಾರೆ. ಮೋವಾಬ್ ಶರಣಾಗತವಾಯಿತು. ಮೋವಾಬ್ ಈಗ ನಾಚಿಕೆಪಡುತ್ತಿದೆ. ಜನರು ಮೋವಾಬನ್ನು ತಮಾಷೆ ಮಾಡುತ್ತಾರೆ. ಆದರೆ ಇಲ್ಲಿ ನಡೆದ ಘಟನೆಗಳು ಅವರನ್ನು ಭೀತರನ್ನಾಗಿ ಮಾಡಿವೆ.”


ಇನ್ನು ಮುಂದೆ ಮೋವಾಬ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ. ಹೆಷ್ಬೋನ್ ಪಟ್ಟಣದ ಜನರು ಮೋವಾಬನ್ನು ಸೋಲಿಸುವ ಯುಕ್ತಿ ಮಾಡುವರು. ಅವರು ಆ ಜನಾಂಗವನ್ನು ನಾಶಮಾಡುವ ಆಲೋಚನೆ ಮಾಡುವರು. ಮದ್ಮೆನೆ ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನ್ನನ್ನು ಬೆನ್ನಟ್ಟುವದು.


ಆರಂಭದಲ್ಲಿ ನಿಮಗಿದ್ದಂತಹ ನ್ಯಾಯಾಧೀಶರನ್ನು ನಾನು ತಿರುಗಿ ಬರಮಾಡುವೆನು. ನಿಮ್ಮ ಸಲಹೆಗಾರರು ಹಿಂದಿನ ಕಾಲದ ಸಲಹೆಗಾರರಂತೆ ಇರುವರು. ಆಗ ನೀನು ‘ನ್ಯಾಯವಾದ ಮತ್ತು ನಂಬಿಗಸ್ತಿಕೆಯುಳ್ಳ ಪಟ್ಟಣ’ವೆಂದು ಕರೆಯಲ್ಪಡುವೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು