Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:27 - ಪರಿಶುದ್ದ ಬೈಬಲ್‌

27 “ದಮಸ್ಕದ ಗೋಡೆಗಳಿಗೆ ನಾನು ಬೆಂಕಿ ಹಚ್ಚುವೆನು. ಆ ಬೆಂಕಿಯು ಬೆನ್‌ಹದದನ ಭದ್ರವಾದ ಕೋಟೆಯನ್ನು ಸುಟ್ಟುಹಾಕುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ದಮಸ್ಕದ ಕೋಟೆಯಲ್ಲಿ ಬೆಂಕಿ ಹೊತ್ತಿಸುವೆನು. ಅದು ಬೆನ್‍ಹದದನ ಅರಮನೆಗಳನ್ನು ದಹಿಸಿಬಿಡುವುದು. ಇದು ಸರ್ವಶಕ್ತ ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್‍ಹದದನ ಅರಮನೆಗಳನ್ನು ದಹಿಸಿಬಿಡುವದು ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಏಕೆಂದರೆ ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ತಿಂದುಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:27
7 ತಿಳಿವುಗಳ ಹೋಲಿಕೆ  

ಈಜಿಪ್ಟಿನ ಸುಳ್ಳುದೇವರುಗಳ ಆಲಯದಲ್ಲಿ ನೆಬೂಕದ್ನೆಚ್ಚರನು ಬೆಂಕಿಯನ್ನು ಹೊತ್ತಿಸುವನು, ಅವನು ಆಲಯಗಳನ್ನು ಸುಟ್ಟು ಆ ವಿಗ್ರಹಗಳನ್ನು ತೆಗೆದುಕೊಂಡು ಹೋಗುವನು. ಕುರುಬನು ತನ್ನ ಬಟ್ಟೆಗಳಿಂದ ತಿಗಣೆ ಮತ್ತು ಹೇನುಗಳನ್ನು ತೆಗೆದುಹಾಕಿ ಸ್ವಚ್ಛಗೊಳಿಸುವಂತೆ ನೆಬೂಕದ್ನೆಚ್ಚರನು ಈಜಿಪ್ಟನ್ನು ಬಿಟ್ಟು ಹೋಗುವನು.


ಇಸ್ರೇಲನ್ನು ರಕ್ಷಿಸಲು ಒಬ್ಬನನ್ನು ಯೆಹೋವನು ಕಳುಹಿಸಿದನು. ಇಸ್ರೇಲರು ಅರಾಮ್ಯದಿಂದ ಬಿಡುಗಡೆಗೊಂಡು ಸ್ವತಂತ್ರರಾದರು. ಇಸ್ರೇಲರು ತಮ್ಮ ಸ್ವಂತ ಮನೆಗಳಿಗೆ ಹಿಂದಿರುಗಿ ಸುರಕ್ಷಿತವಾಗಿ ವಾಸಿಸಿದರು.


ಆಗ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಕೋಪಗೊಂಡು ಅರಾಮ್ಯರ ರಾಜನಾದ ಹಜಾಯೇಲನ ಮತ್ತು ಅವನ ಮಗನಾದ ಬೆನ್ಹದದನ ಅಧೀನಕ್ಕೆ ಇಸ್ರೇಲನ್ನು ಒಪ್ಪಿಸಿದನು.


ದುರಹಂಕಾರಿಯಾದ ಬಾಬಿಲೋನ್ ಎಡವಿಬೀಳುವುದು. ಅದನ್ನು ಎಬ್ಬಿಸಲು ಯಾರೂ ಸಹಾಯ ಮಾಡುವದಿಲ್ಲ. ಅದರ ಪಟ್ಟಣಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಆ ಬೆಂಕಿಯು ಅದರ ಸುತ್ತಮುತ್ತಲಿನ ಎಲ್ಲರನ್ನೂ ಸುಟ್ಟುಬಿಡುವದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು