28 ಈ ಸಂದೇಶವು ಕೇದಾರ್ ಕುಲವನ್ನೂ ಹಾಚೋರಿನ ಅಧಿಪತಿಗಳನ್ನೂ ಕುರಿತದ್ದು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಅವರನ್ನು ಸೋಲಿಸಿದನು. ಯೆಹೋವನು ಹೀಗೆನ್ನುತ್ತಾನೆ: “ಹೋಗಿ ಕೇದಾರ ಕುಲದವರ ಮೇಲೆ ಧಾಳಿ ಮಾಡಿರಿ. ಪೂರ್ವದಿಕ್ಕಿನ ಜನರನ್ನು ನಾಶಮಾಡಿರಿ.
28 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
28 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೋಲಿಸಿದ ಕೇದಾರನ್ನು ಮತ್ತು ಹಾಜೋರಿನ ರಾಷ್ಟ್ರಗಳನ್ನು ಕುರಿತ ಹೇಳಿಕೆ: “ಏಳಿ, ಕೇದಾರಿಗೆ ಹೋಗಿ, ಪೂರ್ವ ದೇಶದವರನ್ನು ಹಾಳುಮಾಡಿ,” ಎಂದು ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಆಜ್ಞೆಮಾಡಿದ್ದಾರೆ.
ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.
ಯೆಹೋವನ ಒಂದು ಸಂದೇಶವನ್ನು ಕೇಳಿದೆ. ಯೆಹೋವನು ಎಲ್ಲಾ ಜನಾಂಗಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದನು. ಆ ಸಂದೇಶ ಹೀಗಿದೆ: “ನಿಮ್ಮ ಸೈನ್ಯಗಳನ್ನು ಒಂದಡೆ ಸೇರಿಸಿರಿ. ಯುದ್ಧಕ್ಕೆ ಸಿದ್ಧರಾಗಿರಿ. ಎದೋಮ್ ಜನಾಂಗದ ವಿರುದ್ಧ ದಂಡಯಾತ್ರೆ ಮಾಡಿರಿ.
“ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.”
ಯೋಬನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಒಂದು ಸಾವಿರ ಎತ್ತುಗಳೂ ಮತ್ತು ಐನೂರು ಹೆಣ್ಣುಕತ್ತೆಗಳೂ ಇದ್ದವು. ಅವನಿಗೆ ಅನೇಕ ಮಂದಿ ಸೇವಕರಿದ್ದರು. ಪೂರ್ವ ದೇಶದವರಲ್ಲೆಲ್ಲಾ ಯೋಬನು ಮಹಾ ಐಶ್ವರ್ಯವಂತನಾಗಿದ್ದನು.